Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ್ದ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಲೀಡಿಂಗ್‌ ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಮೊಬೈಲ್‌ಗಳಿಗೆ ಏನಾದರೊಂದು ಸ್ಪೆಷಲ್‌ ಆಫರ್‌ ನೀಡುತ್ತಲೆ ಇರುತ್ತದೆ. ಅಂದಹಾಗೆ ಇ ಕಾಮರ್ಸ್‌ ತಾಣವು ಎಲ್ಲ ಪ್ರೈಸ್‌ ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳಿಗೂ ಸಹ ಬೊಂಬಾಟ್‌ ರಿಯಾಯಿತಿ ನೀಡುತ್ತಾ ಮುನ್ನಡೆದಿದೆ. ಆ ಪೈಕಿ ಇದೀಗ ಒಪ್ಪೋ F27 5G (OPPO F27 5G) ಫೋನ್‌ ಗಮನಾರ್ಹ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಇ ಕಾಮರ್ಸ್‌ ದೊಡ್ಡಣ್ಣ ಎನಿಸಿರುವ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ಒಪ್ಪೋ F27 5G (OPPO F27 5G) ಮೊಬೈಲ್‌ ಶೇ. 15% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB RAM + 128GB ವೇರಿಯಂಟ್‌ ಮೊಬೈಲ್‌ ಅನ್ನು 22,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಸಹ ಲಭ್ಯ ಸಿಗಲಿವೆ.

ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ್ದ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಅಂದಹಾಗೆ ಒಪ್ಪೋ F27 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಪಡೆದಿದ್ದು, ಇದರೊಂದಿಗೆ 8GB RAM + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ F27 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒಪ್ಪೋ F27 5G - ಫೀಚರ್ಸ್‌ ಮಾಹಿತಿ

ಒಪ್ಪೋ F27 5G ಸ್ಮಾರ್ಟ್‌ಫೋನ್‌ 6.67 ಇಂಚಿನ AMOLED ಸ್ಕ್ರೀನ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 2400×1080 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇನ್ನು ಇದು 120Hz ರಿಫ್ರೆಶ್ ರೇಟ್, ಅಕ್ವಾ ಡೈನಾಮಿಕ್ಸ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌, 394 PPI, 100% DCI P3 ಬಣ್ಣದ ಹರವು ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ 2100 ನಿಟ್ಸ್ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಕೂಡಾ ಪಡೆದಿದೆ.

ಒಪ್ಪೋ F27 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಕಾರ್ಯ ನಿರ್ವಹಿಸಲಿದ್ದು, ಮಾಲಿ G57 MP2 GPU ಬೆಂಬಲ ಸಹ ಇದೆ. ಅಲ್ಲದೇ ಇದು ಕಲರ್‌ ಓಎಸ್‌ 14 ಜೊತೆಗೆ ಆಂಡ್ರಾಯ್ಡ್‌ 14 ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. 2TB ವರೆಗೆ ವಿಸ್ತರಣೆಗೆ ಬೆಂಬಲದೊಂದಿಗೆ ಮೈಕ್ರೊ SD ಕಾರ್ಡ್ ಸ್ಲಾಟ್ ಆಯ್ಕೆ ಸಹ ಇದೆ.

ಒಪ್ಪೋ F27 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಉಳಿದ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.

ಒಪ್ಪೋ F27 5G ಸ್ಮಾರ್ಟ್‌ಫೋನ್‌ 45W SuperVOOC ಚಾರ್ಜಿಂಗ್ ಬೆಂಬಲ ಪಡೆದಿದ್ದು, ಇದಕ್ಕೆ ಬೆಂಬಲ ಆಗಿ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್-ಸಿಮ್, 5G, WiFi 5 802.11 ax, ಬ್ಲೂಟೂತ್ 5.3, ಯುಎಸ್‌ಬಿ 2.0, ಜಿಪಿಎಸ್‌, GLONASS, ಗೆಲಿಲಿಯೋ, BeiDou ಮತ್ತು QZSS ಆಯ್ಕೆಗಳು ಇವೆ.

Best Mobiles in India

English summary
Historical Price cut on OPPO F27 5G on Flipkart website. Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+