ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಠಿಸಲು ಬರ್ತಿದೆ HONOR 300 Pro ಮೊಬೈಲ್!
ಹಾನರ್ ಮೊಬೈಲ್ ಸಂಸ್ಥೆಯು ಈಗಾಗಲೇ ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ತನ್ನ ಕೆಲವು ಫೋನ್‌ಗಳ ಮೂಲಕ ಗುರುತಿಸಿಕೊಂಡಿದ್ದು, ಸದ್ಯ ಹಾನರ್ 200 ಸರಣಿ ಸದ್ದು ಮಾಡುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಂಸ್ಥೆಯು ಹೊಸದಾಗಿ ಹಾನರ್ 300 ಪ್ರೊ (HONOR 300 Pro) ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ತಯಾರಾಗಿದ್ದು, ಆದರೆ ಬಿಡುಗಡೆಗೂ ಮುನ್ನವೇ ಹಾನರ್ 300 ಪ್ರೊ ಫೋನಿನ ಕೆಲವು ಲೀಕ್ ಫೀಚರ್ಸ್ ಗ್ರಾಹಕರು ಹುಬ್ಬೇರಿಸುವಂತೆ ಮಾಡಿವೆ.
ಹೌದು, ಹಾನರ್ ಕಂಪನಿಯು ಇದೀಗ ಹಾನರ್ 300 ಪ್ರೊ (HONOR 300 Pro) ಮೊಬೈಲ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಲು ಸಜ್ಜಾಗಿದ್ದು, ಈ ಫೋನಿನ ಪ್ರೊಸೆಸರ್ ಹಾಗೂ ಕ್ಯಾಮೆರಾದ ಕೆಲವು ಮಾಹಿತಿಗಳು ಸೋರಿಕೆಯಾಗಿವೆ. ಲೀಕ್ ವರದಿಗಳಂತೆ ಹಾನರ್ 300 ಪ್ರೊ ಮೊಬೈಲ್ ಸ್ನಾಪ್‌ಡ್ರಾಗನ್ 8s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ.

ಹಾಗೆಯೇ ಹಾನರ್ 200 ಪ್ರೊ ಫೋನಿನ ಉತ್ತರಾಧಿಕಾರಿ ಎನಿಸಿಕೊಂಡಿರುವ ಹಾನರ್ 300 ಪ್ರೊ (HONOR 300 Pro) ಮೊಬೈಲ್ 50 ಮೆಗಾ ಪಿಕ್ಸಲ್ ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ಸೌಲಭ್ಯ ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಬರಲಿರುವ ಈ ನೂತನ ಫೋನ್ 1.5K OLED ಡಿಸ್ಪ್ಲೇ ರಚನೆ ಪಡೆದಿರುವ ಸಾಧ್ಯತೆಗಳು ಅಧಿಕ ಎನ್ನಲಾಗಿದೆ.
ಸದ್ಯದಲ್ಲೇ ಎಂಟ್ರಿ ಕೊಡಲಿರುವ ಹಾನರ್ 300 ಪ್ರೊ ಮೊಬೈಲ್ ಮಾರ್ಬಲ್ ಮಾದರಿಯ 'ಓಷನ್ ಸಯಾನ್' ಕಲರ್ ಆಯ್ಕೆಯಲ್ಲಿ ಲಭ್ಯ ಆಗಲಿದೆ ಎನ್ನಲಾಗಿದೆ. ಅಲ್ಲದೇ ಇದು ಈ ಹಿಂದಿನ ಹಾನರ್ 200 ಪ್ರೊ ಮಾಡೆಲ್‌ನಂತೆ ಮಾತ್ರೆ ಆಕಾರದ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಫೋನ್ 100 W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದ್ದು, ಇದರೊಂದಿಗೆ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಪೋರ್ಟ್ ಆಯ್ಕೆ ಒಳಗೊಂಡಿರಲಿದೆ.
ಇನ್ನು ಹಾನರ್ ಸಂಸ್ಥೆಯ ಹಾನರ್ 200 5G (HONOR 200 5G) ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು ಕ್ವಾಡ್ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತದೆ.
ಅಲ್ಲದೇ ಈ ಫೋನ್ MagicOS 8 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ 8 GB RAM + 256 GB ಹಾಗೂ 12 GB + 512 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಇದು ಪಡೆದಿದೆ.
ಹಾನರ್ 200 5G ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸಲ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಒಳಗೊಂಡಿದೆ.
ಇದರೊಂದಿಗೆ ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದಲ್ಲದೇ ಈ ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಸಹ ಇದೆ.


Click it and Unblock the Notifications








