ವಾಟ್ಸಾಪ್‌ನಲ್ಲಿ ನಿಮ್ಮ ಆಯ್ಕೆಯ ಭಾಷೆಯನ್ನು ಬಳಸುವುದು ಹೇಗೆ?

|

ಮೆಟಾ ಒಡೆತನದ ವಾಟ್ಸಾಪ್‌ ಜನಪ್ರಿಯ ಮೆಸೇಜಿಂಗ್‌ ಅಪ್ಲಿಕೇಶನ್‌ ಎನಿಸಿಕೊಂಡಿದೆ. ಈಗಾಗಲೇ ತನ್ನ ಬಳಕೆದಾರರಿಗೆ ಹಲವು ಅನುಕೂಲಕರ ಫೀಚರ್ಸ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದಲ್ಲದೆ ಕಾಲಕ್ಕೆ ಅನುಗಣವಾಗಿ ಹೊಸ ಮಾದರಿಯ ಫೀಚರ್ಸ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಈ ಪೈಕಿ ಲೋಕಲ್‌ ಲ್ಯಾಂಗ್ವೇಜ್‌ ಬೆಂಬಲಿಸುವ ಫೀಚರ್ಸ್‌ ಸಾಕಷ್ಟು ಉಪಯುಕ್ತವಾಗಿದೆ. ಇದರಿಂದ ಇಂಗ್ಲೀಷ್‌ ಭಾಷೆ ಬರದಿರುವವರು ತಮ್ಮ ಸ್ಥಳೀಯ ಭಾಷೆಗಳಲ್ಲಿ ವಾಟ್ಸಾಪ್‌ ಅನ್ನು ಬಳಸುವುದಕ್ಕೆ ಅನುಕೂಲವಾಗಲಿದೆ.

ವಾಟ್ಸಾಪ್‌

ಹೌದು, ವಾಟ್ಸಾಪ್‌ ನಲ್ಲಿ ನೀವು ಹಲವು ಭಾಷೆಗಳನ್ನು ಆಯ್ಕೆಗಳನ್ನು ಕಾಣಬಹುದಾಗಿದೆ. ಏಕೆಂದರೆ ಭಾರತ ದೇಶದಲ್ಲಿ ಪ್ರತಿಯೊಂದು ರಾಜ್ಯವು ವಿಭಿನ್ನ ಪ್ರಾದೇಶಿಕ ಭಾಷೆಯನ್ನು ಹೊಂದಿದೆ. ಹೀಗಾಗಿ ವಾಟ್ಸಾಪ್‌ ಭಾರತದಲ್ಲಿ ಏಳು ಪ್ರಾದೇಶಿಕ ಭಾಷೆಗಳಲ್ಲಿ ಸಂವಹನ ಮಾಡುವ ಆಯ್ಕೆಯನ್ನು ನೀಡುತ್ತದೆ. ಇದರಲ್ಲಿ ಹಿಂದಿ, ತಮಿಳು, ಗುಜರಾತಿ, ಕನ್ನಡ, ಬೆಂಗಾಲಿ, ಭಾಷೆ ಸೇರಿದಂತೆ ಇತ್ಯಾದಿ ಭಾಷೆಗಳನ್ನು ಬೆಂಬಲಿಸಲಿದೆ. ಇದರಿಂದ ನಿಮ್ಮ ಆಯ್ಕೆಯ ಭಾಷೆಯ ಮೂಲಕ ವಾಟ್ಸಾಪ್‌ ಅನ್ನು ಬಳಸಬಹುದಾಗಿದೆ. ಹಾಗಾದ್ರೆ ವಾಟ್ಸಾಪ್‌ನಲ್ಲಿ ಪ್ರಾದೇಶಿಕ ಭಾಷೆಗಳನ್ನು ಬಳಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಾಟ್ಸಾಪ್‌ನಲ್ಲಿ ನಿಮ್ಮ ಆಯ್ಕೆಯ ಭಾಷೆಯನ್ನು ಬಳಸುವುದು ಹೇಗೆ?

ವಾಟ್ಸಾಪ್‌ನಲ್ಲಿ ನಿಮ್ಮ ಆಯ್ಕೆಯ ಭಾಷೆಯನ್ನು ಬಳಸುವುದು ಹೇಗೆ?

ಆಂಡ್ರಾಯ್ಡ್‌ ಡಿವೈಸ್‌ನಲ್ಲಿ ಭಾಷೆಯನ್ನು ಬದಲಾಯಿಸುವ ಆಯ್ಕೆಯ ವಾಟ್ಸಾಪ್‌ ಅಪ್ಲಿಕೇಶನ್‌ನಲ್ಲಿಯೇ ಲಭ್ಯವಿದೆ. ಆದರೆ ಇದು ನಿಮ್ಮ ದೇಶದಲ್ಲಿ ಬೆಂಬಲಿತವಾಗಿದೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ವಾಟ್ಸಾಪ್‌ನಲ್ಲಿ ಲ್ಯಾಂಗ್ವೇಜ್‌ ಸೆಟ್ಟಿಂಗ್ಸ್‌ ಬದಲಾಯಿಸುವುದಕ್ಕೆ ಈ ಕೆಳಗಿನ ಹಂತಗಳನ್ನು ಅನುಸರಿಸಿ.

ಹಂತ:1 ಮೊದಲು, ನಿಮ್ಮ ಫೋನ್‌ನಲ್ಲಿ ವಾಟ್ಸಾಪ್‌ ಅಪ್ಲಿಕೇಶನ್‌ ತೆರೆಯಿರಿ.
ಹಂತ:2 ನಂತರ ಮೂರು ಚುಕ್ಕೆಗಳ ಮೇಲೆ ಮೋರ್‌ ಆಯ್ಕೆಗಳನ್ನು ಟ್ಯಾಪ್ ಮಾಡಿ.
ಹಂತ:3 ಇದರಲ್ಲಿ ಸೆಟ್ಟಿಂಗ್ಸ್‌ ಮೇಲೆ ಕ್ಲಿಕ್ ಮಾಡಿ ಮತ್ತು ಚಾಟ್‌ಗಳನ್ನು ಆಯ್ಕೆಮಾಡಿ.
ಹಂತ:4 ನಂತರ ಅಪ್ಲಿಕೇಶನ್ ಭಾಷೆಯನ್ನು ಆಯ್ಕೆಮಾಡಿ ಮತ್ತು ಆದ್ಯತೆಯ ಭಾಷೆಯನ್ನು ಆಯ್ಕೆಮಾಡಿ.
ಪ್ರಸ್ತುತ ವಾಟ್ಸಾಪ್‌ ಅಪ್ಲಿಕೇಶನ್ ಭಾರತ ದೇಶದ ಹತ್ತು ಪ್ರಾದೇಶಿಕ ಭಾಷೆಗಳನ್ನು ಬೆಂಬಲಿಸುತ್ತದೆ. ಇದರಲ್ಲಿ ನಿಮ್ಮ ಭಾಷೆಯ ಆಯ್ಕೆಯು ಇದೆಯಾ ಇಲ್ಲವೇ ಅನ್ನೊದು ಮುಖ್ಯವಾಗುತ್ತದೆ.

ನಿಮ್ಮ ಡಿವೈಸ್‌ನಲ್ಲಿ ನಿಮ್ಮ ಸ್ಥಳೀಯ ಭಾಷೆಯನ್ನು ಬಳಸುವುದು ಹೇಗೆ?

ನಿಮ್ಮ ಡಿವೈಸ್‌ನಲ್ಲಿ ನಿಮ್ಮ ಸ್ಥಳೀಯ ಭಾಷೆಯನ್ನು ಬಳಸುವುದು ಹೇಗೆ?

ಹಂತ:1 ಮೊದಲಿಗೆ ನಿಮ್ಮ ಆಂಡ್ರಾಯ್ಡ್‌ ಡಿವೈಸ್‌ನಲ್ಲಿ ಸೆಟ್ಟಿಂಗ್ಸ್‌ ತೆರೆಯಿರಿ.
ಹಂತ:2 ನಂತರ ಸೆಟ್ಟಿಂಗ್ಸ್‌ನಲ್ಲಿ ಸಿಸ್ಟಂ, ಭಾಷೆ ಮತ್ತು ಇನ್‌ಪುಟ್, ನಂತರ ಭಾಷೆಗಳನ್ನು ಸರ್ಚ್‌ ಮಾಡಿ.
ಹಂತ:3 ಇದೀಗ ಆಡ್ ಎ ಲಾಂಗ್ವೇಜ್ ಮೇಲೆ ಟ್ಯಾಪ್ ಮಾಡಿ ಮತ್ತು ನಿಮ್ಮ ಆದ್ಯತೆಯ ಭಾಷೆಯನ್ನು ಆಯ್ಕೆ ಮಾಡಿ.

ಐಒಎಸ್‌ನಲ್ಲಿ ನಿಮ್ಮ ಸ್ಥಳೀಯ ಭಾಷೆಯನ್ನು ಬಳಸುವುದು ಹೇಗೆ?

ಐಒಎಸ್‌ನಲ್ಲಿ ನಿಮ್ಮ ಸ್ಥಳೀಯ ಭಾಷೆಯನ್ನು ಬಳಸುವುದು ಹೇಗೆ?

ಹಂತ:1 ನಿಮ್ಮ iPhone ನಲ್ಲಿ ಸೆಟ್ಟಿಂಗ್‌ಗಳಿಗೆ ಹೋಗಿ.
ಹಂತ:2 ನಂತರ ಜನರಲ್‌ ಮೇಲೆ ಕ್ಲಿಕ್ ಮಾಡಿ ಮತ್ತು ಭಾಷೆ ಮತ್ತು ಪ್ರದೇಶವನ್ನು ಆಯ್ಕೆಮಾಡಿ.
ಹಂತ:3 ಇದಾದ ನಂತರ, ಐಫೋನ್ ಭಾಷೆಗಳನ್ನು ಆಯ್ಕೆಮಾಡಿ.
ಹಂತ:4 ಇದೀಗ ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ ಮತ್ತು ಚೇಂಜ್ ಟು language ಅನ್ನು ಟ್ಯಾಪ್ ಮಾಡಿ.
ಹೀಗೆ ಮಾಡುವ ಮೂಲಕ ನಿಮ್ಮ ಸ್ಥಳೀಯ ಭಾಷೆಯನ್ನು ಬಳಸಬಹುದು.

ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್ ಪ್ರಿವ್ಯೂ ಮಾಡುವುದು ಹೇಗೆ?

ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್ ಪ್ರಿವ್ಯೂ ಮಾಡುವುದು ಹೇಗೆ?

ಇನ್ನು ವಾಟ್ಸಾಪ್‌ ಇತ್ತೀಚಿಗೆ ತನ್ನ್ ಪ್ಲಾಟ್‌ಫಾರ್ಮ್‌ನಲ್ಲಿ ವಾಯ್ಸ್ ಮೆಸೇಜ್ ಪ್ರಿವ್ಯೂ ಫೀಚರ್ಸ್‌ ಅನ್ನು ಕೂಡ ಪರಿಚಯಿಸಿದೆ. ಇದರಿಂದ ನೀವು ವಾಯ್ಸ್‌ ಮೆಸೇಜ್‌ ಅನ್ನು ಸೆಂಡ್‌ ಮಾಡುವ ಮುನ್ನ ಸರಿಯಿದೆಯಾ ಎಂದು ಪರಿಶೀಲಿಸಲು ಅವಕಾಶ ದೊರೆಯಲಿದೆ. ಇನ್ನು ವಾಟ್ಸಾಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಪ್ರಿವ್ಯೂ ಫೀಚರ್ಸ್‌ ಬಳಸುವುದಕ್ಕೆ ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.
ಹಂತ:1 ಮೊದಲಿಗೆ ವಾಟ್ಸಾಪ್‌ನಲ್ಲಿ ನಿಮ್ಮ ವೈಯಕ್ತಿಕ ಅಥವಾ ಗುಂಪು ಚಾಟ್ ತೆರೆಯಿರಿ.
ಹಂತ:2 ನಂತರ ವಾಟ್ಸಾಪ್‌ನಲ್ಲಿ ಮೈಕ್ರೊಫೋನ್ ಅನ್ನು ಟ್ಯಾಪ್ ಮಾಡಿ ಮತ್ತು ಹಿಡಿದುಕೊಳ್ಳಿ,
ಹಂತ:3 ಇದೀಗ ವಾಯ್ಸ್ ಸಂದೇಶವನ್ನು ರೆಕಾರ್ಡ್ ಮಾಡಲು ಪ್ರಾರಂಭಿಸಿ.
ಹಂತ:4 ವಾಯ್ಸ್‌ ಮೆಸೇಜ್‌ ನಂತರ, ಸ್ಟಾಪ್‌ ಟ್ಯಾಪ್ ಮಾಡಿ.
ಹಂತ:5 ಇದಾದ ನಂತರ ನಿಮ್ಮ ರೆಕಾರ್ಡಿಂಗ್ ಆಲಿಸಲು ಪ್ಲೇ ಟ್ಯಾಪ್ ಮಾಡಿ. ಆ ಟೈಮ್‌ಸ್ಟ್ಯಾಂಪ್‌ನಿಂದ ಅದನ್ನು ಪ್ಲೇ ಮಾಡಲು ನೀವು ರೆಕಾರ್ಡಿಂಗ್‌ನ ಯಾವುದೇ ಭಾಗವನ್ನು ಟ್ಯಾಪ್ ಮಾಡಬಹುದು.
ಹಂತ:6 ನೀವು ಪ್ರಿವ್ಯೂ ಮಾಡಿದ ಸಂದೇಶ ಸರಿಯಿಲ್ಲದಿದ್ದರೆ ಅದನ್ನು ಡಿಲೀಟ್‌ ಮಾಡಲು ಟ್ರಾಶ್‌ ಕ್ಯಾನ್ ಅನ್ನು ಟ್ಯಾಪ್ ಮಾಡಬಹುದು.
ಒಂದು ವೇಳೆ ನಿಮ್ಮ ಸಂದೇಶ ಸರಿಯಿದ್ದರೆ ಸೆಂಡ್‌ ಟ್ಯಾಪ್ ಮಾಡಿ.

Best Mobiles in India

English summary
Here is a simple guide on how to change language settings on WhatsApp and use it in different languages including- Hindi, Oriya, Kannada, Bengali, Marathi, among others.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X