ನಿಮ್ಮ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಳನ್ನು ಡೌನ್‌ಲೋಡ್‌ ಮಾಡುವುದು ಹೇಗೆ?

|

ಪ್ರಸ್ತುತ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಭಾರತದಲ್ಲಿ ಟಿಕ್‌ಟಾಕ್‌ ಅಪ್ಲಿಕೇಶನ್‌ ಅನ್ನು ಬ್ಯಾನ್‌ ಮಾಡಿದ ನಂತರ ಹೆಚ್ಚಿನ ಜನರು ಇನ್‌ಸ್ಟಾಗ್ರಾಮ್‌ ರೀಲ್ಸ್‌ ಅನ್ನು ಬಳಸುತ್ತಿದ್ದಾರೆ. ಇದೇ ಕಾರಣಕ್ಕೆ ಇನ್‌ಸ್ಟಾಗ್ರಾಮ್‌ ತನ್ನ ರೀಲ್ಸ್‌ನಲ್ಲಿ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದಲ್ಲದೆ ಇನ್‌ಸ್ಟಾಗ್ರಾಮ್‌ ತನ್ನ ಶಾರ್ಟ್‌ ವೀಡಿಯೊ ಸ್ವರೂಪವನ್ನು ಬದಲಾಯಿಸುವುದಕ್ಕಾಗಿ ಹಲವಾರು ಫೀಚರ್ಸ್‌ಗಳನ್ನು ರೀಲ್ಸ್‌ಗೆ ಸೇರಿಸಿದೆ.

ಇನ್‌ಸ್ಟಾಗ್ರಾಮ್‌

ಹೌದು, ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡಿ ಪೋಸ್ಟ್‌ ಮಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಇನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳು, ಸ್ಟೋರೀಸ್‌, ಲೈವ್ ವೀಡಿಯೊಗಳನ್ನು ಕೂಡ ಶೇರ್‌ ಮಾಡಬಹುದು. ಇನ್‌ಸ್ಟಾಗ್ರಾಮ್‌ನಲ್ಲಿ ನೀವು ಶೇರ್‌ ಮಾಡಿದ ಪೋಸ್ಟ್‌ಗಳು, ಸ್ಟೋರೀಸ್‌ಗಳನ್ನು ಸುಲಭವಾಗಿ ಫೋನ್‌ನಲ್ಲಿ ಸೇವ್‌ ಮಾಡಬಹುದು. ಆದರೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಅನ್ನು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಸೇವ್‌ ಮಾಡುವುದಕ್ಕೆ ಕೆಲವು ನಿಯಮಗಳನ್ನು ಅನಸುರಿಸಬೇಕಾಗುತ್ತದೆ. ಹಾಗಾದ್ರೆ ನಿಮ್ಮ ಫೋನ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಅನ್ನು ಡೌನ್‌ಲೋಡ್‌ ಮಾಡುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಳನ್ನು ಡೌನ್‌ಲೋಡ್‌ ಮಾಡುವುದು ಹೇಗೆ?

ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಳನ್ನು ಡೌನ್‌ಲೋಡ್‌ ಮಾಡುವುದು ಹೇಗೆ?

ಇನ್‌ಸ್ಟಾಗ್ರಾಮ್‌ ಬಳಕೆದಾರರು ತಮ್ಮ ರೀಲ್ಸ್‌ಗಳನ್ನು ಐಫೋನ್‌ನಲ್ಲಿ ಡೌನ್‌ಲೋಡ್‌ ಮಾಡಬೇಕಾದರೆ ಆಪ್ ಸ್ಟೋರ್‌ನಿಂದ Instadp ಅಥವಾ Igram.io ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ. ಆದರೆ ಆಂಡ್ರಾಯ್ಡ್ ಬಳಕೆದಾರರು ಗೂಗಲ್ ಪ್ಲೇ ಸ್ಟೋರ್‌ನಿಂದ ರೀಲ್ಸ್ ಡೌನ್‌ಲೋಡರ್ ಅನ್ನು ಡೌನ್‌ಲೋಡ್‌ ಮಾಡಬೇಕಾಗುತ್ತದೆ. ಈ ಅಪ್ಲಿಕೇಶನ್‌ಗಳನ್ನು ಇನ್‌ಸ್ಟಾಲ್‌ ಮಾಡಿದ ನಂತರ ಈ ಕೆಳಗಿನ ಹಂತಗಳನ್ನು ಅನುಸರಿಸಿರಿ.

ಹಂತ:1 ಮೊದಲಿಗೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ ತೆರೆಯಿರಿ.
ಹಂತ:2 ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ವಿಭಾಗಕ್ಕೆ ಹೋಗಿ.
ಹಂತ:3 ನಂತರ, ನಿಮ್ಮ ಡಿವೈಸ್‌ನಲ್ಲಿ ನೀವು ಡೌನ್‌ಲೋಡ್ ಮಾಡಲು ಬಯಸುವ ರೀಲ್‌ಗಳ ಲಿಂಕ್ ಅನ್ನು ಕಾಪಿ ಮಾಡಿ.
ಹಂತ:4 ಇದೀಗ ರೀಲ್ಸ್ ಡೌನ್‌ಲೋಡರ್ ಅಪ್ಲಿಕೇಶನ್ ತೆರೆಯಿರಿ ಮತ್ತು ನೀವು ಡೌನ್‌ಲೋಡ್ ಮಾಡಲು ಬಯಸುವ ರೀಲ್‌ನ ಲಿಂಕ್ ಅನ್ನು ಪೇಸ್ಟ್‌ ಮಾಡಿರಿ.
ಹಂತ:5 ಇದಾದ ನಂತರ ನೀವು ಡೌನ್‌ಲೋಡ್ ಬಟನ್ ಅನ್ನು ಟ್ಯಾಪ್ ಮಾಡಬೇಕಾಗುತ್ತದೆ.

ಇದೀಗ ಇನ್‌ಸ್ಟಾಗ್ರಾಮ್‌ ರೀಲ್ಸ್‌ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಡೌನ್‌ಲೋಡ್ ಆಗಲಿವೆ. ಈ ರೀಲ್ಸ್‌ಗಳನ್ನು ನಿಮ್ಮ ಫೋನ್ ಗ್ಯಾಲರಿ ಅಪ್ಲಿಕೇಶನ್‌ನಲ್ಲಿ ಸ್ಟೋರೇಜ್‌ ಮಾಡಬಹುದಾಗಿದೆ.

ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಳನ್ನು ಕ್ರಿಯೆಟ್‌ ಮಾಡುವುದು ಹೇಗೆ?

ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಳನ್ನು ಕ್ರಿಯೆಟ್‌ ಮಾಡುವುದು ಹೇಗೆ?

ಹಂತ:1 ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ನಲ್ಲಿ ಬಲಕ್ಕೆ ಸ್ವೈಪ್ ಮಾಡಿ ಮತ್ತು ಸ್ಕ್ರೀನ್‌ ಕೆಳಭಾಗದಲ್ಲಿರುವ ರೀಲ್ಸ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ:2 ನಂತರ ನೀವು ರೀಲ್ ಅನ್ನು ರೆಕಾರ್ಡ್ ಮಾಡಲು, ವೀಡಿಯೊ ಪ್ಲೇಯರ್ ಐಕಾನ್ ಅನ್ನು ಹಿಡಿದಿಟ್ಟುಕೊಳ್ಳಿರಿ.
ಹಂತ:3 ಇದೀಗ ನೀವು ಸೂಕ್ತವಾದ ವೇಗವನ್ನು ಆಯ್ಕೆ ಮಾಡಬೇಕಾಗುತ್ತದೆ, ಚಿತ್ರಗಳು, ಸ್ಟಿಕ್ಕರ್‌ಗಳು ಮತ್ತು ಮ್ಯೂಸಿಕ್‌ ಅನ್ನು ರೀಲ್ಸ್‌ಗೆ ಆಡ್‌ ಮಾಡಿರಿ.
ಹಂತ:4 ರೀಲ್ಸ್‌ ಶೇರ್‌ ಮಾಡುವ ಮೊದಲು ರೀಲ್ ಅನ್ನು ವೀಕ್ಷಿಸಲು ಪ್ರಿವ್ಯೂ ಬಟನ್ ಅನ್ನು ಕ್ಲಿಕ್ ಮಾಡಿ ರೀಲ್ ಅನ್ನು ಪ್ರಿವ್ಯೂ ಮಾಡಿ.
ಹಂತ:5 ಇದೀಗ ನಿಮ್ಮ ರೀಲ್ಸ್‌ ಶೇರ್‌ ಮಾಡಲು ಶೇರ್‌ ಬಟನ್ ಅನ್ನು ಕ್ಲಿಕ್ ಮಾಡಿ.

ಇನ್‌ಸ್ಟಾಗ್ರಾಮ್‌ನಲ್ಲಿ ಚಾಟ್‌ಗಳನ್ನು ಹೈಡ್‌ ಮಾಡುವುದು ಹೇಗೆ?

ಇನ್‌ಸ್ಟಾಗ್ರಾಮ್‌ನಲ್ಲಿ ಚಾಟ್‌ಗಳನ್ನು ಹೈಡ್‌ ಮಾಡುವುದು ಹೇಗೆ?

ಹಂತ:1 ಮೊದಲಿಗೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್ ತೆರೆಯಿರಿ ಮತ್ತು ಚಾಟ್‌ಗಳಿಗೆ ಹೋಗಿ
ಹಂತ:2 ನೀವು ಹೈಡ್‌ ಮಾಡಲು ಬಯಸುವ ಚಾಟ್ ಅನ್ನು ತೆರೆಯಿರಿ
ಹಂತ:3 ಚಾಟ್ ಅನ್ನು ಹೈಡ್‌ ಮಾಡಲು ವ್ಯಾನಿಶ್ ಮೋಡ್ ಅನ್ನು ಸಕ್ರಿಯಗೊಳಿಸಲು ಮೇಲಕ್ಕೆ ಸ್ವೈಪ್ ಮಾಡಿ
ಹಂತ:4 ಇದೀಗ ನೀವು ನಿಮ್ಮ ಸಂಭಾಷಣೆಯನ್ನು ಮುಂದುವರಿಸಬಹುದು. ಮೆಸೇಜ್‌ ಸ್ವೀಕರಿಸುವವರು ನಿಮ್ಮ ಪಠ್ಯವನ್ನು ಓದಿದ ನಂತರ ಅವರು ಡಿಸ್‌ಅಪಿಯರ್‌ ಆಗಲಿದ್ದಾರೆ. ನೀವು GIF ಗಳು, ಚಿತ್ರಗಳು ಮತ್ತು ವೀಡಿಯೊಗಳನ್ನು ಈ ಮೋಡ್‌ನಲ್ಲಿ ಹಂಚಿಕೊಳ್ಳಬಹುದಾಗಿದೆ. ಇದಲ್ಲದೆ ವ್ಯಾನಿಶ್‌ ಮೋಡ್‌ ಅನ್ನು ಮತ್ತೆ ಸ್ವೈಪ್ ಮಾಡುವ ಮೂಲಕ ನೀವು ಈ ಮೋಡ್ ಅನ್ನು ಆಫ್ ಮಾಡಬಹುದು.

Best Mobiles in India

English summary
Instagram offers various other formats like Posts, Stories, Live Videos, among others.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X