Home
ಸುದ್ದಿಜಾಲ

ಭಾರತದಲ್ಲಿ 30,000ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ಇದಲ್ಲದೆ ಇನ್ನು ಅನೇಕ ಜನಪ್ರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿವೆ. ಆದರೂ ಸ್ಮಾರ್ಟ್‌ಫೋನ್‌ ಪ್ರಿಯರು ಮಿಂಡ್‌ ರೇಂಜ್‌ ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಹೆಚ್ಚಿನ ಒಲವನ್ನು ಹೊಂದಿದ್ದಾರೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಸ್ಮಾರ್ಟ್‌ಫೋನ್‌ ವಲಯದಲ್ಲಿ ಅನೇಕ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳು ಪ್ರಸಿದ್ಧಿಯನ್ನು ಪಡೆದಿವೆ. ಈ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿವೆ. ಇನ್ನು ಸ್ಮಾರ್ಟ್‌ಫೋನ್‌ ಖರೀದಿಸುವಾಗ ಬೆಲೆಯೂ ಕೂಡ ಪ್ರಾಮುಖ್ಯತೆ ಹೊಂದಿದೆ. ಸದ್ಯ ಮಾರುಕಟ್ಟೆಯಲ್ಲಿ 20,000ರೂ. ಹಾಗೂ 30,000ರೂ.ಗಳ ಬೆಲೆ ಅಡಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಹಾಗಾದ್ರೆ ಮಾರ್ಚ್‌ ತಿಂಗಳಲ್ಲಿ 30,000ರೂ. ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 23,999ರೂ.ಗಳಿಂದ ಪ್ರಾರಂಭವಾಗುತ್ತದೆ.

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲಿಸಲಿದೆ. ಇದಲ್ಲದೆ 16-ಮೆಗಾಪಿಕ್ಸೆಲ್ ಸೋನಿ IMX471 ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS, USB-Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ 6GB + 128GB ರೂಪಾಂತರದ ಆಯ್ಕೆಯ ಬೆಲೆ 24,999ರೂ.ಆಗಿದೆ.

ಒಪ್ಪೋ ರೆನೊ 7

ಒಪ್ಪೋ ರೆನೊ 7

ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್‌ ರೆಸ್ಪಾನ್ಸ್‌ ರೇಟ್‌ ಹಾಗೂ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 900 ಪ್ರೊಸೆಸರ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಸಾಮರ್ಥ್ಯವನ್ನು ನೀವು ಹೆಚ್ಚು ಅಗತ್ಯವಿರುವಾಗ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್‌-ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ ಮಿ 11i ಹೈಪರ್‌ ಚಾರ್ಜ್

ಶಿಯೋಮಿ ಮಿ 11i ಹೈಪರ್‌ ಚಾರ್ಜ್

ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಡ್ಯುಯಲ್-ಸೆಲ್ ಲಿಥಿಯಂ ಪಾಲಿಮರ್ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 26,999 ರೂ.ಆಗಿದೆ.

Best Mobiles in India

English summary
The list of best smartphones under Rs 30,000 for March has OnePlus Nord CE 2 and Realme 9 Pro Plus.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+