ಹಾನರ್ 80 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ! 160 ಮೆಗಾಪಿಕ್ಸೆಲ್ ಕ್ಯಾಮೆರಾ ವಿಶೇಷ!
ಹಾನರ್ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವೈವಿಧ್ಯಮಯ ವಿನ್ಯಾಸ ಹಾಗೂ ಫೀಚರ್ಸ್‌ಗಳ ಮೂಲಕ ಹಾನರ್ ಫೋನ್‌ಗಳು ಸಾಕಷ್ಟು ಸದ್ದು ಮಾಡಿವೆ. ಮುಂದುವರೆದಂತೆ ಇದೀಗ ಹಾನರ್ ಕಂಪೆನಿ ಹೊಸ ಹಾನರ್ 80 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಹಾನರ್ 80, ಹಾನರ್ 80 ಪ್ರೊ, ಹಾನರ್ 80 SE ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿವೆ.

ಹೌದು, ಹಾನರ್ 80 ಸರಣಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸರಣಿಯಲ್ಲಿ ಹಾನರ್ 80 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇನ್ನು ಹಾನರ್ 80 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆದರೆ ಹಾನರ್ 80 SE ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು? ಇದರ ಫೀಚರ್ಸ್ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ 80 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ಹಾನರ್ 80 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಕರ್ವ್ಡ್ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,224x2,700 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 160 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಒಳಗೊಂಡ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 66W ಸೂಪರ್‌ಫಾಸ್ಟ್ ವೇಗದ ಚಾರ್ಜಿಂಗ್ ಬೆಂಬಲಿಸುವ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹಾನರ್ 80 ಸ್ಮಾರ್ಟ್‌ಫೋನ್
ಹಾನರ್ 80 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇನ್ನು ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 160 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಸೂಪರ್‌ಫಾಸ್ಟ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಹಾನರ್ 80 SE
ಹಾನರ್ 80 SE ಸ್ಮಾರ್ಟ್‌ಫೋನ್ 6.67 ಇಂಚಿನ ಕರ್ವ್ಡ್ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ-G68 GPU ಸಪೋರ್ಟ್ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 66W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4,600mAh ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಹಾನರ್ 80 ಸರಣಿ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರ ಹಾನರ್ 80 ಪ್ರೊ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 256GB ಸ್ಟೋರೇಜ್ ಆಯ್ಕೆಗೆ CNY 3,499 (ಸುಮಾರು 40,000ರೂ) ಬೆಲೆ ಹೊಂದಿದೆ. ಇನ್ನು 12GB + 256GB ಸ್ಟೋರೇಜ್ ಮಾದರಿಯು CNY 3,799 (ಅಂದಾಜು 43,000ರೂ) ಮತ್ತು 12GB + 512GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 4,099 (ಸುಮಾರು 47,000ರೂ) ಬೆಲೆಯಲ್ಲಿ ಲಭ್ಯವಾಗಲಿದೆ.
ಇನ್ನು ಹಾನರ್ 80 ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ಮಾಡೆಲ್ ಆಯ್ಕೆಗೆ CNY 2,699 (ಸುಮಾರು 31,000ರೂ)ಬೆಲೆ ಹೊಂದಿದೆ. ಹಾಗೆಯೇ 12GB + 256GB ಮಾದರಿಯ ಬೆಲೆ CNY 2,999 (ಸುಮಾರು 34,000ರೂ)ಆಗಿದೆ. ಆದರೆ ಟಾಪ್-ಆಫ್-ಲೈನ್ 12GB + 512GB ಸ್ಟೋರೇಜ್ ರೂಪಾಂತರವು CNY 3,299 (ಸುಮಾರು 38,000ರೂ) ಬೆಲೆ ಪಡೆದಿದೆ. ಈ ಫೋನ್ ಬ್ಲ್ಯಾಕ್ ಜೇಡ್ ಗ್ರೀನ್, ಬ್ಲೂ ವೇವ್ಸ್, ಬ್ರೈಟ್ ಬ್ಲ್ಯಾಕ್ ಮತ್ತು ಪಿಂಕ್ ಮಾರ್ನಿಂಗ್ ಗ್ಲೋರಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
ಹಾನರ್ 80 SE ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ಮಾದರಿಗಾಗಿ CNY 2,399 (ಸುಮಾರು 27,000ರೂ) ಬೆಲೆ ಹೊಂದಿದೆ. ಇದರ 12GB + 256GB ಸ್ಟೋರೇಜ್ ಮಾದರಿಯ ಬೆಲೆ CNY 2,699 (ಸುಮಾರು 31,000ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಬ್ರೈಟ್ ಬ್ಲ್ಯಾಕ್, ಚೆರ್ರಿ ಪಿಂಕ್ ಕೋರಲ್, ಐಸ್‌ಲ್ಯಾಂಡ್ ಫ್ಯಾಂಟಸಿ ಮತ್ತು ಮೂನ್‌ಲೈಟ್ ಕ್ರಿಸ್ಟಲ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications








