Just In
- 3 hrs ago
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- 4 hrs ago
Valentines Day ಗಿಫ್ಟ್ ಸರ್ಚ್ ಮಾಡ್ತಾ ಇದ್ದೀರಾ?..ಇಲ್ಲಿವೆ ನೋಡಿ ಅತ್ಯುತ್ತಮ ಉಡುಗೊರೆ
- 5 hrs ago
ವಾಟ್ಸಾಪ್ಗೆ ಈ ಅಚ್ಚರಿಯ ಆಯ್ಕೆ ಸೇರೋದು ಪಕ್ಕಾ! ಇದರ ಬಗ್ಗೆ ಕೂಡಲೇ ತಿಳಿದುಕೊಳ್ಳಿ!
- 5 hrs ago
ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ; ಈ ಪ್ಲ್ಯಾನ್ 28 ದಿನಕ್ಕಲ್ಲ ಬದಲಾಗಿ ಒಂದು ತಿಂಗಳ ಮಾನ್ಯತೆ!
Don't Miss
- News
Aero India 2023: 'ಇಂಡಿಯಾ ಪೆವಿಲಿಯನ್' ಮಧ್ಯದಲ್ಲಿ ಭಾರತದ ಈ ಪ್ರತಿಷ್ಠಿತ ವಿಮಾನ ಪ್ರದರ್ಶನ- ವಿನ್ಯಾಸ, ತೂಕ, ಮಾಹಿತಿ
- Sports
Ranji Trophy 2023: ಕ್ವಾರ್ಟರ್ ಫೈನಲ್ನಲ್ಲಿ ಉತ್ತರಾಖಂಡ ವಿರುದ್ಧ ಗೆಲುವಿನತ್ತ ದಾಪುಗಾಲಿಟ್ಟ ಕರ್ನಾಟಕ
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Lifestyle
ಪುರುಷರಿಗಿಂತ ಮಹಿಳೆಯರಿಗೆ ತೂಕ ಇಳಿಕೆ ತುಂಬಾ ಕಷ್ಟ, ಏಕೆ?
- Movies
ಕಿರುತೆರೆ ಮೂಲಕ ನಟನೆಗೆ ಕಾಲಿಟ್ಟ ದೀಕ್ಷಿತ್ ಈಗ ಚಿತ್ರರಂಗದಲ್ಲಿ ಬ್ಯುಸಿ
- Finance
ಉದ್ಯೋಗಿಗಳಿಗೆ ಟೊಯೋಟಾ ಗ್ಲಾನ್ಜಾ ಗಿಫ್ಟ್ ನೀಡಿದ ರಮೇಶ್ ಮರಂದ್ ಯಾರು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
50,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
2023ಕ್ಕೆ ಎಂಟ್ರಿ ನೀಡ್ತಿದ್ದ ಹಾಗೇ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಹೊಸ ಮಾದರಿಯ 5G ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿವೆ. ಇದರಲ್ಲಿ ಹಲವು ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಕೂಡ ಸೇರಿವೆ. ಆದರೂ ಸ್ಮಾರ್ಟ್‌ಫೋನ್ ಪ್ರಿಯರು ತಮ್ಮ ನೆಚ್ಚಿನ ಬ್ರ್ಯಾಂಡ್‌ಗಳನ್ನು ಖರೀದಿಸಲು ಬಯಸುತ್ತಾರೆ. ಇವುಗಳಲ್ಲಿ ಬಜೆಟ್ ಬೆಲೆಯ ಫೋನ್ ಜೊತೆಗೆ ಹೈ ಎಂಡ್ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ.

ಹೌದು, ಸ್ಮಾರ್ಟ್‌ಫೋನ್ ಪ್ರಿಯರಿಗೆ ಈ ವರ್ಷವೂ ಹಲವು ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಲಭ್ಯವಿದೆ. ಇದರಲ್ಲಿ ಒನ್‌ಪ್ಲಸ್, ಶಿಯೋಮಿ, ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇನ್ನು ನೀವು 45,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ನಿಮಗೆ ಹಲವು ಆಯ್ಕೆಗಳು ದೊರೆಯಲಿವೆ. ಹಾಗಾದ್ರೆ 50,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ 11T ಪ್ರೊ 5G
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ಆಯ್ಕೆಯನ್ನು ನೀವು 36,999ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM2 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಒನ್‌ಪ್ಲಸ್ 10R 5G
ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 34,999ರೂ ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಒಪ್ಪೋ ರೆನೋ 8 ಪ್ರೊ 5G
ಒಪ್ಪೋ ರೆನೋ 8 ಪ್ರೊ 5G ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 45,999ರೂ. ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ನೀವು ಪ್ರಸ್ತುತ 8GB RAM + 128GB ಸ್ಟೋರೇಜ್ ಆಯ್ಕೆಗಾಗಿ 35,999ರೂ. ಬೆಲೆಯಲ್ಲಿ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470