ಸ್ಮಾರ್ಟ್‌ಫೋನ್ ಖರೀದಿಸಬೇಕೆ? ಸ್ವಲ್ಪ ದಿನ ಕಾಯಿರಿ! ಈ ಜಬರ್ದಸ್ತ್ ಫೋನ್ ಬರಲಿವೆ!
ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡಿದ್ದೀರಾ? ಇದಕ್ಕಾಗಿ ನೀವು ಇನ್ನು ಕೆಲವು ದಿನಗಳು ಕಾಯುವುದು ಉತ್ತಮ. ಯಾಕಂದ್ರೆ ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಮೂಡಿಸುವ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಗೆ ಸಿದ್ದವಾಗಿವೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ.
ಹೌದು, ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳಲ್ಲಿ ಭಾರತದ ಮಾರುಕಟ್ಟೆಗೆ ಹಲವು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ. ಇದಕ್ಕಾಗಿ ಲಾಂಚ್ ಡೇಟ್ ಫಿಕ್ಸ್ ಮಾಡಿಕೊಂಡು ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಸಿದ್ಧತೆ ನಡೆಸಿವೆ. ಈಗಾಗಲೇ ಸ್ಮಾರ್ಟ್‌ಫೋನ್ ಫೀಚರ್ಸ್ ಟೀಸರ್ ಬಿಡುಗಡೆ ಮಾಡುವ ಮೂಲಕ ದೊಡ್ಡ ಮಟ್ಟದ ಸೌಂಡ್ ಮಾಡುತ್ತಿವೆ. ಹಾಗಾದ್ರೆ ಸದ್ಯದಲ್ಲೇ ಭಾರತಕ್ಕೆ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ N55
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದರ ಬೆಲೆ 14,999ರೂ. ಎಂದು ನಿರೀಕ್ಷಿಸಲಾಗಿದೆ.
ಇನ್ಫಿನಿಕ್ಸ್ ಹಾಟ್ 30
ಇನ್ಫಿನಿಕ್ಸ್ ಹಾಟ್ 30 ಸ್ಮಾರ್ಟ್‌ಫೋನ್ ಇದೇ ಮೇ 24ಕ್ಕೆ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದು ಮೀಡಿಯಾ ಟೆಕ್ ಹಿಲಿಯೊ G88 ಆಕ್ಟಾ ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂಬ ನಿರೀಕ್ಷೆಯಿದೆ. ಇನ್ನು ಆನ್‌ಲೈನ್‌ನಲ್ಲಿ ಫೀಚರ್ಸ್ ಲೀಕ್ ಮಾಹಿತಿಯಂತೆ 50 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಹೊಂದಿದೆ ಎನ್ನಲಾಗಿದೆ. ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 10,999ರೂ. ಇರಬಹುದು ಎಂದು ನಿರೀಕ್ಷಿಸಲಾಗಿದೆ.

ಪೊಕೊ M5 ಪ್ರೊ 5G
ಪೊಕೊ M5 ಪ್ರೊ 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಬರಲಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗಿದೆ. ಇದರ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದು 16 MP ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ.
ವಿವೋ Y35 5G
ವಿವೋ Y35 5G ಸ್ಮಾರ್ಟ್‌ಫೋನ್ 6.51 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 ಆಕ್ಟಾ ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಬೆಲೆ 14,190ರೂ. ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F44
ಸ್ಯಾಮ್‌ಸಂಗ್ ಗ್ಯಾಲಕ್ಸಿ F44 ಸ್ಮಾರ್ಟ್‌ಫೋನ್ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.4 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 9 ಆಕ್ಟಾ ಆಕ್ಟಾ ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದರ ಬೆಲೆ 11,990ರೂ. ಇರಬಹುದು ಎಂದು ಅಂದಾಜಿಸಲಾಗಿದೆ.


Click it and Unblock the Notifications








