Home
ಸುದ್ದಿಜಾಲ

ಹಾನರ್‌ ಸಂಸ್ಥೆಯ ಹಾನರ್‌ 8A ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಚೀನಾದ ಟೆಕ್‌ ದೈತ್ಯ ಹುವಾವೇ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಅಲ್ಲದೆ ತನ್ನ ಸಬ್‌ಬ್ರಾಂಡ್‌ ಹಾನರ್ ಸ್ಮಾರ್ಟ್‌ಫೋನ್‌ಗಳನ್ನ ಸಹ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರಾದ ಹಾನರ್‌ ಮೂಲಕ ಮತ್ತೊಂದು ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಚೀನಾದಲ್ಲಿ ಬಿಡುಗಡೆಯಾಗಿದ್ದ ಹಾನರ್ ಪ್ಲೇ 8A ಸ್ಮಾರ್ಟ್‌ಫೋನ್‌ನ ಅಪ್‌ಗ್ರೇಡ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗ್ತಿದೆ.

ಹುವಾವೇ

ಹೌದು, ಹುವಾವೇ ಕಂಪೆನಿಯ ಸಬ್‌ಬ್ರಾಂಡ್‌ ಹಾನರ್‌ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಹಾನರ್‌ 8A ಎಂದು ಹೆಸರಿಸಲಾಗಿದ್ದು, ಯುಕೆಯಲ್ಲಿ ಬಿಡುಗಡೆ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಆಪ್‌ಡೇಟ್‌ ಮಾಡಲಾದ ಹಾನರ್ 8A ಸ್ಮಾರ್ಟ್‌ಫೋನ್‌ನಲ್ಲಿ, ರಿಯರ್‌ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ನೀಡಲಾಗಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 15ರಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.09-ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಎಲ್‌ಸಿಡಿ ಪ್ಯಾನೆಲ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇಯು ವೀಡಿಯೋ ಕರೆಗಳು ಹಾಗೂ ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಉತ್ತಮ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಅಲ್ಲದೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 9.0 ಪೈ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಅನ್ನು ಒಳಗೊಂಡಿದೆ. ಇನ್ನುಳಿದ ಕ್ಯಾಮೆರಾ ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೇಗಿರಲಿದೆ ಅನ್ನೊ ಮಾಹಿತಿ ಬಹಿರಂಗವಾಗಿಲ್ಲ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫಿಚರ್ಸ್‌ಗಳಲ್ಲಿ ಟಚ್‌ ಟು ಫೋಕಸ್‌, ಡಿಜಿಟಲ್‌ ಜೂಮ್‌, ಎಲ್‌ಇಡಿ ಫ್ಲಾಶ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಅಲ್ಲದೆ ಈ ಸ್ಮಾರ್ಟ್‌ಫೋನ್‌ 3,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಿದೆ. ಅಲ್ಲದೆ ಫೇಸ್ ಅನ್ಲಾಕ್ ಅನ್ನು ಸಹ ಫೋನ್ ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯುರೋ 130 (ಸರಿಸುಮಾರು 10,800 ರೂ.) ಬೆಲೆಯನ್ನು ಹೊಂದಿರುವ ಸಾಧ್ಯತೆ ಇದ್ದು, ನೀಲಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Honor 8A 2020 seems like an upgraded version of Honor Play 8A with minor improvements.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+