ಭಾರತದಲ್ಲಿ 30,000ರೂ.ಒಳಗೆ ನೀವು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಆಗುತ್ತಲೆ ಇದೆ. ಹೊಸ ವಿನ್ಯಾಸ, ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಸಾಕಷ್ಟು ಸೌಂಡ್‌ ಮಾಡುತ್ತಿದೆ. ಆದರೂ ಬಳಕೆದಾರರು ಮಾತ್ರ ತಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳನ್ನು ಮಾತ್ರ ಆಯ್ಕೆ ಮಾಡುತ್ತಾರೆ. ಅದರಲ್ಲೂ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗಿಂತ ಮಿಡ್‌ ರೇಂಜ್‌ ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಇದರಲ್ಲಿ ಸ್ಯಾಮ್‌ಸಂಗ್‌, ಒನ್‌ಪ್ಲಸ್‌, ಶಿಯೋಮಿಯಂತಹ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಸೇರಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆ ಹಾಗೂ ಮಿಡ್‌ ರೇಂಜ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮ 5G ಸ್ಮಾರ್ಟ್‌ಫೋನ್‌ಗಳನ್ನು ಕೂಡ 30,000ಕ್ಕಿಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಿವೆ. ಸದ್ಯ ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ನೀವು 30,000ರೂ.ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3-ಪ್ರೊಟೆಕ್ಷನ್‌ ಹೊಂದಿದ್ದು, 144Hz ರಿಫ್ರೆಶ್ ದರ ಮತ್ತು 576Hz ಟಚ್ ಲೇಟೆನ್ಸಿ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ. ಪ್ರಸ್ತುತ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 27,999ರೂ.ಬೆಲೆ ಹೊಂದಿದೆ.

ಶಿಯೋಮಿ ಮಿ 11X 5G

ಶಿಯೋಮಿ ಮಿ 11X 5G

ಶಿಯೋಮಿ ಮಿ 11X 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ.ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33 W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಸದ್ಯ ಭಾರತದಲ್ಲಿ ಶಿಯೋಮಿ ಮಿ 11X 5G ಸ್ಮಾರ್ಟ್‌ಫೋನ್‌ 8GB RAM ಮತ್ತು 128 GB ಸ್ಟೋರೇಜ್‌ ಬೆಲೆ 26,990ರೂ ಆಗಿದೆ.

ಒನ್‌ಪ್ಲಸ್‌ ನಾರ್ಡ್‌2

ಒನ್‌ಪ್ಲಸ್‌ ನಾರ್ಡ್‌2

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಪ್ರಸ್ತುತ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 29,999ರೂ.ಬೆಲೆ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಒಂದು UI 3 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಜೊತೆಗೆ ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ 8GB RAM ಮತ್ತು 128 GB ಸ್ಟೋರೇಜ್‌ ಬೆಲೆ 29,990ರೂ.ಆಗಿದೆ.

ರಿಯಲ್‌ಮಿ X7 ಮ್ಯಾಕ್ಸ್ 5G

ರಿಯಲ್‌ಮಿ X7 ಮ್ಯಾಕ್ಸ್ 5G

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯನ್ನು ಬೆಂಬಲಿಸಲಿದೆ. ಪ್ರಸ್ತುತ ಭಾರತದ ಮಾರುಕಟ್ಟೆಯಲ್ಲಿ 8GB RAM ಮತ್ತು 128 GB ಸ್ಟೋರೇಜ್‌ ಆಯ್ಕೆಗೆ 26,999ರೂ.ಬೆಲೆ ಹೊಂದಿದೆ.

Best Mobiles in India

English summary
best smartphones under Rs 30,000 this month is even more impressive than last quarter's.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X