ಭಾರತದಲ್ಲಿ 60,000ರೂ.ಒಳಗೆ ಲಭ್ಯವಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
ಮೊಬೈಲ್ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳಿವೆ. ಸ್ಮಾರ್ಟ್‌ಫೋನ್ ಪ್ರಿಯರ ಆಸಕ್ತಿಗೆ ತಕ್ಕಂತೆ ಹಲವು ವಿಭಿನ್ನ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸೌಂಡ್ ಮಾಡುತ್ತಿವೆ. ಇವುಗಳಲ್ಲಿ ಪ್ರೀಮಿಯಂ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ವಿವಿಧ ಬೆಲೆ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ.
ಹೌದು, ಮಾರುಕಟ್ಟೆಯಲ್ಲಿ ವಿವಿಧ ಬೆಲೆ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇದರಲ್ಲಿ "ಫ್ಲ್ಯಾಗ್‌ಶಿಪ್ ಕಿಲ್ಲರ್ಸ್" ಎಂದೇ ಖ್ಯಾತಿ ಪಡೆದುಕೊಂಡಿರುವ 60,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಕೂಡ ಸೌಂಡ್ ಮಾಡುತ್ತಿವೆ. ಹಾಗಾದ್ರೆ ಭಾರತದಲ್ಲಿ 60,000ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಥಿಂಗ್ ಫೋನ್ (2)
ಭಾರತದಲ್ಲಿ 60,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ನಥಿಂಗ್ ಫೋನ್ 2 ಹೊಸ ಎಂಟ್ರಿಯಾಗಿದೆ. ಪ್ರಸ್ತುತ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬೇಸ್ ಮಾಡೆಲ್ 8GB + 128GB RAM ಸ್ಟೋರೇಜ್ ಆಯ್ಕೆಗೆ 44,999ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ನಥಿಂಗ್ ಓಎಸ್ 2.0 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಒನ್‌ಪ್ಲಸ್ 11 5G
ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ ಭಾರತದಲ್ಲಿ 56,999ರೂ.ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ವೇಗದ ಚಾರ್ಜರ್ ಬೆಂಬಲಿಸಲಿದೆ.
ವಿವೋ X90 5G
ವಿವೋ X90 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 60,000ರೂ.ಒಳಗೆ ಲಭ್ಯವಿದೆ. ಈ ಸ್ಮಾರ್ಟ್‌ಪೊನ್ 6.76 ಇಂಚಿನ ಕರ್ವ್ಡ FHD+ Q9 ಅಲ್ಟ್ರಾ-ವಿಷನ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇನ್ನು ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಹೊಂದಿದೆ. ಜೊತೆಗೆ 4,810mAh ಬ್ಯಾಟರಿಯನ್ನು ಒಳಗೊಂಡಿದೆ.
ಐಕ್ಯೂ 11 5G
ಐಕ್ಯೂ 11 ಸ್ಮಾರ್ಟ್‌ಫೋನ್ 6.78 ಇಂಚಿನ ಪಂಚ್-ಹೋಲ್ ಸ್ಯಾಮ್‌ಸಂಗ್ E6 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GN5 ಸೆನ್ಸಾರ್ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 120W ವೇಗದ ವೈರ್ಡ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.


Click it and Unblock the Notifications







