Just In
- 13 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 15 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 15 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 17 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Movies
ವಿಷ್ಣು ಸ್ಮಾರಕ ಉದ್ಘಾಟನೆ: ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತಿದೆ ಎಂದ ಕಿಚ್ಚ ಸುದೀಪ್
- News
Breaking; ಪಿಎಸ್ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್ ಸೂದ್ ಟ್ವೀಟ್
- Sports
U-19 Women's T20 World Cup 2023: ಭಾರತ ತಂಡವನ್ನು ಭೇಟಿ ಮಾಡಿದ 'ಚಿನ್ನದ ಹುಡುಗ' ನೀರಜ್ ಚೋಪ್ರಾ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮೀಡಿಯಾಟೆಕ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಟಾಪ್ 6 ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಖರೀದಿಸುವಾಗ ಹಲವು ಅಂಶಗಳನ್ನು ಅತ್ಯವಶ್ಯಕವಾಗಿ ಗಮನಿಸಬೇಕಾಗುತ್ತದೆ. ಇದರಲ್ಲಿ ಕ್ಯಾಮೆರಾ ಸೆಟ್‌ಅಪ್, ಡಿಸ್‌ಪ್ಲೇ ವಿನ್ಯಾಸ ಮಾತ್ರವಲ್ಲ ಸ್ಮಾರ್ಟ್‌ಫೋನ್ ಯಾವ ಪ್ರೊಸೆಸರ್ ಒಳಗೊಂಡಿದೆ ಅನ್ನೊದು ಕೂಡ ಪ್ರಮುಖವಾಗುತ್ತದೆ. ನೀವು ಖರೀದಿಸುವ ಸ್ಮಾರ್ಟ್‌ಫೋನ್ ಕಾರ್ಯದಕ್ಷತೆ ನಿರ್ಧಾರವಾಗುವುದೇ ಆ ಫೋನ್ ಒಳಗೊಂಡಿರುವ ಪ್ರೊಸೆಸರ್ ಬಲದ ಆಧಾರದ ಮೇಲೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್ ಖರೀದಿಸುವವರು ಸ್ಮಾರ್ಟ್‌ಫೋನ್ ಯಾವ ಪ್ರೊಸೆಸರ್ ಒಳಗೊಂಡಿದೆ ಅನ್ನೊದನ್ನ ಮೊದಲಿಗೆ ಪರಿಶೀಲಿಸುವುದಕ್ಕೆ ಮುಂದಾಗುತ್ತಾರೆ.

ಹೌದು, ಸ್ಮಾರ್ಟ್‌ಫೋನ್‌ಗಳ ಕಾರ್ಯದಕ್ಷತೆ ನಿರ್ಧರಿಸುವಲ್ಲಿ ಪ್ರೊಸೆಸರ್‌ಗಳ ಪಾತ್ರ ಪ್ರಮುಖವಾಗಿದೆ. ಸದ್ಯ ಟೆಕ್ ವಲಯದಲ್ಲಿ ಮೀಡಿಯಾಟೆಕ್ ಪ್ರೊಸೆಸರ್ ಸಾಕಷ್ಟು ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಮೀಡಿಯಾಟೆಕ್ ಪ್ರೊಸೆಸರ್ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿವೆ. ಅದರಲ್ಲೂ ಭಾರತದಲ್ಲಿ 5G ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳಲ್ಲಿ ಮೀಡಿಯಾಟೆಕ್ ಪ್ರೊಸೆಸರ್ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಜನಪ್ರಿಯತೆ ಪಡೆದುಕೊಂಡಿವೆ. ಹಾಗಾದ್ರೆ ಭಾರತದಲ್ಲಿ ಮೀಡಿಯಾಟೆಕ್ ಪ್ರೊಸೆಸರ್ ಒಳಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K50i 5G ಸ್ಮಾರ್ಟ್‌ಫೋನ್
ಮೀಡಿಯಾಟೆಕ್ ಪ್ರೊಸೆಸರ್ ಒಳಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ K50i ಸ್ಮಾರ್ಟ್‌ಫೋನ್ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಪ್ರೊಸೆಸರ್ ಅನ್ನು ಹೊಂದಿದೆ. ಇದು Mali-G77 MC9 GPU ಸಪೋರ್ಟ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,080mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಬೆಲೆ 25,999ರೂ.ಗಳಿಂದ ಪ್ರಾರಂಭವಾಗುತ್ತದೆ.

ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್
ಒಪ್ಪೋ ಕಂಪೆನಿಯ ರೆನೋ 8 5G ಸ್ಮಾರ್ಟ್‌ಫೋನ್ ಕೂಡ ಮೀಡಿಯಾಟೆಕ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 80W SuperVOOCTM ಚಾರ್ಜಿಂಗ್ ಅನ್ನು ಬೆಂಬಲಿಸುವ 4,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಬೆಲೆ 29,999ರೂ.ಗಳಿಂದ ಪ್ರಾರಂಭವಾಗುತ್ತದೆ.

ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್
ಮೀಡಿಯಾಟೆಕ್ ಪ್ರೊಸೆಸರ್ ಒಳಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್ ನಾರ್ಡ್ 2T 5G ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಹಾಗೆಯೇ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲವನ್ನು ಹೊಂದಿದೆ. ಜೊತೆಗೆ 80W ಸೂಪರ್ VOOC ಚಾರ್ಜಿಂಗ್ ಅನ್ನು ಬೆಂಬಲಿಸುವ 4,500mAh ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 28,999ರೂ.ಗಳಿಂದ ಪ್ರಾರಂಭವಾಗುತ್ತದೆ.

ವಿವೋ X80 5G ಸ್ಮಾರ್ಟ್‌ಫೋನ್
ವಿವೋ X80 5G ಸ್ಮಾರ್ಟ್‌ಫೋನ್ ಕೂಡ ಮೀಡಿಯಾಟೆಕ್ ಪ್ರೊಸೆಸರ್ ಬಲವನ್ನು ಪಡೆದಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು 6.78-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX866 RGBW ಸೆನ್ಸಾರ್ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ ಬೆಲೆ 54,999ರೂ.ಗಳಿಂದ ಪ್ರಾರಂಭವಾಗುತ್ತದೆ.

ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್
ಮೀಡಿಯಾ ಟೆಕ್ ಪ್ರೊಸೆಸರ್ ಒಳಗೊಂಡಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದರ ಬೆಲೆ 38,999 ರೂ.ಗಳಿಂದ ಪ್ರಾರಂಭವಾಗುತ್ತದೆ.

ಒಪ್ಪೋ ರೆನೋ 8 ಪ್ರೊ 5G ಸ್ಮಾರ್ಟ್‌ಫೋನ್
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್,4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ ಬೆಲೆ 45,999ರೂ.ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470