ಹಾಯ್‌ ನೋವಾ 10 5G ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

|

ಟೆಕ್‌ ಮಾರುಕಟ್ಟೆಯಲ್ಲಿ ವಿವಿಧ ಕಂಪೆನಿಗಳ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದು. ಇದೀಗ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಹಾಯ್‌ ನೋವಾ 10 5G ಸರಣಿ ಬಿಡುಗಡೆ ಆಗಿದೆ. ಈ ಸರಣಿಯಲ್ಲಿ ಹಾಯ್‌ ನೋವಾ 10 ಪ್ರೊ ಮತ್ತು ಹಾಯ್‌ ನೋವಾ 10 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿವೆ.

ಹಾಯ್‌ ನೋವಾ 10 5G

ಹೌದು, ಹಾಯ್‌ ನೋವಾ 10 5G ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ವಿಶೇಷ ಫೀಚರ್ಸ್‌ಗಳ ಮೂಲಕ ಗಮನಸೆಳೆದಿವೆ. ಇದರಲ್ಲಿ ಹಾಯ್‌ ನೋವಾ 10 ಪ್ರೊ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಆದರೆ ಹಾಯ್‌ ನೋವಾ 10 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾಯ್ ನೋವಾ 10 ಪ್ರೊ

ಹಾಯ್ ನೋವಾ 10 ಪ್ರೊ

ಹಾಯ್ ನೋವಾ 10 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 60 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದು 100° ಫೀಲ್ಡ್ ಆಫ್ ವ್ಯೂ ನೀಡುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ವೈಡ್ ಸೆನ್ಸಾರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 100W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಹಾಯ್‌ ನೋವಾ 10

ಹಾಯ್‌ ನೋವಾ 10

ಹಾಯ್‌ ನೋವಾ 10 ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲಿಸುವ OLED ಸ್ಕ್ರೀನ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 60 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹಾಯ್‌ ನೋವಾ 10 5G ಸರಣಿ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಹಾಯ್‌ ನೋವಾ 10 5G (8GB + 256GB) ಫೋನ್‌ ಬೆಲೆ ಯುವಾನ್ 2,899 (ಅಂದಾಜು 33,033ರೂ.) ಆಗಿದೆ. ಇನ್ನು ಹಾಯ್‌ ನೋವಾ 10 ಪ್ರೊ 5G (8GB + 256GB) ಫೋನ್‌ ಬೆಲೆ ಯುವಾನ್‌ 3,999 (ಅಂದಾಜು 45,567ರೂ.) ಆಗಿದೆ. ಈ ಸ್ಮಾರ್ಟ್‌ಪೋನ್‌ ಭಾರತವೂ ಸೇರಿದಂತೆ ಇತರೆ ಮಾರುಕಟ್ಟೆಗಳಿಗೆ ಯಾವಾಗ ಎಂಟ್ರಿ ನೀಡಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Hi Nova 10 5G series with Snapdragon 778G launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X