ಹಾನರ್ 30 ಮತ್ತು 30 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್ ಲೀಕ್ !
ಟೆಕ್ ವಲಯದಲ್ಲಿ ಸಾಕಷ್ಟು ವಿಭಿನ್ನ ಸ್ಮಾರ್ಟ್‌ಫೋನ್‌ಗಳನ್ನ ನಾವು ನೋಡಬಹುದು. ಅಷ್ಟೇ ಯಾಕೆ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಕಂಪೆನಿಗಳು ಕೂಡ ಇವೆ. ಸ್ಮಾರ್ಟ್‌ಫೋನ್ ಪ್ರಿಯರನ್ನ ತಮ್ಮತ್ತ ಸೆಳೆಯುವುದಕ್ಕಾಗಿಯೇ ವೈವಿಧ್ಯಮಯ ಫೀಚರ್ಸ್‌ಗಳನ್ನ ಪರಿಚಯಿಸುವ ಸಾಕಷ್ಟು ಕಂಪೆನಿಗಳು ಕೂಡ ಇವೆ. ಇವುಗಳ ನಡುವೆ ಜಾಗತಿಕವಾಗಿ ಪ್ರಸಿದ್ಧಿ ಪಡೆದುಕೊಂಡಿರುವ ಬ್ರಾಂಡ್ ಕಂಪೆನಿಗಳು ಕೂಡ ಇವೆ. ಇವುಗಳಲ್ಲಿ ಹಾನರ್ ಕಂಪೆನಿ ಕೂಡ ಒಂದಾಗಿದ್ದು,ತನ್ನ ಸ್ಮಾರ್ಟ್‌ಫೋನ್‌ಗಳ ಮೂಲಕವೇ ಸಂಚಲನ ಮೂಡಿಸುವ ಜನಪ್ರಿಯತೆಯನ್ನ ಹೊಂದಿದೆ.

ಹೌದು, ಟೆಕ್ ವಲಯದಲ್ಲಿ ತನ್ನದೇ ಆದ ಜನಪ್ರಿಯತೆಯನ್ನ ಹಾನರ್ ಕಂಪೆನಿ ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಹಾನರ್ 30 ಪ್ರೊ ಮತ್ತು ಹಾನರ್ 30 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದಪಡಿಸಿಕೊಂಡಿದೆ.ಅಷ್ಟೇ ಅಲ್ಲ ಇದೇ ಏಪ್ರಿಲ್ 15 ರಂದು ಮಾರುಕಟ್ಟೆಗೆ ಲಾಂಚ್ ಮಾಡುವುದಾಗಿಯೂ ಕಂಪೆನಿ ಹೇಳಿಕೊಮಡಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಅಷ್ಟಕ್ಕೂ ಲೀಕ್ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಹೊಂದಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ

ಹಾನರ್ 30 ಪ್ರೊ ಡಿಸ್‌ಪ್ಲೇ
ಹಾನರ್ 30 ಪ್ರೊ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.57 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಒಎಲ್‌ಇಡಿ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇಯು ಹೊಸ ಮಾದರಿಯ ವಿನ್ಯಾಸವನ್ನ ಹೊಂದಿದ್ದು, 19.5:9 ರಚನೆಯ ಅನುಪಾತವನ್ನ ಒಳಗೊಂಡಿದೆ. ಜೊತೆಗೆ ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ 2.86GHz ಹೊಂದಿರುವ ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಹಾಗೂ 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡುವ ಸಾಧ್ಯತೆ ಇದೆ.

ಕ್ಯಾಮೆರಾ ಮತ್ತು ಬ್ಯಾಟರಿ
ಹಾನರ್ 30 ಪ್ರೊ ಯಾವ ಮಾದರಿಯ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿರುತ್ತೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 3,900mAh ಬ್ಯಾಟರಿಯನ್ನು ಒಳಗೊಂಡಿರಬಹುದು ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಹಾನರ್ 30 ಸ್ಮಾರ್ಟ್‌ಫೋನ್
ಇನ್ನು ಹಾನರ್ 30 ಸ್ಮಾರ್ಟ್‌ಫೋನ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸಾಧ್ಯತೆ ಇದೆ. ಜೊತೆಗೆ ಪೆರಿಸ್ಕೋಪ್ ಲೆನ್ಸ್ ಮತ್ತು ಡ್ಯುಯಲ್-ಎಲ್ಇಡಿ ಫ್ಲ್ಯಾಷ್ ಲಭ್ಯವಿರಲಿದೆ. ಇದಲ್ಲದೆ ಗೀಕ್‌ಬೆಂಚ್ ಪಟ್ಟಿಯ ಪ್ರಕಾರ ಈ ಸ್ಮಾರ್ಟ್‌ಫೋನ್ ಹೈಸಿಲಿಕಾನ್ ಕಿರಿನ್ 985 SoC ಪ್ರೊಸೆಸರ್ ಹೊಂದಿರುವ ಸಾಧ್ಯತೆ ಇದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ಹೇಳಲಾಗ್ತಿದೆ.


Click it and Unblock the Notifications




