ಕೈ ಗೆಟಕುವ ಬೆಲೆಯಲ್ಲಿ ಲಭ್ಯವಾಗುವ ಏರ್‌ಟೆಲ್ ಪ್ರಿಪೇಯ್ಡ್ ಪ್ಲಾನ್‌ಗಳು!
ದೇಶದ ಟೆಲಿಕಾಂ ವಲಯದಲ್ಲಿ ಏರ್‌ಟೆಲ್ ಟೆಲಿಕಾಂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಟೆಲಿಕಾಂ ದೈತ್ಯ ಜಿಯೋ ಪ್ರಬಲ ಪೈಪೋಟಿ ನೀಡುತ್ತಾ ಬಂದಿದೆ. ಇದು ತನ್ನ ಬಳಕೆದಾರರ ಅಗತ್ಯಗಳಿಗೆ ಸರಿಹೊಂದುವಂತೆ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿದೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಅನಿಯಮಿತ ಕರೆ ಪ್ರಯೋಜನಗಳನ್ನು ಈ ಪ್ಲಾನ್‌ಗಳಲ್ಲಿ ಪಡೆಯಬಹುದಾಗಿದೆ. ಅಲ್ಪಾವಧಿ ಮಾನ್ಯತೆಯ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಕೂಡ ಲಭ್ಯವಾಗಲಿವೆ.

ಹೌದು, ಏರ್‌ಟೆಲ್ ಗ್ರಾಹಕರ ಅನುಕೂಲಕ್ಕಾಗಿ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ಅಗ್ಗದ ಬೆಲೆಯ ಜೊತೆಗೆ ದುಬಾರಿ ಬೆಲೆಯ ಪ್ರಿಪೇಯ್ಡ್ ಪ್ಲಾನ್‌ಗಳು ಕೂಡ ಸೇರಿವೆ. ಇದರಲ್ಲಿ ಹೆಚ್ಚಿನ ಜನರು ಅಲ್ಪಾವಧಿ ಪ್ಲಾನ್‌ಗಳನ್ನು ಬಯಸುತ್ತಾರೆ. ಇನ್ನು ಹೆಚ್ಚಿನ ಮಂದಿ ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗಾದ್ರೆ 599ರೂ.ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಏರ್‌ಟೆಲ್ ಟೆಲಿಕಾಂನ ಟಾಪ್ ಪ್ರಿಪೇಯ್ಡ್ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಏರ್‌ಟೆಲ್ 179 ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂ 179ರೂ. ಪ್ರಿಪೇಯ್ಡ್ ಪ್ಲಾನ್ 28 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿದಿನ 100 SMS ಮತ್ತು ಅನಿಯಮಿತ ಕರೆ ಪ್ರಯೋಜನಗಳು ಲಭ್ಯವಾಗಲಿವೆ. ಇದಲ್ಲದೆ ಒಟ್ಟು 2GB ಡೇಟಾ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಏರ್‌ಟೆಲ್ 265 ರೂ.ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ 265ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಕೂಡ 28 ದಿನಗಳ ಮಾನ್ಯತೆ ಹೊಂದಿದೆ. ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿದಿನ 1 GB ಡೇಟಾ ಲಭ್ಯವಿದೆ. ಇದಲ್ಲದೆ ಎಲ್ಲಾ ನೆಟ್‌ವರ್ಕ್ ಬೆಂಬಲಿಸುವ ಅನಿಯಮಿತ ಕರೆಗಳು ಹಾಗೂ ದಿನಕ್ಕೆ 100 ಎಸ್‌ಎಂಎಸ್ ಸೇವೆಗಳು ಲಭ್ಯವಾಗಲಿದೆ. ಈ ಯೋಜನೆಯೊಂದಿಗೆ ಅಮೆಜಾನ್ ಪ್ರೈಮ್ ವೀಡಿಯೊಗೆ ಮೊಬೈಲ್ ಚಂದಾದಾರಿಕೆಯು ಒಂದು ತಿಂಗಳವರೆಗೆ ಲಭ್ಯವಿರುತ್ತದೆ.

ಏರ್‌ಟೆಲ್ 299 ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂ 299ರೂ.ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಈ ಯೋಜನೆಯಲ್ಲಿಯೂ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 549ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 599ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂ 599ರೂ.ಗಳ ಪ್ರಿಪೇಯ್ಡ್ ಪ್ಲಾನ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಈ ಪ್ಲಾನ್ ಪ್ರತಿದಿನ 3GB ಡೇಟಾ ಮತ್ತು 100 SMS ಪ್ರಯೋಜನ ದೊರೆಯಲಿದೆ. ಜೊತೆಗೆ ಅನಿಯಮಿತ ಕರೆ ಪ್ರಯೋಜನ ಸಹ ದೊರೆಯಲಿದೆ. ಇದಲ್ಲದೆ ಹೆಚ್ಚುವರಿಯಾಗಿ ಬಳಕೆದಾರರು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಅಮೆಜಾನ್ ಪ್ರೈಮ್ ಮತ್ತು ವಿಂಕ್ ಮ್ಯೂಸಿಕ್‌ನಂತಹ ಉತ್ತಮ ಅಪ್ಲಿಕೇಶನ್‌ಗಳಿಗೆ ಉಚಿತ ಚಂದಾದಾರಿಕೆ ದೊರೆಯಲಿದೆ. ಈ ಪ್ಲಾನ್ 28 ದಿನಗಳ ಮಾನ್ಯತೆಯನ್ನು ಪಡೆದುಕೊಂಡಿದೆ.


Click it and Unblock the Notifications








