40,000ರೂ.ಒಳಗೆ ನೀವು ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ತೆಗೆದುಕೊಳ್ಳುವಾಗ ಯಾವುದು ತೆಗೆದುಕೊಂಡರೆ ಸೂಕ್ತ ಅಂತಾ ಆಲೋಚನೆ ಬರುವುದು ಸಾಮಾನ್ಯ. ಏಕೆಂದರೆ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹಲವು ಬ್ರ್ಯಾಂಡ್‌ಗಳ ವಿವಿಧ ಮಾದರಿಯ ಫೋನ್‌ಗಳು ಲಭ್ಯವಿದೆ. ವಿವಿಧ ಬೆಲೆಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಲಬ್ಯವಿರುವುದರಿಂದ ನೀವು ಯಾವ ಬೆಲೆಯ ಸ್ಮಾರ್ಟ್‌ಫೋನ್ ಬಯಸುತ್ತೀರಿ ಅನ್ನೊದು ಕೂಡ ಪ್ರಮುಖವಾಗಲಿದೆ. ಜೊತೆಗೆ ನೀವು ತೆಗೆದುಕೊಳ್ಳುವ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಗಮನಿಸುವುದು ಕೂಡ ಅವಶ್ಯಕವಾಗಿದೆ.

ಹೌದು, ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಇದರಲ್ಲಿ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಫೀಚರ್ಸ್‌ಗಳ ವಿಚಾರದಲ್ಲಿಯೂ ಕೂಡ ಗಮನ ಸೆಳೆದಿವೆ. ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ಸ್ಯಾಮ್‌ಸಂಗ್, ಶಿಯೋಮಿ, ಐಕ್ಯೂ, ರಿಯಲ್‌ಮಿ, ಮೊಟೊರೊಲಾ ಫೋನ್‌ಗಳು ಜನಪ್ರಿಯತೆ ಪಡೆದಿವೆ. ಹಾಗಾದ್ರೆ ಹೊಸ ಮಾದರಿಯ ಕ್ಯಾಮೆರಾ ಫೀಚರ್ಸ್ ಒಳಗೊಂಡಿರುವ 40,000ರೂ.ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ ಮಿ 11X ಪ್ರೊ
ಶಿಯೋಮಿ 11X ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಇದೆ. ಜೊತೆಗೆ ಈ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಫೋನ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ ಈ ಫೋನ್ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ರಿಯಾಯಿತಿ ದರದಲ್ಲಿ ಕೇವಲ 29,999ರೂ.ಗಳಿಗೆ ಲಭ್ಯವಿದೆ.

ರಿಯಲ್‌ಮಿ GT 2
ರಿಯಲ್‌ಮಿ GT 2 ಫೋನ್ 6.62 ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 AMOLED ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000 mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನಿನ 8GB RAM ಮತ್ತು 128GB ರೂಪಾಂತರದ ಆಯ್ಕೆಯು 34,990ರೂ.ಬೆಲೆಯನ್ನು ಹೊಂದಿದೆ.

ಒನ್‌ಪ್ಲಸ್ 9
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 6.55-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್ ಹೊಂದಿದೆ. ಇದಲ್ಲದೆ 16MP ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ 37,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಶಿಯೋಮಿ 11T ಪ್ರೊ
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್ ಹೊಂದಿದ್ದು, 10-ಬಿಟ್ ಟ್ರೂಲಿ ಕಲರ್ ಫ್ಲಾಟ್ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಎಫ್/2.2 ಲೆನ್ಸ್ 120 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಟೆಲಿಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್‌ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 39,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಐಕ್ಯೂ 9 SE
ಐಕ್ಯೂ 9 SE ಸ್ಮಾರ್ಟ್‌ಫೋನ್ 6.62 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಈ ಸ್ಮಾರ್ಟ್‌ಫೋನ್ 8GB ಮತ್ತು 128GB ರೂಪಾಂತರಕ್ಕೆ 33,990ರೂ.ಬೆಲೆಯನ್ನು ಹೊಂದಿದೆ.


Click it and Unblock the Notifications








