Home
ಸುದ್ದಿಜಾಲ

ಭಾರತದಲ್ಲಿ 8,000ರೂ.ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಹೈ ಎಂಡ್‌ ಬೆಲೆಯಿಂದ ಹಿಡಿದ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ದೊರೆಯುತ್ತವೆ. ಅದರಲ್ಲೂ ಸ್ಮಾರ್ಟ್‌ಫೋನ್‌ ವಲಯದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದೇ ಕಾರಣಕ್ಕೆ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿಗಳಾದ ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್‌, ಟೆಕ್ನೋ ಕಂಪೆನಿಗಳು ಬಜೆಟ್‌ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಬಜೆಟ್‌

ಹೌದು, ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡಿವೆ. ಸದ್ಯ ಮಾರುಕಟ್ಟೆಯಲ್ಲಿ ರಿಯಲ್‌ಮಿ, ಜಿಯೋ, ಟೆಕ್ನೋ, ಸ್ಯಾಮ್‌ಸಂಗ್‌ ಕಂಪೆನಿ ಪರಿಚಯಿಸಿರುವ ಬಜೆಟ್‌ ಬೆಲೆಯ ಫೋನ್‌ಗಳು ಜನಪ್ರಿಯತೆ ಪಡೆದುಕೊಂಡಿವೆ. ಹಾಗಾದ್ರೆ ಪ್ರಸ್ತುತ ನೀವು ಮಾರುಕಟ್ಟೆಯಲ್ಲಿ ಖರೀದಿಸಬಹುದಾದ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರಿಯಲ್‌ಮಿ C20

ರಿಯಲ್‌ಮಿ C20

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB + 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯಲ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅದು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ f/2.2 ಅಪಾರ್ಚರ್‌ ನೊಂದಿಗೆ 5 ಮೆಗಾ ಪಿಕ್ಸೆಲ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 7,975.ರೂ. ಒಳಗೆ ಲಭ್ಯವಾಗಲಿದೆ.

ಟೆಕ್ನೋ ಸ್ಪಾರ್ಕ್ 7

ಟೆಕ್ನೋ ಸ್ಪಾರ್ಕ್ 7

ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 6.52 ಇಂಚಿನ ಡಾಟ್ ನಾಚ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90.34% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 480 ನಿಟ್ಸ್ ಬ್ರೈಟ್‌ನೆಸ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ 1.8 GHz CPU Helio A25 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಆಧಾರಿತ HIOS 7.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 3GB RAM ವರೆಗೆ 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಜೊತೆಗೆ ಎಐ ಲೆನ್ಸ್ ಅನ್ನು ಒಳಗೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 7,699ರೂ. ಬೆಲೆ ಹೊಂದಿದೆ.

ರೆಡ್ಮಿ 9A

ರೆಡ್ಮಿ 9A

ರೆಡ್ಮಿ 9A ಸ್ಮಾರ್ಟ್‌ಫೋನ್‌ 6.53 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 720 x 1600 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G25 ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 13 MP ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 6,999ರೂ. ಬೆಲೆಯನ್ನು ಹೊಂದಿದೆ.

ಜಿಯೋಫೋನ್ ನೆಕ್ಸ್ಟ್‌

ಜಿಯೋಫೋನ್ ನೆಕ್ಸ್ಟ್‌

ಜಿಯೋಫೋನ್‌ ನೆಕ್ಸ್ಟ್ 5.45 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ QM215 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಈ ಫೋನ್ 'ಪ್ರಗತಿ ಓಎಸ್' ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಜಿಯೋ ಮತ್ತು ಗೂಗಲ್ ಅಪ್ಲಿಕೇಶನ್‌ಗಳು ಸಹ ಇದರಲ್ಲಿ ಪೂರ್ವ ಲೋಡ್ ಆಗಿವೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 5,630ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Here's the best smartphones under Rs 8000 in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+