Home
ಸುದ್ದಿಜಾಲ

ಹಾನರ್‌ 70 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಯಾವುದು!

ಪ್ರತಿಷ್ಠಿತ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಹಾನರ್‌ ಕಂಪೆನಿ ಕೂಡ ಒಂದಾಗಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಟೆಕ್‌ ವಲಯದಲ್ಲಿ ತನ್ನದೇ ಆದ ಪ್ರಾಬಲ್ಯ ಸಾಧಿಸಿದೆ. ಇನ್ನು ಹಾನರ್‌ ಸ್ಮಾರ್ಟ್‌ಫೋನ್‌ಗಳು ತಮ್ಮ ವಿಶೇಷ ವಿನ್ಯಾಸ ಹಾಗೂ ಫೀಚರ್ಸ್‌ಗಳ ಕಾರಣಕ್ಕೆ ಸಾಕಷ್ಟು ಗಮನಸೆಳೆದಿವೆ. ಸದ್ಯ ಇದೀಗ ಹಾನರ್‌ ಕಂಪೆನಿ ತನ್ನ ಹೊಸ ಹಾನರ್‌ 70 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಸ್ನಾಪ್‌ಡ್ರಾಗನ್‌ 778G+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹಾನರ್‌

ಹೌದು, ಹಾನರ್‌ ಕಂಪೆನಿ ಹೊಸದಾಗಿ ಹಾನರ್‌ 70 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಕರ್ವ್ಡ್‌ OLED ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 54 ಮೆಗಾಪಿಕ್ಸೆಲ್ ಸೋನಿ IMX800 ಸೆನ್ಸಾರ್‌ ಅನ್ನು ಪಡೆದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,800mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಹಾನರ್‌ 70 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 90.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದ್ದು, 395 ಪಿಪಿಐ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿರಲಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿರಲಿದೆ?

ಹಾನರ್‌ 70 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12-ಆಧಾರಿತ ಮ್ಯಾಜಿಕ್ UI 6.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಹಾನರ್‌ 70 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 54 ಮೆಗಾಪಿಕ್ಸೆಲ್ ಸೋನಿ IMX800 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹಾನರ್‌ 70 5G ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.2, GPS, AGPS, OTG, USB ಟೈಪ್-C ಪೋರ್ಟ್, 3.5mm ಹೆಡ್‌ಫೋನ್ ಜ್ಯಾಕ್, ಮತ್ತು ವೈಫೈ ಬೆಂಬಲವನ್ನು ಹೊಂದಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗುರುತ್ವಾಕರ್ಷಣೆ ಸೆನ್ಸಾರ್‌, ಗೈರೊಸ್ಕೋಪ್, ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್‌ ಫೇಸ್ ಅನ್ಲಾಕ್ ಫೀಚರ್ಸ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹಾನರ್‌ 70 5G ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ಮಾದರಿಗೆ MYR 1,999 (ಅಂದಾಜು 35,600ರೂ) ಬೆಲೆ ಹೊಂದಿದೆ. ಇದು ಪ್ರಸ್ತುತ ಮಲೇಷ್ಯಾದಲ್ಲಿನ ಕಂಪನಿಯ ವೆಬ್‌ಸೈಟ್‌ನ ಮೂಲಕ ಲಜಾಡಾ ಮತ್ತು ಶೋಪಿ ಸೇರಿದಂತೆ ಅನೇಕ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಮಾರಾಟಕ್ಕೆ ಲಿಸ್ಟ್‌ ಮಾಡಲಾಗಿದೆ.ಈ ಫೋನ್‌ ಕ್ರಿಸ್ಟಲ್ ಸಿಲ್ವರ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಎಮರಾಲ್ಡ್ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ. ಇನ್ನು ಈ ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುವುದು ಇನ್ನು ತಿಳಿದುಬಂದಿಲ್ಲ.

Best Mobiles in India

English summary
Honor 70 5G has 120Hz refresh rate and the phone has a triple rear camera unit
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+