ಹಾನರ್ 90 5G ಬೆಲೆಯಲ್ಲಿ ಭಾರೀ ಇಳಿಕೆ!..ಆಫರ್ ಬೆಲೆ ತಿಳಿದ್ರೆ OMG ಅಂತೀರಾ!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾಗಿರುವ ಫ್ಲಿಪ್‌ಕಾರ್ಟ್ ಸಂಸ್ಥೆಯು ಮೊಬೈಲ್‌ಗಳಿಗೆ ಏನಾದರೊಂದು ಸ್ಪೆಷಲ್ ರಿಯಾಯಿತಿ ಕೊಡುಗೆ ಲಭ್ಯ ಮಾಡಿ ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಹಾನರ್ ಮೊಬೈಲ್ ಕಂಪನಿಯ ಇತ್ತೀಚಿಗಿನ ಹಾನರ್ 90 5G ಫೋನ್ ಸಖತ್ ಡಿಸ್ಕೌಂಟ್ ಪಡೆದಿದ್ದು, ಮೊಬೈಲ್ ಪ್ರಿಯರು OMG ಎನ್ನುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಹಾನರ್ 90 5G ಸ್ಮಾರ್ಟ್‌ಫೋನ್ ಶೇ. 44% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಇನ್ನು ಈ ಮೊಬೈಲ್‌ನ 8 GB RAM + 256 GB ವೇರಿಯಂಟ್ 25,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಇದಲ್ಲದೇ ನೋ ಕಾಸ್ಟ್ ಇಎಮ್‌ಐ ಜೊತೆಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೂಡಾ ಗ್ರಾಹಕರಿಗೆ ಸಿಗಲಿವೆ.

ಈ ಫೋನಿನ ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಇದರ ಜೊತೆಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಬಲವನ್ನು ಪಡೆದಿರುವುದು ಪ್ರಮುಖ ಅಟ್ರ್ಯಾಕ್ಷನ್ ಎನಿಸಿದೆ. ಹಾಗಾದರೆ ಹಾನರ್ 90 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಹಾನರ್ 90 5G ಮೊಬೈಲ್ ಫೀಚರ್ಸ್
ಹಾನರ್ ಸಂಸ್ಥೆಯು ಈ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಜೊತೆಗೆ ಈ ಫೋನ್ 1,200 x 2,664 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಈ ಫೋನ್ 120Hz ನ ರಿಫ್ರೆಶ್ ರೇಟ್ ಸಪೋರ್ಟ್ ಸಹ ಹೊಂದಿದ್ದು, 1,600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಪಡೆದುಕೊಂಡಿದೆ.
ಹಾಗೆಯೇ ಹಾನರ್ ಕಂಪನಿಯ ಈ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್ ಒಎಸ್ 7.1 ಸಪೋರ್ಟ್ ಕೂಡಾ ಪಡೆದಿದ್ದು, ಇನ್ನು ಇದು 12GB + 256GB ಮತ್ತು 8 + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ಅದೇ ರೀತಿ ಹಾನರ್ 90 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನೆರಡು ಕ್ಯಾಮೆರಾಗಳು 12 ಮೆಗಾ ಪಿಕ್ಸಲ್ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಇನ್ನು ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನಿಡಲಾಗಿದೆ.
ಈ ದೈತ್ಯ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 66W ವೇಗದ ಚಾರ್ಜಿಂಗ್ ಅನ್ನು ಒದಗಿಸಲಾಗಿದೆ. ಇದರೊಂದಿಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ 5G, 4G, Wi-Fi 6, ಬ್ಲೂಟೂತ್ 5.2, ಜಿಪಿಎಸ್, NFC, ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಅನ್ನು ಸಪೋರ್ಟ್ ಕಾಣಬಹುದಾಗಿದೆ.
ಈ ಮೊಬೈಲ್ 8 + 256 GB ಹಾಗೂ 12 GB + 512 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಗ್ರೀನ್, ಸಿಲ್ವರ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಗ್ರಾಹಕರು ಫ್ಲಿಪ್‌ಕಾರ್ಟ್ ಮೂಲಕ ಖರೀದಿ ಮಾಡಬಹುದು.


Click it and Unblock the Notifications








