10,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಸಾಕಷ್ಟು ಬೆಳವಣಿಗೆಯನ್ನು ಸಾಧಿಸಿದೆ. ವಿವಿಧ ಮಾದರಿಯ ಬೆಲೆಗಳಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕರು ಸ್ಮಾರ್ಟ್‌ಫೋನ್‌ ಪ್ರಿಯರ ಆಶಯಗಳಿಗೆ ತಕ್ಕಂತೆ ಅನೇಕ ಫೋನ್‌ಗಳನ್ನು ಪರಿಚಯಿಸಿದ್ದಾರೆ. ಇದರಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಬೇಡಿಕೆ ಜಾಸ್ತಿಯಿದೆ. ಇದೇ ಕಾರಣಕ್ಕೆ ಹಲವು ಬ್ರ್ಯಾಂಡ್‌ಗಳು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ನೀವು ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಗಮನಿಸಬಹುದು. ಇದರಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನಸೆಳೆದಿವೆ. ಇದರಲ್ಲಿ 10,000ರೂ.ಗಿಂತ ಕಡಿಮೆ ಬೆಲೆಯಲ್ಲಿಯೂ ಕೂಡ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ರಿಯಲ್‌ಮಿ, ರೆಡ್ಮಿ, ಸ್ಯಾಮ್‌ಸಂಗ್‌, ಮೈಕ್ರೋಮ್ಯಾಕ್ಸ್‌, ಲಾವಾ ಕಂಪೆನಿಗಳು 10,000ರೂ,ಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹಾಗಾದ್ರೆ ಭಾರತದಲ್ಲಿ 10,000ರೂ.ಗಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 9 ಆಕ್ಟಿವ್‌

ರೆಡ್ಮಿ 9 ಆಕ್ಟಿವ್‌

ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ ಬೇಸ್‌ ಮಾಡೆಲ್‌ 9,499 ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ ನಾರ್ಜೊ 50i

ರಿಯಲ್‌ಮಿ ನಾರ್ಜೊ 50i

ಕಳೆದ ವರ್ಷ ಬಿಡುಗಡೆಯಾದ ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್‌ 8 ಮೆಗಾಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿರಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ 2GB RAM ಮತ್ತು 32GB ಸ್ಟೋರೇಜ್ ಆವೃತ್ತಿಗೆ ರೂ 7,499 ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6.5-ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6000mAh ಬ್ಯಾಟರಿಯನ್ನು ಒಳಗೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 9,499ರೂ.ಬೆಲೆಯನ್ನು ಹೊಂದಿದೆ.

ಪೊಕೊ C31

ಪೊಕೊ C31

ಪೊಕೊ C31 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ ಬೆಲೆ 8,999 ರೂ.ಆಗಿದೆ.

ಮೈಕ್ರೋಮ್ಯಾಕ್ಸ್ IN 2B

ಮೈಕ್ರೋಮ್ಯಾಕ್ಸ್ IN 2B

ಮೈಕ್ರೊಮ್ಯಾಕ್ಸ್ ಇನ್‌ 2b ಸ್ಮಾರ್ಟ್‌ಫೋನ್‌ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸಾಕ್ ಟಿ 610 ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಮೈಕ್ರೋಮ್ಯಾಕ್ಸ್ ಇನ್‌ 2 ಬಿ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 160 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ನೀಡಲಿದೆ. ಈ ಸ್ಮಾರ್ಟ್‌ಫೋನ್‌ 4GB RAM ರೂಪಾಂತರಕ್ಕೆ 8,999ರೂ. ಮತ್ತು 6GB RAM ಹೊಂದಿರುವ ರೂಪಾಂತರಕ್ಕೆ 9,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಲಾವಾ Z4

ಲಾವಾ Z4

10,000ರೂ. ಬೆಲೆಯ ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಲಾವಾ Z4 ಸ್ಮಾರ್ಟ್‌ಫೋನ್‌ ಕೂಡ ಸೇರಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, 20:9 ರಚನೆಯ ಅನುಪಾತ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದಲ್ಲದೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಲಾವಾ Z4 ಸ್ಮಾರ್ಟ್‌ಫೋನ್‌ 9,399ರೂ. ಬೆಲೆಗೆ ಲಭ್ಯವಿದೆ.

Best Mobiles in India

English summary
Best Mobile Phones Under Rs 10,000 In India: If you are looking for a basic smartphone that costs under Rs 10,000.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X