ಇಲ್ಲಿವೆ ನೋಡಿ ಮುಂದಿನ ವರ್ಷ ಎಂಟ್ರಿ ಕೊಡಲಿರುವ ಒನ್‌ಪ್ಲಸ್‌ ಫೋನ್‌ಗಳು!

|

ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ಭಾರಿ ಡಿಮ್ಯಾಂಡ್‌ ಇದೆ. ಅದರಂತೆ ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಕೂಡ ಸಾಕಷ್ಟು ಸಂಚಲನ ಸೃಷ್ಟಿಸುತ್ತಾ ಬಂದಿವೆ. ಪ್ರತಿ ಸರಣಿಯಲ್ಲೂ ಹೊಸತನವನ್ನು ಪರಿಚಯಿಸುವ ಪರಿಪಾಠವನ್ನು ಒನ್‌ಪ್ಲಸ್‌ ಕಂಪೆನಿ ರೂಡಿಸಿಕೊಂಡು ಬಂದಿದೆ. ಇನ್ನು ಒನ್‌ಪ್ಲಸ್‌ ಕಂಪನಿ ಈಗಾಗಲೇ ಹಲವು ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವರ್ಷ ಈ ಫೋನ್‌ಗಳನ್ನು ಪರಿಚಯಿಸುವ ಸಾಧ್ಯತೆಯಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಮುಂದಿನ ವರ್ಷ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಇದಕ್ಕೆ ತಕ್ಕಂತೆ ಈಗಾಗಲೇ ಒನ್‌ಪ್ಲಸ್‌ ಕಂಪೆನಿಯ ಮುಂದಿನ ಫೋನ್‌ಗಳ ಬಗ್ಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಸ್ಮಾರ್ಟ್‌ಫೋನ್‌ಗಳು ಯಾವುವು? ಅವುಗಳ ಪ್ರೊಸೆಸರ್‌ ಬಲವೇನು? ಅವುಗಳ ಕ್ಯಾಮೆರಾ ಹೇಗಿರಲಿದೆ ಎಂಬೆಲ್ಲಾ ವಿಚಾರಗಳು ಸಾಕಷ್ಟು ಟ್ರೆಂಡ್‌ ಸೃಷ್ಟಿಸಿವೆ. ಹಾಗಾದ್ರೆ ಒನ್‌ಪ್ಲಸ್‌ ಕಂಪೆನಿ ಮುಂದಿನ ವರ್ಷ ಮಾರುಕಟ್ಟೆಗೆ ಪರಿಚಯಿಸಲಿರುವ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಒನ್‌ಪ್ಲಸ್ 11

ಒನ್‌ಪ್ಲಸ್ 11

ಒನ್‌ಪ್ಲಸ್‌ ಕಂಪೆನಿ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ತಯಾರಿಕೆಯಲ್ಲಿ ಕಾರ್ಯನಿರತವಾಗಿದೆ. ಆದರಿಂದ ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಪ್ರಮುಖ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ QHD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪ-ಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದರ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌, ಎರಡನೇ ಕ್ಯಾಮೆರಾ 48MP ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 32MP 2x ಟೆಲಿಫೋಟೋ ಲೆನ್ಸ್‌ನೊಂದಿಗೆ ಬರುತ್ತದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಹೊಸ ಪ್ರೊಸೆಸರ್‌ನಲ್ಲಿ ಬರುವುದರಿಂದ ಫೀಚರ್ಸ್‌ಗಳಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣಬಹುದು ಎನ್ನಲಾಗಿದೆ.

ಒನ್‌ಪ್ಲಸ್‌ ACE 2

ಒನ್‌ಪ್ಲಸ್‌ ACE 2

2023ಯಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್‌ ACE 2 ಕೂಡ ಒಂದಾಗಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲಿಸುವ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GBRAM, 12GBRAM ಮತ್ತು 16GBRAM ಮಾದರಿಗಳು ಇರುತ್ತವೆ ಎಂದು ಅಂದಾಜಿಸಲಾಗಿದೆ.

ಒನ್‌ಪ್ಲಸ್‌

ಇದಲ್ಲದೆ ಒನ್‌ಪ್ಲಸ್‌ ACE 2 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೋನ್ 100W ವೇಗದ ಚಾರ್ಜಿಂಗ್ ಚಾರ್ಜಿಂಗ್‌ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಒನ್‌ಪ್ಲಸ್ ನಾರ್ಡ್ CE 3

ಒನ್‌ಪ್ಲಸ್ ನಾರ್ಡ್ CE 3

ಒನ್‌ಪ್ಲಸ್ ನಾರ್ಡ್ CE 3 ಸ್ಮಾರ್ಟ್‌ಫೋನ್‌ 2023ಕ್ಕೆ ಎಂಟ್ರಿ ನೀಡಲಿದೆ ಎಂದು ಒನ್‌ಪ್ಲಸ್‌ ಕಂಪೆನಿ ಹೇಳಿಕೊಂಡಿದೆ. ಇದು ಮಿಡ್-ಟು-ಹೈ-ಎಂಡ್ ಸ್ಮಾರ್ಟ್‌ಫೋನ್ ಆಗಿರಬಹುದು ಎಂಬ ಚರ್ಚೆ ಕೂಡ ನಡೆದಿದೆ. ಇತ್ತೀಚಿಗೆ ಸೋರಿಕೆಯಾದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ 6.7 ಇಂಚಿನ IPS LCD ಡಿಸ್‌ಪ್ಲೇ ಹೊಂದಿರುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.

ಸ್ಮಾರ್ಟ್‌ಫೋನ್

ಒನ್‌ಪ್ಲಸ್ ನಾರ್ಡ್ CE 3 ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಎರಡು ಮತ್ತು ಮೂರನೇ ಕ್ಯಾಮೆರಾ 2MP ಆಕ್ಸಿಲರಿ ಕ್ಯಾಮೆರಾಗಳನ್ನು ಹೊಂದಿರಲಿದೆ. ಇದಲ್ಲದೆ 16MP ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯ ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ.

ಒನ್‌ಪ್ಲಸ್‌ ನಾರ್ಡ್‌ N300

ಒನ್‌ಪ್ಲಸ್‌ ನಾರ್ಡ್‌ N300

ಈಗಾಗಲೇ ಯುಎಸ್‌ನಲ್ಲಿ ಮಾತ್ರ ಲಾಂಚ್‌ ಆಗಿರುವ ಒನ್‌ಪ್ಲಸ್‌ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಭಾರತಕ್ಕೆ ಎಂಟ್ರಿ ನೀಡುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ 6.65-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 84.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 810 SoC 5G ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

N300

ಒನ್‌ಪ್ಲಸ್‌ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈಫೈ 802.11 ac , ಬ್ಲೂಟೂತ್ 5.1, ಜಿಪಿಎಸ್‌, ಗ್ಲೋನಾಸ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

Best Mobiles in India

Read more about:
English summary
Here's Oneplus smartphones to launch next year

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X