Home
ಸುದ್ದಿಜಾಲ

ಭಾರತದಲ್ಲಿ ಈ ತಿಂಗಳು ನೀವು 15,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಸ್ಮಾರ್ಟ್‌ಫೋನ್‌ ಪ್ರಿಯರ ಆಧ್ಯತೆಗೆ ತಕ್ಕಂತೆ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಸದ್ಯ ಹೊಸ ವರ್ಷದ ಸಂಭ್ರಮದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳು ಕೂಡ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಆದರಿಂದ ಹಲವು ಕಂಪೆನಿಗಳು ಹಲವು ಆಕರ್ಷಕ ಬಜೆಟ್‌ ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ನೀವು ಬಜೆಟ್‌ ಬೆಲೆಯಲ್ಲಿ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸಿದರೆ ಹಲವು ಆಯ್ಕೆಯ ಫೋನ್‌ಗಳು ಲಭ್ಯವಿದೆ. ವಿಭಿನ್ನ ಬ್ರ್ಯಾಂಡ್‌ಗಳ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳನ್ನ ನೀವು 15,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗಾದ್ರೆ ಭಾರತದಲ್ಲಿ ಜನವರಿ ತಿಂಗಳಿನಲ್ಲಿ 15,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ ಸದ್ಯ 15,000ರೂ. ಒಳಗೆ ನೀವು ಖರೀದಿಸಬಹುದಾದ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಗೇಮಿಂಗ್‌ ಅನ್ನು ಬೆಂಬಲಿಸುವ ಅನೇಖ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು. ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ 11,499 ರಿಂದ ಪ್ರಾರಂಭವಾಗಲಿದೆ. ಇದು ಫ್ಲಿಪ್‌ಕಾರ್ಟ್‌, ಅಮೆಜಾನ್‌ ಮತ್ತು ರಿಯಲ್‌ಮಿ ಆನ್‌ಲೈನ್ ಸ್ಟೋರ್‌ನಲ್ಲಿ ಲಭ್ಯವಿದೆ.

ಮೋಟೋ G51 5G

ಮೋಟೋ G51 5G

ಮೋಟೋ G51 5G ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಮೋಟೋ G51 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ರಾಪಿಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್‌ 14,999ರೂ.ಗಳಿಗೆ ದೊರೆಯಲಿದೆ.

ರೆಡ್ಮಿ ನೋಟ್‌ 10T 5G

ರೆಡ್ಮಿ ನೋಟ್‌ 10T 5G

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಎಫ್ / 1.79 ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಗೇಮಿಂಗ್‌ಗೆ ಸಪೋರ್ಟ್‌ ಮಾಡಲಿದೆ. ಸದ್ಯ ಇದರ ಎಂಟ್ರಿ ಲೆವೆಲ್‌ ಬೆಲೆ 14,999ರೂ.ಆಗಿದೆ.

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಕೂಡ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದುಕೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 14,499ರೂ.ಗಳಿಂದ ಪ್ರಾರಂಭವಾಗುತ್ತದೆ.

Best Mobiles in India

English summary
five best gaming smartphones from brands such as Realme, Poco, and Motorola.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+