ಒಂದು ಲಕ್ಷಕ್ಕಿಂತ ಹೆಚ್ಚಿನ ಬೆಲೆ ಪಡೆದಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇದು ಸ್ಮಾರ್ಟ್‌ಫೋನ್‌ ಜಮಾನ, ಪ್ರತಿಯೊಬ್ಬರೂ ಕೂಡ ಸ್ಮಾರ್ಟ್‌ಫೋನ್‌ ಹೊಂದಿರುವುದಕ್ಕೆ ಬಯಸುತ್ತಾರೆ. ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಂದ ಹೊರಗಡೆ ಹೋಗುವುದು ಕೂಡ ಅಪರೂಪ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸ್ಮಾರ್ಟ್‌ಫೋನ್‌ ಕಂಪೆನಿಗಳು ಭಿನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಅದರಂತೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಐದು ಸಾವಿರದಿಂದ ಹಿಡಿದ ಎರಡು ಲಕ್ಷ ರೂ.ಬೆಲೆ ಪಡೆದಿರುವ ಸ್ಮಾರ್ಟ್‌ಫೋನ್‌ಗಳಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ದೊರೆಯುತ್ತವೆ. ನಿಮ್ಮ ಅಗತ್ಯಕ್ಕೆ ತಕ್ಕಂತೆ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಅವಕಾಶವಿದೆ. ಹೈ ಎಂಡ್‌ ಬೆಲೆಯಿಂದ ಹಿಡಿದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿವೆ. ಇದರಲ್ಲಿ ಹೈ ಎಂಡ್‌ ಫೀಚರ್ಸ್‌ ಹಾಗೂ ಹೈ ಎಂಡ್‌ ಪ್ರೊಸೆಸರ್‌ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ದುಬಾರಿ ಬೆಲೆಯನ್ನು ಪಡೆದುಕೊಂಡಿವೆ. ದುಬಾರಿ ಬೆಲೆಯನ್ನು ಹೊಂದಿದ್ದರೂ ಕೂಡ ಮಾರುಕಟ್ಟೆಯಲ್ಲಿ ಸಖತ್‌ ಸೌಂಡ್‌ ಕೂಡ ಮಾಡುತ್ತಿವೆ.

ಸ್ಮಾರ್ಟ್‌ಫೋನ್‌ಗಳು

ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ವಿಶೇಷ ಫೀಚರ್ಸ್‌ಗಳು ಹಾಗೂ ತಮ್ಮ ವಿಶೇಷ ವಿನ್ಯಾಸದ ಕಾರಣಕ್ಕೆ ಗಮನ ಸೆಳೆದಿವೆ. ಪ್ರಮುಖ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳ ದುಬಾರಿ ಬೆಲೆ ಫೋನ್‌ಗಳು ಇಂದಿಗೂ ಮಾರುಕಟ್ಟೆಯಲ್ಲಿ ತಮ್ಮ ಬೇಡಿಕೆಯನ್ನು ಉಳಿಸಿಕೊಂಡಿವೆ. ಭಾರತದ ಮಾರುಕಟ್ಟೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಬೆಲೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳಿವೆ. ಹಾಗಾದ್ರೆ ಭಾರತದಲ್ಲಿ ಒಂದು ಲಕ್ಷಕ್ಕೂ ಅಧಿಕ ಬೆಲೆಯಲ್ಲಿ ಲಭ್ಯವಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ಆಪಲ್‌ ಐಫೋನ್‌ 13 ಪ್ರೊ ಮ್ಯಾಕ್ಸ್‌

ಆಪಲ್‌ ಐಫೋನ್‌ 13 ಪ್ರೊ ಮ್ಯಾಕ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಫೋನ್ A15 ಬಯೋನಿಕ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಐಫೋನ್ 13 ಪ್ರೊ ಮ್ಯಾಕ್ಸ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಪ್ರಸ್ತುತ ಆಪಲ್‌ ಐಫೋನ್‌ 13 ಪ್ರೊ ಮ್ಯಾಕ್ಸ್‌ 128GB ಸ್ಟೊರೇಜ್‌ ಆಯ್ಕೆಯು ಅಮೆಜಾನ್‌ನಲ್ಲಿ 1,20,900ರೂ.ಬೆಲೆಯನ್ನು ಹೊಂದಿದೆ.

ಆಪಲ್‌ ಐಫೋನ್‌ 12 ಪ್ರೊ ಮ್ಯಾಕ್ಸ್‌

ಆಪಲ್‌ ಐಫೋನ್‌ 12 ಪ್ರೊ ಮ್ಯಾಕ್ಸ್‌

ಐಫೋನ್‌ 12 ಪ್ರೊ ಮ್ಯಾಕ್ಸ್‌ ಫೋನ್‌ 6.7-ಇಂಚಿನ ರೇಟಿನಾ XDR ಮಾದರಿಯ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಪಲ್‌ನ ಎ 14 ಬಯೋನಿಕ್ ಸಿಸ್ಟಮ್-ಆನ್-ಚಿಪ್‌ಸೆಟ್‌ ಪ್ರೊಸೆಸರ್‌ ಕಾರ್ಯನಿರ್ವಹಿಸಲಿದೆ. ಐಫೋನ್ 12 ಪ್ರೊ ಮ್ಯಾಕ್ಸ್ ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮೂರು ಕ್ಯಾಮೆರಾಗಳು ಕೂಡ ಕ್ರಮವಾಗಿ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿವೆ. ಇದಲ್ಲದೆ ಈ ಐಫೋನ್‌ 3687mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ 128GB ಸ್ಟೋರೇಜ್‌ ಮಾದರಿಯು ಕ್ರೋಮಾ ಸೈಟ್‌ನಲ್ಲಿ 1,19,900ರೂ. ಬೆಲೆಗೆ ಲಭ್ಯವಿದೆ.

ಆಪಲ್‌ ಐಫೋನ್‌ 11 ಪ್ರೊ ಮ್ಯಾಕ್ಸ್‌

ಆಪಲ್‌ ಐಫೋನ್‌ 11 ಪ್ರೊ ಮ್ಯಾಕ್ಸ್‌

ಐಫೋನ್ 11 ಪ್ರೊ ಮ್ಯಾಕ್ಸ್‌ ಫೋನ್‌ 6.5 ಇಂಚಿನ ಸೂಪರ್ ರೇಟಿನಾ XDR ಡಿಸ್‌ಪ್ಲೇಯನ್ನು ಹೊಂದಿದೆ. ಇದು A13 ಬಯೋನಿಕ್‌ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮೂರು ಕ್ಯಾಮೆರಾಗಳು ಕೂಡ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿವೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್‌ಮೋಡ್‌ ಮತ್ತು ಎಚ್‌ಆರ್‌ಡಿ ಸೌಲಭ್ಯಗಳನ್ನು ಒಳಗೊಂಡಿದೆ. ಜೊತೆಗೆ 3969mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 1,17,100ರೂ.ಬೆಲೆಯಲ್ಲಿ ದೊರೆಯಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್ 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್ 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್ಪ್ಲೇ ಪಡೆದಿದೆ. ಹಾಗೆಯೇ ಫೋನಿನ ಕವರ್‌ ಸ್ಕ್ರೀನ್ 6.2-ಇಂಚಿನ HD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ ಪಡೆದಿವೆ. ಜೊತೆಗೆ 4,400mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 25W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನಿನ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ನಲ್ಲಿ 1,26,600ರೂ.ಬೆಲೆಗೆ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 2

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 2

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 2 ಸ್ಮಾರ್ಟ್‌ಫೋನ್‌ 7.6-ಇಂಚಿನ QXGA+ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಇದರ ಎರಡನೇ ಡಿಸ್‌ಪ್ಲೇ 6.2-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಆಗಿದೆ. ಇದು ಸೂಪರ್ ಅಮೋಲೆಡ್ ಪ್ಯಾನೆಲ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದು 4500mAh ಸಾಮರ್ಥ್ಯದ ಡ್ಯುಯಲ್ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 12 GB RAM ಮತ್ತು 256 GB ಸ್ಟೋರೇಜ್‌ ಮಾದರಿಯ ಆಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ1,14,999ರೂ.ಬೆಲೆಗೆ ದೊರೆಯಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ 512GB

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ 512GB

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು 1,750ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಮಟ್ಟವನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 45W ನಲ್ಲಿ ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 12GB RAM ಮತ್ತು 512GB ಸ್ಟೋರೇಜ್‌ ಮಾದರಿಯು ಅಮೆಜಾನ್‌ನಲ್ಲಿ 1,02,999ರೂ.ಬೆಲೆಯನ್ನು ಪಡೆದುಕೊಂಡಿದೆ.

Best Mobiles in India

English summary
Here's Top SmartPhones Under Rs 1,50,000 in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X