ಭಾರತದಲ್ಲಿ ಈ ತಿಂಗಳು ನೀವು 25,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು !

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಲಾಂಚ್‌ ಮಾಡುತ್ತಲೇ ಬಂದಿವೆ. ಇನ್ನು ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿದೆ. ಇನ್ನು 2021ರ ವರ್ಷಾಂತ್ಯದಲ್ಲಿ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳು 2022ರ ಪ್ರಾರಂಭದಲ್ಲಿಯೂ ಕೂಡ ಸಾಕಷ್ಟು ಟ್ರೆಂಡ್‌ ಸೃಷ್ಟಿಸಿವೆ. ಈ ವರ್ಷದ ಆರಂಭದಲ್ಲಿ ಇನ್ನು ಹೊಸತನದ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಗೆ ಸಿದ್ದವಾಗಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಕುತೂಹಲವನ್ನು ಹೆಚ್ಚಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಆದರೂ ಗ್ರಾಹಕರು ಮಾತ್ರ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಅದರಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಿಡ್‌ ರೇಂಜ್‌ ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಹಾಗಾದ್ರೆ ಭಾರತದಲ್ಲಿ ಜನವರಿ ತಿಂಗಳಿನಲ್ಲಿ ನೀವು 20,000 ರಿಂದ 25,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 5G

ಒನ್‌ಪ್ಲಸ್‌ ನಾರ್ಡ್‌ CE 5G

ಒನ್‌ಪ್ಲಸ್‌ ನಾರ್ಡ್‌ CE 5G ಸ್ಮಾರ್ಟ್‌ಫೋನ್‌ ಪ್ರಸ್ತುತ 24,999.ರೂ.ಗಳಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೋನಿ ಐಎಂಎಕ್ಸ್ 471 ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಒನ್‌ಪ್ಲಸ್‌ ನಾರ್ಡ್‌ CE 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಮಿ 10i

ಮಿ 10i

ಭಾರತದಲ್ಲಿ ಮಿ 10i ಸ್ಮಾರ್ಟ್‌ಫೋನ್‌ ಪ್ರಸ್ತುತ 21,999.ರೂ.ಗಳಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿರುವುದು ಪ್ರಮುಖ ಹೈಲೈಟ್‌ ಆಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜಸ್ಟ್‌ 58 ನಿಮಿಷದಲ್ಲಿ 100% ವರೆಗೂ ಬ್ಯಾಟರಿ ಚಾರ್ಜ್‌ ಆಗುವ ಸಾಮರ್ಥ್ಯ ಪಡೆದಿದೆ.

ಐಕ್ಯೂ Z5

ಐಕ್ಯೂ Z5

ಐಕ್ಯೂ Z5 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರಸ್ತುತ 23,990ರೂ. ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರಿಯಲ್‌ಮಿ X7 5G

ರಿಯಲ್‌ಮಿ X7 5G

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್‌ ಪ್ರಸ್ತುತ 19,999.ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

Best Mobiles in India

English summary
Best smartphones under Rs 25,000: There are several smartphones to choose from in the market.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X