ಏಪ್ರಿಲ್ ತಿಂಗಳಿನಲ್ಲಿ 20,000ರೂ.ಒಳಗೆ ಲಭ್ಯವಾಗುವ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು!
ಟೆಕ್ ವಲಯದಲ್ಲಿ ಮಿಡ್ ರೆಂಜ್ ಪ್ರೈಸ್ ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದ್ದೆ ಇರುತ್ತದೆ. ಅತ್ಯುತ್ತಮ ಫೀಚರ್ಸ್ ಹಾಗೂ ಹೆಚ್ಚಿನ ಕಾರ್ಯದಕ್ಷತೆಗೆ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಉತ್ತಮ ಆಯ್ಕೆಯಾಗಿವೆ. ಇದೇ ಕಾರಣಕ್ಕೆ ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್ ಮತ್ತು ಮೊಟೊರೊಲಾ ದಂತಹ ಜನಪ್ರಿಯ ಕಂಪೆನಿಗಳು ಮಧ್ಯಮ ಶ್ರೇಣಿಯಲ್ಲಿ ಅನೇಕ ಫೋನ್‌ಗಳನ್ನು ಪರಿಚಯಿಸಿವೆ. ಇವುಗಳಲ್ಲಿ 20,000ರೂ.ವರೆಗಿನ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸಂಚಲನ ಸೃಷ್ಟಿಸಿವೆ.

ಹೌದು, ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈ ಫೋನ್‌ಗಳು ಉತ್ತಮ ಫೀಚರ್ಸ್ ಜೊತೆಗೆ ಸ್ಟೈಲಿಶ್ ಲುಕ್ ಅನ್ನು ಕೂಡ ಹೊಂದಿರುತ್ತವೆ. ಆಕರ್ಷಕ ಡಿಸ್‌ಪ್ಲೇ ವೇಗದ ಪ್ರೊಸೆಸರ್ ಹಾಗೂ ಹೆಚ್ಚಿನ ಬ್ಯಾಟರಿ ಸಾಮರ್ಥ್ಯವನ್ನು ಕಾಣಬಹುದಾಗಿದೆ. ಹಾಗದ್ರೆ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ 20,000ರೂ.ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 9 5G SE
ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, 1,080 x 2,412 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಕ್ವಿಕ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಸೇರಿವೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಬೆಲೆ 19,999ರೂ.ಗಳಿಂದ ಪ್ರಾರಂಭವಾಗುತ್ತದೆ.

ರೆಡ್ಮಿ ನೋಟ್ 11 ಪ್ರೊ
ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಬೆಲೆ 17,999ರೂ.ಗಳಿಂದ ಪ್ರಾರಂಭವಾಗುತ್ತದೆ.

ವಿವೋ T1 5G
ವಿವೋ T1 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ ಫನ್ ಟಚ್ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ವಿವೋ T1 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ ಸೂಪರ್ ನೈಟ್ ಮೋಡ್ ಮತ್ತು ಮಲ್ಟಿ ಸ್ಟೈಲ್ ಪೋರ್ಟ್ರೇಟ್ ಮೋಡ್ ಅನ್ನು ಒಳಗೊಂಡಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ 15,990ರೂ.ಆಗಿದ್ದು, HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ 1,000 ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ.

ಪೊಕೊ X4 ಪ್ರೊ 5G
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ 18,999ರೂ. ಬೆಲೆ ಹೊಂದಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ಆಫರ್ ಕೂಡ ಲಭ್ಯವಿದೆ.


Click it and Unblock the Notifications








