ಕಡಿಮೆ ಬೆಲೆಯಲ್ಲಿ ಸ್ಟೈಲಿಶ್ 5G ಸ್ಮಾರ್ಟ್‌ಫೋನ್ ಖರೀದಿಗೆ ಇದು ಅತ್ಯುತ್ತಮ ಆಫರ್!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ ರಿಯಲ್‌ಮಿ (realme) ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಮೊಬೈಲ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರಿಯಲ್‌ಮಿ P1 5G (Realme P1 5G) ಮೊಬೈಲ್ ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇದೀಗ ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರ ಮುಖದಲ್ಲಿ ಖುಷಿ ಮೂಡಿಸಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಸದ್ಯ 'ಸ್ಮಾರ್ಟ್‌ಫೋನ್ ಫೆಸ್ಟಿವಲ್ ಸೇಲ್' ಲೈವ್ ಇದೆ. ಈ ಮಾರಾಟದಲ್ಲಿ ರಿಯಲ್‌ಮಿ P1 5G (Realme P1 5G) ಮೊಬೈಲ್ ಶೇ. 28% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 14,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ.

ಇನ್ನು ರಿಯಲ್‌ಮಿ ಸಂಸ್ಥೆಯ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಅಲ್ಲದೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಹಾಗಾದರೇ ರಿಯಲ್‌ಮಿ P1 5G (Realme P1 5G) ಮೊಬೈಲ್ ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ P1 ಫೋನಿನ ಫೀಚರ್ಸ್
ರಿಯಲ್‌ಮಿ P1 ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ FHD+ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಅಲ್ಲದೇ ಇದು 2,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಪ್ರಮುಖವಾಗಿ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.
ಇದರೊಂದಿಗೆ ರಿಯಲ್‌ಮಿ P1 ಫೋನ್ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಜೊತೆಗೆ 50ಎಂಪಿ ಪ್ರೈಮರಿ ಸೆನ್ಸರ್ ಮತ್ತು 2ಎಂಪಿ ತೃತೀಯ ಸೆನ್ಸರ್ ನೊಂದಿಗೆ 8ಎಂಪಿ ಅಲ್ಟ್ರಾವೈಡ್ ಸೆನ್ಸರ್ ಅನ್ನು ಈ ಫೋನ್‌ನಲ್ಲಿ ಇದೆ. ಹಾಗೆಯೇ 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಇದೆ.
ಹಾಗೆಯೇ ಇದೇ ಸರಣಿಯ ರಿಯಲ್‌ಮಿ P1 ಪ್ರೊ ಮೊಬೈಲ್ 6.67 ಇಂಚಿನ ಅಮೋಲೆಡ್ ಕರ್ವ್ ಡಿಸ್‌ಪ್ಲೇ ಪಡೆದಿದ್ದು, ಇದು 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದ್ದು, ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಪವರ್ ಪಡೆದಿದೆ. ಅಲ್ಲದೇ 12 GB RAM ಮತ್ತು 256 GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ ಇದ್ದು, ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5 ಅನ್ನು ರನ್ ಮಾಡಲಿದೆ.
ಇದರೊಂದಿಗೆ ರಿಯಲ್‌ಮಿ P1 ಪ್ರೊ ಫೋನ್ 50 ಮೆಗಾಪಿಕ್ಸೆಲ್ OIS ಸಕ್ರಿಯಗೊಳಿಸಿದ ಪ್ರಾಥಮಿಕ ಸೆನ್ಸರ್ ಜೊತೆಗೆ 8 ಮೆಗಾಪಿಕ್ಸೆಲ್ ಮತ್ತು 2 ಮೆಗಾಪಿಕ್ಸೆಲ್ ಸೆಕೆಂಡರಿ ಮತ್ತು ತೃತೀಯ ಸೆನ್ಸರ್ ಅನ್ನು ಈ ಫೋನ್ ಹೊಂದಿದೆ. ಅಲ್ಲದೆ ಈ ಫೋನ್ ಸಹ 45 W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿಯಲ್ಲಿ ಹೊಂದಿದೆ.


Click it and Unblock the Notifications








