15,000ರೂ. ಒಳಗೆ ಲಭ್ಯವಾಗುವ ವಿವೋ ಕಂಪೆನಿಯ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

|

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿವೆ. ವಿವೋ ಸ್ಮಾರ್ಟ್‌ಫೋನ್‌ಗಳು ತಮ್ಮ ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಂದಾಗಿ ಯುವಜನರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇದೇ ಕಾರಣಕ್ಕೆ ವಿವೋ ಕಂಪೆನಿ ಕೂಡ ಭಾರತದಲ್ಲಿ ಸಾಕಷ್ಟು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಬಿಗ್‌ ಬ್ಯಾಟರಿ ಹಾಗೂ ಕ್ಯಾಮೆರಾ ಫೀಚರ್ಸ್‌ಗಳು ವಿವೋ ಸ್ಮಾರ್ಟ್‌ಫೋನ್‌ಗಳ ಹೈಲೈಟ್‌ ಆಗಿದೆ.

ವಿವೋ

ಹೌದು, ಭಾರತದಲ್ಲಿ ವಿವೋ ವಿವಿಧ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇವುಗಳಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಇದರಲ್ಲಿ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸದ್ದು ಮಾಡಿವೆ. ಅಲ್ಲದೆ 15,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಹಾಗಾದ್ರೆ ಭಾರತದಲ್ಲಿ ಉತ್ತಮ ಕ್ಯಾಮೆರಾ ಗುಣಮಟ್ಟ ಹಾಗೂ ಬ್ಯಾಟರಿ ಬಾಳಿಕೆ ನೀಡುವ 15,000ರೂ. ಒಳಗಿನ ಅತ್ಯುತ್ತಮ ವಿವೋ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y21

ವಿವೋ Y21

ವಿವೋ Y21 ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್‌ ಮೀಡಿಯಾಟೆಕ್‌ ಹೆಲಿಯೋ P 35 (MT 6765) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಮತ್ತು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇದರ ಬೆಲೆ ಪ್ರಸ್ತುತ ಅಮೆಜಾನ್‌ನಲ್ಲಿ 13,490ರೂ. ಆಗಿದೆ.

ವಿವೋ Y21G

ವಿವೋ Y21G

ವಿವೋ Y21G ಸ್ಮಾರ್ಟ್‌ಫೋನ್‌ 15,000ರೂ. ಒಳಗೆ ಲಭ್ಯವಾಗುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G70 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18w ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರ ಬೆಲೆ 12,610ರೂ.ಆಗಿದೆ.

ವಿವೋ Y15C

ವಿವೋ Y15C

ವಿವೋ Y15C ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹೆಲಿಯೊ P35 ಆಕ್ಟಾ-ಕೋರ್ ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನಿನ ಪ್ರಸ್ತುತ ಬೆಲೆ ಅಮೆಜಾನ್‌ನಲ್ಲಿ 10,193ರೂ. ಆಗಿದೆ.

ವಿವೋ U20

ವಿವೋ U20

ವಿವೋ U20 ಸ್ಮಾರ್ಟ್‌ಫೋನ್‌ 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 675 AIE ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ ಬೆಲೆ 15,000ರೂ. ಆಗಿದೆ.

ವಿವೋ Y93 1814

ವಿವೋ Y93 1814

ವಿವೋ Y93 1814 ಸ್ಮಾರ್ಟ್‌ಫೋನ್‌ 6.22 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾಕೋರ್‌ ಮೀಡಿಯಾಟೆಕ್‌ ಹಿಲಿಯೋ P22 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13MP ಸೆನ್ಸಾರ್‌ ಪಡೆದಿದೆ. ಜೊತೆಗೆ 4030mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 13,000ರೂ.ಆಗಿದೆ.

Best Mobiles in India

English summary
Here's Vivo mobile phones under Rs.15,000 in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X