Home
ಸುದ್ದಿಜಾಲ

ವೇಗದ ಚಾರ್ಜಿಂಗ್‌ ಬೆಂಬಲಿಸುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ವಿನ್ಯಾಸ ಸಾಕಷ್ಟು ಬದಲಾಗಿದೆ. ಆಕರ್ಷಕ ಡಿಸ್‌ಪ್ಲೇ, ಕ್ಯಾಮೆರಾ ವಿನ್ಯಾಸ ಸೇರಿದಂತೆ ವೇಗದ ಚಾರ್ಜಿಂಗ್‌ನಂತಹ ಹೊಸ ಟೆಕ್ನಾಲಜಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಸೇರಿಸಲಾಗ್ತಿದೆ. ಇದೇ ಕಾರಣಕ್ಕೆ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ವೇಗದ ಚಾರ್ಜಿಂಗ್‌ ಕಾರಣಕ್ಕಾಗಿ ಹೆಚ್ಚು ಗಮನ ಸೆಳೆದಿವೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ಗಳ ಚಾರ್ಜಿಂಗ್‌ ವಿಧಾನ ಬದಲಾಗಿದೆ. ವೇಗದ ಚಾರ್ಜಿಂಗ್‌ ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಅಗ್ಗದ ಬೆಲೆಯ ಫೋನ್‌ಗಳು 18W ವೇಗದ ಚಾರ್ಜಿಂಗ್ ತಂತ್ರಜ್ಞಾನ ಹೊಂದಿದ್ದರೆ, ಮಿಡ್‌ ರೇಂಜ್‌ ಫೋನ್‌ಗಳು 33W ವರೆಗಿನ ವೇಗದ ಚಾರ್ಜಿಂಗ್ ಬೆಂಬಲಿಸಲಿವೆ. ಈ ಸ್ಮಾರ್ಟ್‌ಫೋನ್‌ಗಳನ್ನು ಕೇವಲ ಒಂದು ಗಂಟೆ ಅವಧಿಯಲ್ಲಿ ಬ್ಯಾಟರಿಯನ್ನು ಟಾಪ್ ಅಪ್ ಮಾಡುತ್ತದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ನೀವು ಕೂಡ 30,000ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ವೇಗದ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2 ಸ್ಮಾರ್ಟ್‌ಫೋನ್‌ 65W ವೇಗದ ಚಾರ್ಜಿಂಗ್ ಬೆಬಲಿಸಲಿದೆ. ಇದು 4500mAh ಸಾಮರ್ಥ್ಯದ ಬ್ಯಾಟರಿಯನ್ನು 30 ನಿಮಿಷಗಳಲ್ಲಿ ಚಾರ್ಜ್‌ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 5G ಪ್ರೊಸೆಸರ್‌ ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ 24,999 ರೂ. ಆಗಿದೆ.

ಒಪ್ಪೋ ರೆನೋ 7

ಒಪ್ಪೋ ರೆನೋ 7

ಒಪ್ಪೋ ರೆನೋ 7 ಕೂಡ 65W ವೇಗದ ಚಾರ್ಜಿಂಗ್ ಬೆಂಬಲಿಸುವ ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದನ್ನು ಚಾರ್ಜ್‌ ಮಾಡಲು 30 ನಿಮಿಷಗಳಿಗಿಂತ ಸ್ವಲ್ಪ ಹೆಚ್ಚು ಸಮಯ ಬೇಕಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. 90Hz ರಿಫ್ರೆಶ್‌ ರೇಟ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 ಪ್ರೊಸೆಸರ್ ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್‌-ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮರಾ ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ 28,999 ರೂ.ಆಗಿದೆ.

ಶಿಯೋಮಿ ಮಿ 11i ಹೈಪರ್‌ಚಾರ್ಜ್‌

ಶಿಯೋಮಿ ಮಿ 11i ಹೈಪರ್‌ಚಾರ್ಜ್‌

ಇನ್ನು ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಡ್ಯುಯಲ್-ಸೆಲ್ ಲಿಥಿಯಂ ಪಾಲಿಮರ್ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ 26,999 ರೂ.ಗಳಿಂದ ಪ್ರಾರಂಭವಾಗುತ್ತದೆ.

ರಿಯಲ್‌ಮಿ 9 ಪ್ರೊ ಪ್ಲಸ್

ರಿಯಲ್‌ಮಿ 9 ಪ್ರೊ ಪ್ಲಸ್

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲಿಸಲಿದೆ. ಇದಲ್ಲದೆ 16-ಮೆಗಾಪಿಕ್ಸೆಲ್ ಸೋನಿ IMX471 ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 24,999 ರೂ. ಆರಂಭಿಕ ಬೆಲೆಗೆ ಲಭ್ಯವಿದೆ.

ವಿವೋ V23

ವಿವೋ V23

ವಿವೋ V23 ಸ್ಮಾರ್ಟ್‌ಫೋನ್‌ 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 30 ನಿಮಿಷಗಳಲ್ಲಿ ಸುಮಾರು 68% ಚಾರ್ಜ್ ಅನ್ನು ನೀಡುತ್ತದೆ. ಇನ್ನು ಈ ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ HDR10+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ಫನ್‌ಟಚ್‌ 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ 4200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 29,990ರೂ. ಬೆಲೆ ಹೊಂದಿದೆ.

Best Mobiles in India

English summary
Here's Top mobile phones with fast-charging battery under Rs 30,000 in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+