Home
ಸುದ್ದಿಜಾಲ

ಭಾರತದಲ್ಲಿ 35,000ರೂ. ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯವಾದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹೈ ಎಂಡ್‌ ಮಾದರಿಯಿಂದ ಹಿಡಿದ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದರಲ್ಲಿ ಪ್ರಮುಖ ಬ್ರ್ಯಾಂಡ್‌ ಕಂಪೆನಿಗಳಾದ ಶಿಯೋಮಿ. ಗೂಗಲ್‌, ಐಕ್ಯೂ, ರಿಯಲ್‌ಮಿ, ಸ್ಯಾಮ್‌ಸಂಗ್‌ ಕಂಪೆನಿಯ ಫೋನ್‌ಗಳು ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿವೆ. ಇದರಲ್ಲಿ ಪ್ರೀಮಿಯಂ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಸಖತ್‌ ಸೌಂಡ್‌ ಮಾಡುತ್ತಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಬೇಡಿಕೆ ಪಡೆದುಕೊಂಡಿವೆ. 35,000ರೂ.ಬೆಲೆಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಪಡೆದಿವೆ. ಸದ್ಯ ಮಾರುಕಟ್ಟೆಯಲ್ಲಿ ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್‌ ಕಂಪೆನಿಯ ಹಲವು ಸ್ಮಾರ್ಟ್‌ಫೋನ್‌ಗಳು ಪ್ರೀಮಿಯಂ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಿದೆ. ಹಾಗಾದ್ರೆ 35,000 ಕ್ಕಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ ಮಿ 10T ಪ್ರೊ 5G

ಶಿಯೋಮಿ ಮಿ 10T ಪ್ರೊ 5G

ಶಿಯೋಮಿ ಮಿ 10T ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ 23,999ರೂ.ಗಳಿಗೆ ಲಭ್ಯವಿದೆ.

ಗೂಗಲ್‌ ಪಿಕ್ಸೆಲ್‌ 4a

ಗೂಗಲ್‌ ಪಿಕ್ಸೆಲ್‌ 4a

ಗೂಗಲ್‌ ಪಿಕ್ಸೆಲ್‌ 4a ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.81 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 730G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಈ ಫೋನ್‌ 3140mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಪ್ರಸ್ತುತ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ 26,990ರೂ.ಬೆಲೆ ಹೊಂದಿದೆ.

ಐಕ್ಯೂ 7 ಲೆಜೆಂಡ್

ಐಕ್ಯೂ 7 ಲೆಜೆಂಡ್

ಐಕ್ಯೂ 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಅಮೋಲೆಡ್‌ IPS ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲಾಶ್ ಚಾರ್ಜಿಂಗ್‌ ಬೆಂಬಲಿಸಲಿದೆ.

ರಿಯಲ್‌ಮಿ GT ನಿಯೋ 2

ರಿಯಲ್‌ಮಿ GT ನಿಯೋ 2

ರಿಯಲ್‌ಮಿ GT ನಿಯೋ 2 5G ಸ್ಮಾರ್ಟ್‌ಫೋನ್‌ 6.62-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 5G ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB ಅಥವಾ 12GB RAM ಜೊತೆಗೆ 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Smartphones under Rs. 35,000 have been offering improved almost flagship level performance.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+