ಹಾನರ್ 30I ಸ್ಮಾರ್ಟ್‌ಫೋನ್ ಬಿಡುಗಡೆ! 4,000mAh ಸಾಮರ್ಥ್ಯದ ಬ್ಯಾಟರಿ ವಿಶೇಷತೆ!
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಹುವಾವೇ ತನ್ನ ಸಬ್ ಬ್ರ್ಯಾಂಡ್ ಹಾನರ್ ಹೆಸರಿನಲ್ಲಿಯೂ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಈಗಾಗಲೇ ಹಾನರ್ ಬ್ರಾಂಡ್ ಅಡಿಯಲ್ಲಿ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹಾನರ್ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಹಾನರ್ 30I ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದ್ದು, 6.3-ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ.

ಹೌದು, ಹಾನರ್ ಸಂಸ್ಥೆ ತನ್ನ ಹೊಸ ಹಾನರ್ 30I ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಹಾನರ್ 30i ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಈ ಸ್ಮಾರ್ಟ್‌ಫೋನ್ 4GB RAM+ 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಅಲ್ಟ್ರಾವೈಲೆಟ್ ಸನ್‌ಸೆಟ್, Shimmering Turquoise, ಮತ್ತು ಮಿಡ್‌ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಹಾನರ್ 30I ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.3 ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 417PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ OLED ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್ ದಕ್ಷತೆ
ಇದು ಆಕ್ಟಾ-ಕೋರ್ ಕಿರಿನ್ 710F SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಮ್ಯಾಜಿಕ್ UI3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು 4GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ನ್ಯಾನೊ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸ ಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಹಾನರ್ 30i ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಜಿಪಿಎಸ್, ಮತ್ತು ಬ್ಲೂಟೂತ್ V5.1 ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಹೊಸ ಹಾನರ್ 30i ರಷ್ಯಾದಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ RUB 17,990 (ಸುಮಾರು 17,600 ರೂ.) ಆಗಿದೆ. ಇದು ಅಲ್ಟ್ರಾವೈಲೆಟ್ ಸನ್‌ಸೆಟ್, Shimmering Turquoise, ಮತ್ತು ಮಿಡ್‌ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications