Home
ಸುದ್ದಿಜಾಲ

ಪ್ರಸ್ತುತ ನೀವು ಖರೀದಿಸಬಹುದಾದ ಮಧ್ಯಮ ಶ್ರೇಣಿಯ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಗಳ ಆಯ್ಕೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಬಜೆಟ್‌ ಬೆಲೆಯ ಜೊತೆಗೆ ಮಧ್ಯಮ ಮತ್ತು ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಖರೀದಿಸಬಹುದಾಗಿದೆ. ಇದರಲ್ಲಿ ಮದ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನ ಸೆಳೆದಿವೆ. ಇದೇ ಕಾರಣಕ್ಕೆ ಪ್ರಮುಖ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಒನ್‌ಪ್ಲಸ್‌, ಐಕ್ಯೂ, ರಿಯಲ್‌ಮಿ, ಮೊಟೊರೊಲಾ, ಸ್ಯಾಮ್‌ಸಂಗ್‌ ಕಂಪೆನಿಗಳು ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ನಿಮ್ಮ ಅವಶ್ಯಕತೆಗೆ ಅನುಗುಣವಾಗಿ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಸಾಧ್ಯವಾಗಲಿದೆ. ಸದ್ಯ ನೀವು 25,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z6 ಪ್ರೊ 5G

ಐಕ್ಯೂ Z6 ಪ್ರೊ 5G

ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಕೂಡ ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇನ್ನು ಈ ಫೋನ್‌ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 23,999ರೂ. ಬೆಲೆಗೆ ಲಭ್ಯವಾಗಲಿದೆ.

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಒನ್‌ಪ್ಲಸ್‌ CE 2 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಇದು 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 23,999 ರೂ.ಬೆಲೆಗೆ ಲಭ್ಯವಾಗಲಿದೆ.

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.43 ಇಂಚಿನ 90Hz AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋ ಎಡ್ಜ್ 20

ಮೋಟೋ ಎಡ್ಜ್ 20

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3-ಪ್ರೊಟೆಕ್ಷನ್‌ ಹೊಂದಿದ್ದು, 144Hz ರಿಫ್ರೆಶ್ ದರ ಮತ್ತು 576Hz ಟಚ್ ಲೇಟೆನ್ಸಿ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ 8GB + 128GB ರೂಪಾಂತರದ ಆಯ್ಕೆಯು 24,999ರೂ. ಬೆಲೆಯನ್ನು ಹೊಂದಿದೆ.

ಶಿಯೋಮಿ 11i

ಶಿಯೋಮಿ 11i

ಶಿಯೋಮಿ 11i ಸ್ಮಾರ್ಟ್‌ಫೋನ್‌ ಶಿಯೋಮಿ 11i 5G ಸ್ಮಾರ್ಟ್‌ಫೋನ್‌ ಕೂಡ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ ಬೆಲೆ 24,999ರೂ. ಆಗಿದೆ.

Best Mobiles in India

English summary
Another smartphone in our list of best smartphones under Rs 25,000 is the Nord CE 2 5G.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+