Home
ಸುದ್ದಿಜಾಲ

ಕೆಲ ದಿನಗಳ ಹಿಂದೆ ಬಿಡುಗಡೆ ಆಗಿ ಸದ್ದು ಈ ಫೋನ್‌ ಮೇಲೆ ಇದೀಗ ಭಾರಿ ಡಿಸ್ಕೌಂಟ್‌!

ಇತ್ತೀಚಿಗೆ ಭಾರತದ ಮಾರುಕಟ್ಟೆಗೆ ಹಾನರ್‌ ಕಂಪೆನಿ ರೀ ಎಂಟ್ರಿ ನೀಡಿತ್ತು. ಇದರ ಅಂಗವಾಗಿ ತನ್ನ ಹೊಸ ಹಾನರ್‌ 90 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಕೆಲವೇ ದಿನಗಳ ಹಿಂದೆಯಷ್ಟೇ ಬಿಡುಗಡೆ ಆಗಿರುವ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಇದೀಗ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದು ಮೊಬೈಲ್‌ ಪ್ರಿಯರ ಖುಷಿ ಹೆಚ್ಚಾಗುವಂತೆ ಮಾಡಿದೆ.

ಹೌದು, ಹಾನರ್‌ 90 5G ಸ್ಮಾರ್ಟ್‌ಫೋನ್‌ನ 8GB RAM + 256GB ಸ್ಟೋರೇಜ್‌ ಆಯ್ಕೆಯು ರಿಯಾಯಿತಿ ಪಡೆದುಕೊಂಡಿದೆ. ಡಿಸ್ಕೌಂಟ್‌ ಪಡೆದುಕೊಂಡಿರುವ ಕಾರಣ ಈ ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭಾರಿ ಇಳಿಕೆ ಕಂಡಿದೆ. ಇದರಿಂದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದು ಕೊಂಡವರಿಗೆ ಇದಕ್ಕಿಂತ ಬೆಸ್ಟ್‌ ಟೈಂ ಮತ್ತೊಂದಿಲ್ಲ ಅಂತಾನೇ ಹೇಳಬಹುದಾಗಿದೆ. ಹಾಗಾದ್ರೆ ಅಮೆಜಾನ್‌ ತಾಣದಲ್ಲಿ ಡಿಸ್ಕೌಂಟ್‌ ಪಡೆದ ನಂತರ ಹಾನರ್‌ 90 5G ಮೊಬೈಲ್‌ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಕೆಲ ದಿನಗಳ ಹಿಂದೆ ಬಿಡುಗಡೆ ಆಗಿ ಸದ್ದು ಈ ಫೋನ್‌ ಮೇಲೆ ಇದೀಗ ಭಾರಿ ಡಿಸ್ಕೌಂಟ್‌!

ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು?
ಹಾನರ್‌ 90 5G ಸ್ಮಾರ್ಟ್‌ಫೋನ್‌ನ 8GB RAM + 256GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ನಲ್ಲಿ 47,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಫೋನ್‌ ಮೇಲೆ 33% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಇದರ ಬೆಲೆ 31,999ರೂ ಆಗಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಂಐ, ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡಲಾಗ್ತಿದೆ. ಜೊತೆಗೆ ಎಕ್ಸ್‌ಚೆಂಜ್‌ ಆಫರ್‌ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಹಾನರ್‌ 90 5G ಡಿಸ್‌ಪ್ಲೇ ರಚನೆ
ಹಾನರ್‌ 90 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,200 x 2,664 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ನ ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 1,600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಪಡೆದುಕೊಂಡಿದೆ.

ಕೆಲ ದಿನಗಳ ಹಿಂದೆ ಬಿಡುಗಡೆ ಆಗಿ ಸದ್ದು ಈ ಫೋನ್‌ ಮೇಲೆ ಇದೀಗ ಭಾರಿ ಡಿಸ್ಕೌಂಟ್‌!

ಹಾನರ್‌ 90 5G ಪ್ರೊಸೆಸರ್‌ ಯಾವುದು?
ಹಾನರ್‌ 90 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 1 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌13 ಆಧಾರಿತ ಮ್ಯಾಜಿಕ್‌ ಒಎಸ್‌ 7.1 ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಹಾನರ್‌ 90 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಹಾನರ್‌ 90 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಕೆಲ ದಿನಗಳ ಹಿಂದೆ ಬಿಡುಗಡೆ ಆಗಿ ಸದ್ದು ಈ ಫೋನ್‌ ಮೇಲೆ ಇದೀಗ ಭಾರಿ ಡಿಸ್ಕೌಂಟ್‌!

ಹಾನರ್‌ 90 5G ಬ್ಯಾಟರಿ ಮತ್ತು ಇತರೆ
ಹಾನರ್‌ 90 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇದು 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi 6, ಬ್ಲೂಟೂತ್ 5.2, ಜಿಪಿಎಸ್‌, NFC, ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಅನ್ನು ಸಪೋರ್ಟ್ ಪಡೆದಿದೆ.

ಹಾನರ್‌ 90 5G ಬೆಲೆ ಮತ್ತು ಲಭ್ಯತೆ
ಹಾನರ್‌ 90 5G ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯು ಪ್ರಸ್ತುತ ಅಮೆಜಾನ್‌ನಲ್ಲಿ 33% ಡಿಸ್ಕೌಂಟ್‌ ಪಡೆದಿದೆ. ಆದರಿಂದ ಈ ಫೋನ್‌ 31,999ರೂ ಬೆಲೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Honor 90 5g Smartphone gets Massive discount in amazon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+