ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಬಿಗ್‌ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

|

ಸ್ಮಾರ್ಟ್‌ಫೋನ್‌ ಖರೀದಿಸುವಾಗ ಕಲವು ಅಂಶಗಳನ್ನು ಸಾಮಾನ್ಯವಾಗಿ ಗಮನಿಸುತ್ತೇವೆ. ಅದರಲ್ಲೂ ಹೆಚ್ಚಿನ ಜನರು ಕ್ಯಾಮೆರಾ ಫೀಚರ್ಸ್‌, ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಾರೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಬಿಗ್‌ ಬ್ಯಾಟರಿ ಸಾಮರ್ಥ್ಯ, ಅತ್ಯುತ್ತಮ ಕ್ಯಾಮೆರಾ ವಿನ್ಯಾಸ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿವೆ. ಇಂದಿನ ದಿನಗಳಲ್ಲಿ 4,000mAh, 5,000mAh, 6,000mAh ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸೌಂಡ್‌ ಮಾಡ್ತಿವೆ.

ಸ್ಮಾರ್ಟ್‌ಫೋನ್

ಹೌದು, ಹೊಸ ಸ್ಮಾರ್ಟ್‌ಫೋನ್ ಖರೀದಿ ಮಾಡುವಾಗ ಫೋನಿನ ಬ್ಯಾಟರಿ ಸಾಮರ್ಥ್ಯ ಪ್ರಮುಖವಾಗಿರುತ್ತದೆ. ಅದರಲ್ಲೂ ಇಂದಿನ ಯುವಜನತೆ ಗೇಮಿಂಗ್‌ಗೆ ಸೂಕ್ತವಾಗುವ, ಲಾಂಗ್‌ ವೀಡಿಯೊ ರೆಕಾರ್ಡ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಇನ್ನು ಮಾರುಕಟ್ಟೆಯಲ್ಲಿ ಬಿಗ್‌ ಬ್ಯಾಟರಿ ಸಾಮರ್ಥ್ಯದ ಹಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಬಜೆಟ್‌ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಆಯ್ಕೆಯನ್ನು ಹೊಂದಿದೆ. ಸದ್ಯ ನೀವು ಮಾರುಕಟ್ಟೆಯಲ್ಲಿ 20,000ರೂ.ಒಳಗೆ ಖರೀದಿಸಬಹುದಾದ 5,000mAh ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್‌ 10S

ರೆಡ್ಮಿ ನೋಟ್‌ 10S

ಶಿಯೋಮಿ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ ರೆಡ್ಮಿ ನೋಟ್‌ 10S 5,000mAh ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 14,999ರೂ.ಗಳಿಗೆ ಲಭ್ಯವಾಗಲಿದೆ.

ರಿಯಲ್‌ಮಿ 8s

ರಿಯಲ್‌ಮಿ 8s

ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಬಿಗ್‌ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಲ್‌ಮಿ 8s ಸ್ಮಾರ್ಟ್‌ಫೋನ್‌ ಕೂಡ ಒಂದು. ಈ ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್‌ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದು 5GB ವರ್ಚುವಲ್ RAM ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಹೊಂದಿದೆ. ಪ್ರಸ್ತುತ 17,999ರೂ.ಬೆಲೆ ಹೊಂದಿದೆ.

ರಿಯಲ್‌ಮಿ ನಾರ್ಜೊ 30

ರಿಯಲ್‌ಮಿ ನಾರ್ಜೊ 30

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಕೂಡ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ರಿಯಲ್‌ಮಿ ನಾರ್ಜೊ 30 ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಹೊಂದಿದ್ದು, 30W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಫೋನ್ ಸ್ಟ್ಯಾಂಡ್‌ಬೈನಲ್ಲಿ 32 ದಿನಗಳವರೆಗೆ, 48 ಗಂಟೆಗಳ ಕರೆ, 16 ಗಂಟೆಗಳ ಆನ್‌ಲೈನ್ ಮೂವಿ ಸ್ಟ್ರೀಮಿಂಗ್ ಅಥವಾ ಒಂದೇ ಚಾರ್ಜ್‌ನಲ್ಲಿ 11 ಗಂಟೆಗಳ ಗೇಮಿಂಗ್ ಇರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 13,499ರೂ.ಗಳಿಗೆ ಲಭ್ಯವಿದೆ.

ಮೊಟೊರೊಲಾ ಮೋಟೋ G9

ಮೊಟೊರೊಲಾ ಮೋಟೋ G9

ಮೊಟೊರೊಲಾ ಕಂಪೆನಿಯ ಮೋಟೋ G9 ಫೋನ್ ಕೂಡ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಮ್ಯಾಕ್ಸ್‌ವಿಷನ್ ಡಿಸ್‌ಪ್ಲೇಯನ್ನ ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲವನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ಸಾಮರ್ಥ್ಯ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯವಾಗಿ 512GB ಮೆಮೊರಿ ವಿಸ್ತರಿಸುವ ಅವಕಾಶವಿದೆ. ಮೊಟೊ G9 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್‌ ಪಿಕ್ಸಲ್ ಬೆಂಬಲಿತ 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇನ್ನು ಮೊಟೊರೊಲಾ ಮೋಟೋ G9 ಸ್ಮಾರ್ಟ್‌ಫೋನ್‌ ಅನ್ನು 10,999ರೂ. ಬೆಲೆಗೆ ಖರೀದಿಸಬಹುದು.

Best Mobiles in India

English summary
Here's Top smartphones with 5000mAh battery under Rs 20,000.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X