ಭಾರತದಲ್ಲಿ ನೀವು 40,000ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆನೂ ಕಡಿಮೆ ಇಲ್ಲ. ಪ್ರತಿನಿತ್ಯವೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇರುತ್ತವೆ. ಇದರಲ್ಲಿ ದುಬಾರಿ ಬೆಲೆಯಿಂದ ಹಿಡಿದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಉತ್ತಮ ಕಾರ್ಯಕ್ಷಮತೆ, ಡಿಸ್‌ಪ್ಲೇ, ವಿನ್ಯಾಸ ಮತ್ತು ಪ್ರೀಮಿಯಂ ಅನುಭವವನ್ನು ಸ್ಮಾರ್ಟ್‌ಫೋನ್‌ಗಳು ಸಾಮಾನ್ಯವಾಗಿ ಹೆಚ್ಚಿನ ಬೆಲೆಯನ್ನು ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಖರೀದಿಸುವಾಗ ಕ್ಯಾಮೆರಾ ಫೀಚರ್ಸ್‌, ಪ್ರೊಸೆಸರ್‌ ಸಾಮರ್ಥ್ಯ, ಬ್ಯಾಟರಿ ದಕ್ಷತೆ ಪ್ರಮುಖವಾಗುತ್ತದೆ. ಉತ್ತಮ ಕಾರ್ಯದಕ್ಷತೆಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಇದೆ. ಆದರೂ ಕೂಡ ಈ ಸ್ಮಾರ್ಟ್‌ಫೋನ್‌ಗಳು ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿಯೂ ಕೂಡ ಲಭ್ಯವಾಗಲಿದೆ. ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ನಲ್ಲಿ ಎಕ್ಸ್‌ಚೇಂಜ್‌ ಆಫರ್‌ ಮೂಲಕ ಕೂಡ ಖರೀದಿಗೆ ಲಭ್ಯವಾಗಲಿವೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ 40,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಪ್ರಿಮಿಯಂ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್‌ 9R

ಒನ್‌ಪ್ಲಸ್‌ 9R

ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 65W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 39,999ರೂ. ಬೆಲೆಗೆ ಪಟ್ಟಿಮಾಡಲಾಗಿದೆ. ಆದರೆ ಅಮೆಜಾನ್‌ ಈ ಫೋನ್‌ಗೆ 3,000 ರಿಯಾಯಿತಿ ಕೂಪನ್ ನೀಡುತ್ತಿದ್ದು ಈ ಫೋನ್‌ 36,999 ರೂಪಾಯಿಗಳಿಗೆ ಖರೀದಿಸಬಹುದಾಗಿದೆ. ಅಲ್ಲದೆ 14,900ರೂ. ವರೆಗೆ ಎಕ್ಸ್‌ಚೇಂಜ್ ಡಿಸ್ಕೌಂಟ್ ಆಫರ್ ಕೂಡ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE

ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಸದ್ಯ ಅಮೆಜಾನ್‌ನಲ್ಲಿ ಈ ಫೋನ್‌ ಅನ್ನು 39,990ರೂ.ಗಳಿಗೆ ಖರೀದಿಸಬಹುದಾಗಿದೆ.

ಶಿಯೋಮಿ ಮಿ 11X ಪ್ರೊ

ಶಿಯೋಮಿ ಮಿ 11X ಪ್ರೊ

ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿವೆ. ಇದು ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಹೊಂದಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಎಚ್‌ಎಂ 2 ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ Amazon ಮತ್ತು Mi.com ಇದನ್ನು 37,999 ರೂ.ಗೆ ಮಾರಾಟ ಮಾಡುತ್ತಿವೆ.

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್‌ 20 ಪ್ರೊ

ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ AMOLED ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್‌ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ 8GB RAM + 128GB ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಸದ್ಯ 36,999 ರೂ.ಗೆ ಮಾರಾಟವಾಗುತ್ತಿದೆ.

ಐಕ್ಯೂ 7 ಲೆಜೆಂಡ್

ಐಕ್ಯೂ 7 ಲೆಜೆಂಡ್

ಐಕ್ಯೂ 7 ಲೆಜೆಂಡ್ ಸ್ಮಾರ್ಟ್‌ಫೋನ್‌ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 39,990 ರೂ.ಆಗಿದೆ. ಅಮೆಜಾನ್ ಎಕ್ಸ್‌ಚೇಂಜ್ ಆಫರ್‌ನಲ್ಲಿ 14,900ರೂ. ವರೆಗೆ ರಿಯಾಯಿತಿ ನೀಡುತ್ತಿದೆ.

Best Mobiles in India

English summary
Here's the best smartphones that you can buy in India under Rs 40,000.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X