Just In
Don't Miss
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Movies
Super Queen:ರಜಿನಿಯ ಕಲ್ಪನಾ ಪರ್ಫಾಮೆನ್ಸ್ಗೆ ಫುಲ್ ಫಿದಾ : ರಿಪ್ಲೆ ಮಾಡೋಕಾಗದೆ ನಟಿ ಸುಸ್ತು..!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬಜೆಟ್ ಬೆಲೆಯಲ್ಲಿ ದೊರೆಯುವ ಗೇಮಿಂಗ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳು!
ಮೊಬೈಲ್ ಮಾರುಕಟ್ಟೆಯಲ್ಲಿ ಗೇಮಿಂಗ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ಗೇಮಿಂಗ್ ಪ್ರಿಯರಿಗೆ ತಕ್ಕಂತೆ ಪೂರಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದ್ದೆ ಇದೆ. ಇಂದಿನ ಯುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಆನ್‌ಲೈನ್ ಗೇಮ್‌ಗಳ ಕಡೆಗೆ ಆಸಕ್ತಿ ಹೊಂದಿರುವುದು ಕೂಡ ಇದಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಇದೇ ಕಾರಣಕ್ಕೆ ಹಲವು ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಗೇಮಿಂಗ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ.

ಹೌದು, ಗೇಮಿಂಗ್ ಪ್ರಿಯರಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದಿವೆ. ಇದಲ್ಲದೆ ಗೇಮಿಂಗ್‌ಗೆ ಪೂರಕವಾದ ಸ್ಮಾರ್ಟ್‌ಫೋನ್‌ಗಳು ಕೂಡ ಸಾಕಷ್ಟು ಗಮನಸೆಳೆದಿವೆ. ಇನ್ನು ಗೇಮಿಂಗ್ ಸ್ಮಾರ್ಟ್‌ಫೋನ್‌ಗಳ ಬೆಲೆ ವಿಚಾರದಲ್ಲಿ ವೈವಿಧ್ಯತೆ ಸಾಮಾನ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಗೇಮಿಂಗ್ ಬೆಂಬಲಿಸುತ್ತವೆ. ಆದರಿಂದ ಹೆಚ್ಚಿನ ಜನರು ಬಜೆಟ್ ಬೆಲೆಯಲ್ಲಿ ಗೇಮಿಂಗ್ ಫೋನ್ ಹೊಂದುವುದಕ್ಕೆ ಬಯಸುತ್ತಾರೆ.

ಗೇಮಿಂಗ್ ಪೋನ್‌ಗಳಿಗೆ ಹೆಚ್ಚಿನ ಕಾರ್ಯದಕ್ಷತೆಯ ಪ್ರೊಸೆಸರ್ ಮತ್ತು ಬ್ಯಾಟರಿ ದಕ್ಷತೆ ಅವಶ್ಯಕವಿದೆ. ಅ್ಲದೆ ಹೆಚ್ಚಿನ ರಿಫ್ರೆಶ್ ರೇಟ್ ಒಳಗೊಂಡ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಗೇಮಿಂಗ್‌ಗೆ ಸೂಕ್ತ ಎನಿಸಲಿದೆ. ಅದರಂತೆ ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಗೇಮಿಂಗ್‌ಗೆ ಪೂರಕವಾಗಿವೆ. ಹಾಗಾದ್ರೆ ಭಾರತದಲ್ಲಿ ಕೇವಲ 20,000ರೂ. ಒಳಗೆ ಲಭ್ಯವಾಗುವ ಗೇಮಿಂಗ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ ನಾರ್ಡ್ CE 2 ಲೈಟ್
ಒನ್‌ಪ್ಲಸ್ ನಾರ್ಡ್ CE 2 ಲೈಟ್ ಸ್ಮಾರ್ಟ್‌ಫೋನ್ 6.59 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ ಆಕ್ಸಿಜನ್ OS 12.1 ಬೆಂಬಲವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 19,999ರೂ.ಬೆಲೆಯಲ್ಲಿ ದೊರೆಯಲಿದೆ.

ಪೊಕೊ X4 ಪ್ರೊ 5G
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಕೂಡ ಗೇಮಿಂಗ್‌ಗೆ ಪೂರಕವಾದ ಫೀಚರ್ಸ್‌ಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು ಅದು 67W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 19,999ರೂ.ಬೆಲೆಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 19,499ರೂ. ಬೆಲೆಗೆ ಲಭ್ಯವಾಗಲಿದೆ.

ರಿಯಲ್‌ಮಿ 9
ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 11GB ವರೆಗೆ ವಿಸ್ತರಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 16,990ರೂ. ಬೆಲೆಯನ್ನು ಪಡೆದುಕೊಂಡಿದೆ.

ಐಕ್ಯೂ Z5
ಐಕ್ಯೂ Z5 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ ಅಮೆಜಾನ್ ತಾಣದಲ್ಲಿ 19,990ರೂ. ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470