ಜುಲೈ ತಿಂಗಳಿನಲ್ಲಿ ಲಾಂಚ್‌ ಆಗಲಿರುವ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳು!

|

ಸ್ಮಾರ್ಟ್‌ಫೋನ್‌ಗಳು ನಮ್ಮ ದೈನಂದಿನ ಜೀವನದಲ್ಲಿ ಅವಶ್ಯಕ ಡಿವೈಸ್‌ ಎನಿಸಿಕೊಂಡಿವೆ. ಸ್ಮಾರ್ಟ್‌ಫೋನ್‌ ಇಲ್ಲದೆ ಹೊರ ಹೋಗುವುದು ಕೂಡ ಅಸಾಧ್ಯ ಎನ್ನುವ ಮಟ್ಟಿಗೆ ಎಲ್ಲರನ್ನು ಸೆಳೆದಿದೆ. ಇದೇ ಕಾರಣಕ್ಕೆ ಟೆಕ್‌ ವಲಯದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಇನ್ನು ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಜನಪ್ರಿಯ ಬ್ರ್ಯಾಂಡ್‌ಗಳು ತಮ್ಮದೇ ಆದ ವಿಶೇಷ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಜೊತೆಗೆ ಕಾಲಕ್ಕೆ ತಕ್ಕಂತೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಬಂದಿವೆ. ಇನ್ನು 2022ರ ಆರಂಭದಿಂದಲೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕ‍ಷ್ಟು ಸೌಂಡ್‌ ಮಾಡುತ್ತಿವೆ. ಇದಲ್ಲದೆ ಮುಂದಿನ ತಿಂಗಳು ಅಂದರೆ ಜುಲೈ ನಲ್ಲಿಯೂ ಕೂಡ ಹಲವು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಗೆ ಕಾದುಕುಳಿತಿವೆ. ಇದರಲ್ಲಿ ಹಲವು ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ನಿರೀಕ್ಷೆಯನ್ನು ಸಹ ಹುಟ್ಟುಹಾಕಿವೆ.

ಸ್ಮಾರ್ಟ್‌ಫೋನ್‌ಗಳು

ಇನ್ನು ಜುಲೈ ತಿಂಗಳಿನಲ್ಲಿ ಎಂಟ್ರಿ ಕೊಡಲಿರುವ ಸ್ಮಾರ್ಟ್‌ಫೋನ್‌ಗಳು ಹಲವು ಕಾರಣಗಳಿಗೆ ನಿರೀಕ್ಷೆ ಹುಟ್ಟುಹಾಕಿವೆ. ನೂತನ ಮಾದರಿಯ ತಂತ್ರಜ್ಞಾನ, ಆಕರ್ಷಕ ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌ ಕಾರಣಕ್ಕೆ ಕೆಲವು ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್‌ ಪ್ರಿಯರನ್ನು ಕಾಯುವಂತೆ ಮಾಡಿದೆ. ಹಾಗಾದ್ರೆ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಹಾಗೂ ಜುಲೈ ತಿಂಗಳಿನಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಥಿಂಗ್ ಫೋನ್ (1)

ನಥಿಂಗ್ ಫೋನ್ (1)

ಜುಲೈ ತಿಂಗಳಿನಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ನಥಿಂಗ್ ಫೋನ್ (1) ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಹೊಸ ಗ್ಲಿಫ್ ಲೈಟಿಂಗ್ ಹೊಂದಿರಲಿದೆ ಎನ್ನಲಾಗಿದೆ. ಇದು ಸ್ನಾಪ್‌ಡ್ರಾಗನ್ 800-ಸರಣಿಯ ಚಿಪ್‌ನ ಬದಲಿಗೆ ಸ್ನಾಪ್‌ಡ್ರಾಗನ್ 778G+ ನಿಂದ ಚಾಲಿತವಾಗುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಜುಲೈ 12 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಆಸುಸ್‌ ROG ಫೋನ್ 6

ಆಸುಸ್‌ ROG ಫೋನ್ 6

ಆಸುಸ್‌ ROG ಫೋನ್ 6 ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಗೇಮಿಂಗ್‌ ಪ್ರಿಯರನ್ನು ಗುರಿಯಾಗಿಸಿಕೊಂಡು ವಿನ್ಯಾಸಗೊಳಿಸಲಾಗಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಹೊಂದಿರಲಿದೆ. ಇನ್ನು ಈ ಫೋನ್‌ ಡ್ಯುಯಲ್ ಚಾರ್ಜಿಂಗ್ ಪೋರ್ಟ್‌ಗಳು, ಹಿಂಭಾಗದಲ್ಲಿ ಸೆಕೆಂಡರಿ ಎಲ್‌ಇಡಿ ಡಿಸ್‌ಪ್ಲೇ, ಗೇಮಿಂಗ್‌ಗಾಗಿ ಸುಧಾರಿತ ಶೋಲ್ಡರ್‌ ಟ್ರಿಗ್ಗರ್ ಬಟನ್‌ಗಳು ಮತ್ತು ಗೇಮಿಂಗ್ ಕಂಟ್ರೋಲರ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ. ಇದಲ್ಲದೆ ಸೆಕೆಂಡರಿ ಡಿಸ್‌ಪ್ಲೇಗಳಂತಹ ಹಲವಾರು ಫಸ್ಟ್-ಪಾರ್ಟಿ ಗೇಮಿಂಗ್ ಆಕ್ಸಿಸರಿಗಳಿಗೆ ಬೆಂಬಲ ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಜುಲೈ 5 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಶಿಯೋಮಿ 12 ಅಲ್ಟ್ರಾ

ಶಿಯೋಮಿ 12 ಅಲ್ಟ್ರಾ

ಶಿಯೋಮಿ ಕಂಪೆನಿ ತನ್ನ ಬಹು ನಿರೀಕ್ಷಿತ ಶಿಯೋಮಿ 12 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಜುಲೈ ತಿಂಗಳಿನಲ್ಲಿ ಲಾಂಚ್‌ ಮಾಡುವ ಸಾಧ್ಯತೆಯಿದೆ. ಇನ್ನು ಶಿಯೋಮಿ 12 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ ಅನ್ನು ಹೊಂದಿದೆ.ಈ ಫೋನ್‌ ಲೈಕಾ ಸಹಯೋಗದೊಂದಿಗೆ ಶಿಯೋಮಿ ಅಭಿವೃದ್ಧಿಪಡಿಸಿದ ಹೆಚ್ಚು-ಸುಧಾರಿತ ಕ್ಯಾಮೆರಾ ಸೆಟಪ್ ಅನ್ನು ಪ್ಯಾಕ್ ಮಾಡುವ ನಿರೀಕ್ಷೆಯಿದೆ. ಸದ್ಯ ಈ ಡಿವೈಸ್‌ ಲಾಂಚ್‌ ಡೇಟ್‌ ಬಹಿರಂಗವಾಗಿಲ್ಲ, ಆದರೆ ಜುಲೈನಲ್ಲಿ ಲಾಂಚ್‌ ಆಗುವ ಸಾಧ್ಯತೆಯಿದೆ.

ಒನ್‌ಪ್ಲಸ್‌ ನಾರ್ಡ್‌ 2T

ಒನ್‌ಪ್ಲಸ್‌ ನಾರ್ಡ್‌ 2T

ಒನ್‌ಪ್ಲಸ್‌ ನಾರ್ಡ್‌ 2T ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತದಲ್ಲಿ ಲಾಂಚ್ ಆಗಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 32MP ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ ಎನ್ನಲಾಗಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ ಜುಲೈ 1 ರಂದು ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ರಿಯಲ್‌ಮಿ GT 2 ಮಾಸ್ಟರ್ ಎಡಿಷನ್‌

ರಿಯಲ್‌ಮಿ GT 2 ಮಾಸ್ಟರ್ ಎಡಿಷನ್‌

ರಿಯಲ್‌ಮಿ GT 2 ಮಾಸ್ಟರ್ ಎಡಿಷನ್‌ ಸ್ಮಾರ್ಟ್‌ಫೋನ್‌ ಜುಲೈ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ನೀಡುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೊನ್‌ ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಹೊಂದಿರಲಿದೆ. ಹಾಗೆಯೇ 12GB RAM ರೂಪಾಂತರದೊಂದಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಫೋನ್‌ 6.7 ಇಂಚಿನ 120H AMOLED ಡಿಸ್‌ಪ್ಲೇ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 150W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಐಕ್ಯೂ 10ಪ್ರೊ

ಐಕ್ಯೂ 10ಪ್ರೊ

ಐಕ್ಯೂ 10ಪ್ರೊ ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಭಾರತಕ್ಕೆ ಎಂಟ್ರಿ ನೀಡುವ ಸಾದ್ಯತೆಯಿದೆ. ಇದು ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz QHD+ LTPO ಸ್ಕ್ರೀನ್ ಹೊಂದಿರುವ ಸಾದ್ಯತೆಯಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್‌ 200W ವೇಗದ ಚಾರ್ಜಿಂಗ್‌ ಬೆಂಬಲಿಸುವ ಮೊದಲ ಸ್ಮಾರ್ಟ್‌ಫೋನ್‌ ಎನ್ನುವ ವಿಶೇಷತೆಯನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕ ಇನ್ನು ನಿಗದಿಯಾಗಿಲ್ಲ.

Best Mobiles in India

English summary
Here's most anticipated smartphones expected to launch in July 2022

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X