ಬಜೆಟ್ ಬೆಲೆಯಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಸೃಷ್ಟಿಸಿರುವ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ಅತ್ಯಾಕರ್ಷಕ ಫೀಚರ್ಸ್‌ಗಳೊಂದಿಗೆ ಕೈ ಗೆಟಕುವ ಬೆಲೆಯಲ್ಲಿ ಬರುವ ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್ ಪ್ರಿಯರ ಹಾಟ್ ಫೇವರಿಟ್ ಎನಿಸಿಕೊಂಡಿದೆ. ಇದೇ ಕಾರಣಕ್ಕೆ ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಬಜೆಟ್ ಫೋನ್‌ಗಳಿಗೆ ಹೆಚ್ಚಿನ ಮಹತ್ವ ನೀಡಿವೆ.
ಹೌದು, ಭಾರತದಲ್ಲಿ ಬಜೆಟ್ ಬೆಲೆಯ ಫೋನ್‌ಗಳು ಸಾಕಷ್ಟು ಸದ್ದು ಮಾಡುತ್ತಿವೆ. ಈ ಸಾಲಿನಲ್ಲಿ ಸ್ಯಾಮ್‌ಸಂಗ್, ವಿವೋ, ರಿಯಲ್‌ಮಿ, ಸೇರಿದಂತೆ ಇನ್ನು ಅನೇಕ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಸೇರಿವೆ. ಹಾಗಾದ್ರೆ ಪ್ರಸ್ತುತ ಮೊಬೈಲ್ ಮಾರುಕಟ್ಟೆಯಲ್ಲಿ ಸೌಂಡ್ ಮಾಡುತ್ತಿರುವ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G: ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 14,499ರೂ. ಬೆಲೆಯಲ್ಲಿ ಲಭ್ಯವಿದೆ.
ರಿಯಲ್‌ಮಿ C55: ರಿಯಲ್‌ಮಿ C55 ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಸಾಕಷ್ಟು ಟ್ರೆಂಡ್ ಸೆಟ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ + ಎಲ್‌ಡಿಸಿ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ T2x: ಬಜೆಟ್ ಬೆಲೆಯಲ್ಲಿ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿರುವ ಸ್ಮಾರ್ಟ್‌ಫೋನ್‌ಗಳ ಸಾಲಿನಲ್ಲಿ ವಿವೋ T2x 5G ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 14,499ರೂ.ಬೆಲೆಗೆ ಲಭ್ಯವಿದೆ.
ರಿಯಲ್‌ಮಿ 10: ನೀವು ಬಜೆಟ್ ಬೆಲೆಯಲ್ಲಿ ನೋಡಬಹುದಾದ ಮತ್ತೊಂದು ಸ್ಮಾರ್ಟ್‌ಫೋನ್ ರಿಯಲ್‌ಮಿ 10 4G ಆಗಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ N55: ಇನ್ನು ನೀವು ಬಜೆಟ್ ಬೆಲೆಯಲ್ಲಿ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಕೂಡ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ನಿಮಗೆ 10,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








