ಅಗ್ಗದ ಬೆಲೆಯಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಮೊಬೈಲ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಪೈಪೋಟಿಯನ್ನ ಕಾಣಬಹುದಾಗಿದೆ. ಪ್ರತಿನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುವ ಮೂಲಕ ಗ್ರಾಹಕರಿಗೆ ಹಲವು ಆಯ್ಕೆಗಳನ್ನು ನೀಡುತ್ತಲೇ ಬಂದಿವೆ. ಇನ್ನು ಟೆಕ್‌ ವಲಯದಲ್ಲಿ ದುಬಾರಿ ಬೆಲೆಗೆ ಮಾತ್ರವಲ್ಲ ಅಗ್ಗದ ಬೆಲೆಯಲ್ಲೂ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ನೀವು ಖರೀದಿಸಬಹುದಾಗಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ ಪ್ರಿಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿದ್ದರೂ ಹೊಸ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದ್ದೆ ಇದೆ. ಆದರಲ್ಲೂ 10,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವುದು ಸಾಮಾನ್ಯವಾಗಿದೆ. ಇನ್ನು ಮಾರುಕಟ್ಟೆಯಲ್ಲಿ 10,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಲಬ್ಯವಿದೆ. ಆದರೂ ಗ್ರಾಹಕರು ತಮ್ಮ ನೆಚ್ಚಿನ ಬ್ರಾಂಡ್‌ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಸದ್ಯ ನೀವು ಮಾರುಕಟ್ಟೆಯಲ್ಲಿ 10,000ರೂ, ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೈಕ್ರೋಮ್ಯಾಕ್ಸ್ IN 2b

ಮೈಕ್ರೋಮ್ಯಾಕ್ಸ್ IN 2b

ಮೈಕ್ರೋಮ್ಯಾಕ್ಸ್‌ IN 2b ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ 6.52-ಇಂಚಿನ HD+ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸಾಕ್ ಟಿ 610 ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಮೈಕ್ರೋಮ್ಯಾಕ್ಸ್ ಇನ್‌ 2 ಬಿ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 160 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಟೈಂ ನೀಡುತ್ತದೆ. 4 GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 8,999ರೂ ಬೆಲೆ ಹೊಂದಿದೆ.

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಸದ್ಯ ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್‌ 3GB RAM + 32GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ 8,999 ರೂ. ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ 9,999ರೂ. ಬೆಲೆಯನ್ನು ಹೊಂದಿದೆ.

ರಿಯಲ್‌ಮಿ C25

ರಿಯಲ್‌ಮಿ C25

ರಿಯಲ್‌ಮಿ C25 ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G70 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯಲ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಜೊತೆಗೆ ಈ ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಅಪ್‌ ಅನ್ನು ಹೊಂದಿದ್ದು, ಇದು 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಫೋನಿನ 4GB RAM + 64GB ವೇರಿಯಂಟ್ ಆಯ್ಕೆಯು 9,999ರೂ. ಬೆಲೆ ಹೊಂದಿದೆ.

ಮೋಟೋ E7 ಪ್ಲಸ್‌

ಮೋಟೋ E7 ಪ್ಲಸ್‌

ಮೋಟೋ E7 ಪ್ಲಸ್‌ ಸ್ಮಾರ್ಟ್‌ಫೋನ್‌ ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 460 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 9,499ರೂ.ಬೆಲೆಗೆ ಲಭ್ಯವಿದೆ.

ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್

ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್

ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

Best Mobiles in India

English summary
Here's the Best smartphones less than Rs.10,000 in india.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X