ಏಪ್ರಿಲ್‌ ತಿಂಗಳಿನಲ್ಲಿ ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಹೊಸ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ. ಒಂದಲ್ಲ ಒಂದು ಹೊಸ ಸ್ಮಾರ್ಟ್‌ಫೋನ್‌ ಎಂಟ್ರಿ ನೀಡುವುದು ಸಾಮಾನ್ಯ. ಇನ್ನು ಪ್ರತಿವರ್ಷದಂತೆ ಈ ವರ್ಷವೂ ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇದಲ್ಲದೆ ಏಪ್ರಿಲ್‌ ತಿಂಗಳಿನಲ್ಲಿಯೂ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುವ ಸೂಚನೆ ನೀಡಿವೆ. ಅದರಲ್ಲೂ ಸ್ಯಾಮ್‌ಸಂಗ್, ರಿಯಲ್‌ಮಿ, ಒಪ್ಪೋ, ಶಿಯೋಮಿಯಂತಹ ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಲಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಏಪ್ರಿಲ್‌ ತಿಂಗಳಿನಲ್ಲಿ ಜನಪ್ರಿಯ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿರುವ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಗಲಿವೆ. ಇವುಗಳಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿವೆ. ಜೊತೆಗೆ ಕೆಲವು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಕೂಡ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಇದೇ ತಿಂಗಳು ಮಾರುಕಟ್ಟೆಗೆ ಎಂಟ್ರಿ ನೀಡುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಏಪ್ರಿಲ್‌ ತಿಂಗಳಿನಲ್ಲಿ ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ ಕೂಡ ಒಂದು. ಈ ಫೋನ್‌ನ ವಿಶೇಷತೆಯ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ತಿಂಗಳು ಇದರ "ಲೈಟ್" ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಒಪ್ಪೋ F21 ಪ್ರೊ

ಒಪ್ಪೋ F21 ಪ್ರೊ

ಒಪ್ಪೋ F21 ಪ್ರೊ ಸರಣಿಯ ಸ್ಮಾರ್ಟ್‌ಫೋನ್‌ ಏಪ್ರಿಲ್ 12 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಸರಣಿಯಲ್ಲಿ ಒಪ್ಪೋ F21 ಪ್ರೊ 4G ಮತ್ತು ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ಗಳು ಬರಲಿವೆ. ಇದರಲ್ಲಿ 4G ಮಾದರಿಯು ಸನ್‌ಸೆಟ್ ಆರೆಂಜ್ ಮತ್ತು ಕಾಸ್ಮಿಕ್ ಬ್ಲ್ಯಾಕ್‌ನಲ್ಲಿ ಲಭ್ಯವಾಗಲಿವದೆ. ಆದರೆ 5G ಮಾದರಿಯು ರೇನ್‌ಬೋ ಸ್ಪೆಕ್ಟ್ರಮ್ ಮತ್ತು ಕಾಸ್ಮಿಕ್ ಬ್ಲ್ಯಾಕ್‌ನಲ್ಲಿ ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಚಿಪ್‌ನಿಂದ ಚಾಲಿತವಾಗುತ್ತದೆ. ಜೊತೆಗೆ ಇದು 90Hz ರಿಫ್ರೆಶ್ ರೇಟ್‌ ಹೊಂದಿರುವ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಹಾಗೆಯೇ 3W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುತ್ತದೆ ಎನ್ನಲಾಗಿದೆ.

ರಿಯಲ್‌ಮಿ 9 4G

ರಿಯಲ್‌ಮಿ 9 4G

ರಿಯಲ್‌ಮಿ ಕಂಪೆನಿಯ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಇದೇ ತಿಂಗಳು ಭಾರತಕ್ಕೆ ಎಂಟ್ರಿ ನೀಡಲಿದೆ. ಈ ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ+ IPS LCD ಡಿಸ್‌ಪ್ಲೇ ಹೊಂದಿರಲಿದೆ. ಇದು ಸ್ನಾಪ್‌ಡ್ರಾಗನ್‌ 680 4G ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ. ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ ಹೊಂದಿರಲಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ರಿಯಲ್‌ಮಿ GT 2 ಪ್ರೊ

ರಿಯಲ್‌ಮಿ GT 2 ಪ್ರೊ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಏಪ್ರಿಲ್ 7 ರಂದು ಬಿಡುಗಡೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ 2k ಸ್ಯಾಮ್‌ಸಂಗ್‌ E4 ಅಮೋಲೆಡ್‌ LTPO 2.0 ಡಿಸ್‌ಪ್ಲೇ ಹೊಂದಿದೆ.ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 512 GB ಸ್ಟೋರೇಜ್‌ ಸಾಮರ್ಥ್ಯ ಹೊಂದಿರಲಿದೆ. ಈ ಫೋನ್ 9 ಲೇಯರ್ ಕೂಲಿಂಗ್ ರಚನೆಯೊಂದಿಗೆ ಸುಧಾರಿತ ಕೂಲಿಂಗ್‌ನೊಂದಿಗೆ ಬರಲಿದೆ.

ರಿಯಲ್‌ಮಿ GT ನಿಯೋ 3

ರಿಯಲ್‌ಮಿ GT ನಿಯೋ 3

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ 2022ರ ಎರಡನೇ ತ್ರೈಮಾಸಿಕದಲ್ಲಿ ಬರುವ ನಿರೀಕ್ಷೆಯಿದೆ. ಇದು ಡೈಮೆನ್ಸಿಟಿ 8100 ಪ್ರೊಸೆಸರ್‌ ಹೊಂದಿದೆ. ಜೊತೆಗೆ 4,500 mAh ಬ್ಯಾಟರಿಯೊಂದಿಗೆ ಬರುತ್ತದೆ ಎನ್ನಲಾಗಿದೆ. ಇದರ ಮತ್ತೊಂದು ರೂಪಾಂತರವು 80W ವೇಗದ ಚಾರ್ಜಿಂಗ್‌ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆಯುತ್ತದೆ. ಈ ಎರಡೂ ಫೋನ್‌ಗಳು ಕಂಪ್ಲೈಂಟ್ ಫಾಸ್ಟ್ ಚಾರ್ಜರ್‌ನೊಂದಿಗೆ ಬರಲಿವೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕೂಡ ಈಗಾಗಲೇ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 120 Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1280 ಪ್ರೊಸೆಸರ್‌ ಬಲ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6GB+128GB ವೇರಿಯಂಟ್‌ಗೆ 17,999ರೂ. ಬೆಲೆ ಹೊಂದಿದೆ. ಹಾಗೆಯೇ 8GB+128GB ರೂಪಾಂತರದ ಬೆಲೆ 19,499ರೂ. ಆಗಿದೆ. ಇನ್ನು ಈ ಫೋನ್‌ ಓಷನ್ ಬ್ಲೂ ಮತ್ತು ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಏಪ್ರಿಲ್ 8 ರಿಂದ ಅಮೆಜಾನ್ ಇಂಡಿಯಾದಲ್ಲಿ ಲಭ್ಯವಿರುತ್ತದೆ.

Best Mobiles in India

English summary
Samsung, Realme, Oppo, Xiaomi and many others looking to launch some of their latest smartphones in India during the month.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X