ಕೈಗೆಟಕುವ ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರಿಗೂ ಅಗತ್ಯವಾದ ಡಿವೈಸ್‌ ಎನಿಸಿದೆ. ಹಿರಿಯರಿಂದ ಹಿಡಿದು ಕಿರಿಯವರೆಗೂ ಮೊಬೈಲ್‌ ಅವಶ್ಯಕವಾಗಿದೆ. ಅದರಂತೆ ಜನರು ತಮ್ಮ ಬಜೆಟ್‌ಗೆ ಅನುಗುಣವಾದ ಫೋನ್‌ ಖರೀದಿಸಲು ಬಯಸುತ್ತಾರೆ. ಕೆಲವರು ಉತ್ತಮವಾದ ಸ್ಮಾರ್ಟ್‌ಫೋನ್‌ ಖರೀದಿಸಬೇಕಾದರೆ ಹೆಚ್ಚಿನ ಹಣ ವ್ಯಯಿಸಬೇಕಾಗುತ್ತದೆ ಎಂದುಕೊಳ್ಳುತ್ತಾರೆ. ಆದರೆ ಜನರ ಅಗತ್ಯಗಳಿಗೆ ಅನುಗುಣವಾಗಿ ಬಜೆಟ್‌ ಬೆಲೆಯಲ್ಲಿಯು ಕೂಡ ಅತ್ಯುತ್ತಮವಾದ ಫೀಚರ್ಸ್‌ ನೀಡುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿವೆ.

ಸ್ಮಾರ್ಟ್‌ಫೋನ್‌

ಹೌದು, ಜನರ ಬಜೆಟ್‌ಗೆ ಅನುಗುಣವಾದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವಲ್ಲಿ ಸ್ಮಾರ್ಟ್‌ಫೋನ್‌ ತಯಾರಕರು ಸೈ ಎನಿಸಿಕೊಂಡಿದ್ದಾರೆ. ಮೊಬೈಲ್‌ ಮಾರುಕಟ್ಟೆಯಲ್ಲಿ ನಿಮ್ಮ ಕೈಗೆಟಕುವ ಬೆಲೆಯಲ್ಲಿಯೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ನಿಮಗೆ ಅವಕಾಶವಿದೆ. ಪಾಕೆಟ್‌ ಸ್ನೇಹಿ ಬೆಲೆಯಲ್ಲಿ ಆಕರ್ಷಕ ಡಿಸ್‌ಪ್ಲೇ, ಉತ್ತಮ ಪ್ರೊಸೆಸರ್‌ ಹಾಗೂ ಯೋಗ್ಯ ಬ್ಯಾಟರಿ ಬಾಳಿಕೆ ನೀಡುವ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗಲಿವೆ. ಈ ಫೋನ್‌ಗಳು ನಿಮ್ಮ ಬೇಸಿಕ್‌ ಅಗತ್ಯಗಳನ್ನು ಪೂರೈಸುವ ಫೀಚರ್ಸ್‌ಗಳನ್ನು ಒಳಗೊಂಡಿರುತ್ತವೆ.

ಸ್ಮಾರ್ಟ್‌ಫೋನ್‌

ಒಂದು ಸ್ಮಾರ್ಟ್‌ಫೋನ್‌ ಖರೀದಿಸಬೇಕಾದರೆ 10 ಸಾವಿರಕ್ಕಿಂತ ಹೆಚ್ಚಿನ ಹಣ ಇರಬೇಕು ಅನ್ನೊದು ಕೆಲವರ ಕಲ್ಪನೆಯಾಗಿದೆ. ಆದರೆ ನೀವು 10 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿಯೂ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು. ಅದಕ್ಕೆ ತಕ್ಕಂತೆ ಬಜೆಟ್‌ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳು ಕೂಡ ದೊರೆಯುತ್ತಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ನೀವು ಕೇವಲ 7,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಟೆಲ್‌ A23 ಪ್ರೊ

ಐಟೆಲ್‌ A23 ಪ್ರೊ

ಐಟೆಲ್ A23 ಪ್ರೊ ಫೋನ್ 5 ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 1.4GHz Unisoc SC9832E SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಗೋ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಹಿಂಬದಿಯಲ್ಲಿ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ 0.3 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 2400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಪ್ರಸ್ತುತ ಅಮೆಜಾನ್‌ನಲ್ಲಿ ಈ ಫೋನ್‌ 4,290ರೂ ಬೆಲೆಯಲ್ಲಿ ಲಭ್ಯವಿದೆ.

ಟೆಕ್ನೋ ಪಾಪ್ 5 LTE

ಟೆಕ್ನೋ ಪಾಪ್ 5 LTE

ನೀವು ಬಜೆಟ್‌ ಬೆಲೆಯಲ್ಲಿ ಖರೀದಿಸಬಹುದಾದ ಮತ್ತೊಂದು ಸ್ಮಾರ್ಟ್‌ಫೋನ್‌ ಟೆಕ್ನೋ ಪಾಪ್‌ 5 LTE ಆಗಿದೆ. ಈ ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌ ಹೊಂದಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/2.4 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ಪ್ರಸ್ತುತ ಅಮೆಜಾನ್‌ನಲ್ಲಿ 6,599ರೂ.ಬೆಲೆಗೆ ಲಭ್ಯವಾಗಲಿದೆ.

I KALL Z5 4G ಸ್ಮಾರ್ಟ್‌ಫೋನ್

I KALL Z5 4G ಸ್ಮಾರ್ಟ್‌ಫೋನ್

I KALL Z5 4G ಸ್ಮಾರ್ಟ್‌ಫೋನ್ 5.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್‌ ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಪಡೆದುಕೊಂಡಿದೆ. ಪ್ರಸ್ತುತ ಅಮೆಜಾನ್‌ನಲ್ಲಿ 4,699ರೂ.ಬೆಲೆಯಲ್ಲಿ ದೊರೆಯಲಿದೆ.

I KALL Z8 ಸ್ಮಾರ್ಟ್‌ಫೋನ್

I KALL Z8 ಸ್ಮಾರ್ಟ್‌ಫೋನ್

ಅತ್ಯಂತ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಬೇಕು ಎಂದುಕೊಂಡರೆ ನೀವು I KALL Z8 ಸ್ಮಾರ್ಟ್‌ಫೋನ್ ಅನ್ನು ಖರೀದಿಸಬಹುದು. ಈ ಸ್ಮಾರ್ಟ್‌ಫೋನ್‌ 5.45 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 480 x 960 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಇದು ಕ್ವಾಡ್-ಕೋರ್ ಪ್ರೊಸೆಸರ್ ಬಲವನ್ನು ಹೊಂದಿದೆ. ಇನ್ನು ಈ ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹಾಗೂ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ನಲ್ಲಿ ಕೇವಲ 4,699ರೂ.ಬೆಲೆಗೆ ದೊರೆಯಲಿದೆ.

ರೆಡ್ಮಿ 9A ಸ್ಪೋರ್ಟ್

ರೆಡ್ಮಿ 9A ಸ್ಪೋರ್ಟ್

ನೀವು 10,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ನಿಮಗೆ ಶಿಯೋಮಿ ರೆಡ್ಮಿ 9A ಸ್ಪೋರ್ಟ್ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ನಲ್ಲಿ 6,999ರೂ.ಗಳಿಗೆ ಲಭ್ಯವಾಗಲಿದೆ.

ನೋಕಿಯಾ C01 ಪ್ಲಸ್‌ 4G

ನೋಕಿಯಾ C01 ಪ್ಲಸ್‌ 4G

ಪಾಕೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ಗಳಲ್ಲಿ ನೋಕಿಯಾ C01 ಪ್ಲಸ್‌ ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 5.45 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 3000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ಪ್ರಸ್ತುತ ಅಮೆಜಾನ್‌ನಲ್ಲಿ 6,299ರೂ.ಆಗಿದೆ.

ಜಿಯೋ ಫೋನ್ ನೆಕ್ಸ್ಟ್

ಜಿಯೋ ಫೋನ್ ನೆಕ್ಸ್ಟ್

ಕೈಗೆಟಕುವ ಬೆಲೆಯಲ್ಲಿ ಉತ್ತಮವಾದ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ನಿಮಗೆ ಜಿಯೋ ಫೋನ್‌ ನೆಕ್ಸ್ಟ್‌ ಕೂಡ ಬೆಸ್ಟ್‌ ಚಾಯ್ಸ್‌ ಆಗಿದೆ. ಈ ಫೋನ್ 5.45 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ QM215 ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಹಾಗೆಯೇ 2GB RAM ಮತ್ತು 32GB ಅಂತರ್ನಿರ್ಮಿತ ಮೆಮೊರಿಯೊಂದಿಗೆ ಬರುತ್ತದೆ. ಈ ಫೋನ್‌ನ ಮೆಮೊರಿಯನ್ನು 512GB ವರೆಗೆ ಹೆಚ್ಚಿಸಬಹುದು. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 4,589ರೂ.ಬೆಲೆಯಲ್ಲಿ ಲಭ್ಯವಿದೆ.

Best Mobiles in India

English summary
Here's best smartphones under Rs.7,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X