ಹಾನರ್ 90 5G ಫೋನ್ ಮೂಲಕ ಭಾರತಕ್ಕೆ ರೀ ಎಂಟ್ರಿ ಕೊಟ್ಟ ಹಾನರ್!
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಮಿಂಚಿ ಮರೆಯಾಗಿದ್ದ ಹಾನರ್ ಕಂಪೆನಿ ಇದೀಗ ರೀ ಎಂಟ್ರಿ ನೀಡಿದೆ. ಭಾರತದ ಮಾರುಕಟ್ಟೆಗೆ ಹಾನರ್ 90 5G ಸ್ಮಾರ್ಟ್‌ಫೋನ್ ಮೂಲಕ ಭರ್ಜರಿಯಾಗಿಯೇ ರೀ ಎಂಟ್ರಿ ಕೊಟ್ಟಿದೆ. ಈ ಮೂಲಕ ಭಾರತದ ಸ್ಮಾರ್ಟ್‌ಫೋನ್ ವಲಯದಲ್ಲಿ ಹೊಸ ಸಂಚಲನವನ್ನು ಕ್ರಿಯೆಟ್ ಮಾಡಿದೆ.
ಹೌದು, ಹಾನರ್ 90 5G ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಹಾನರ್ ಕಂಪೆನಿ ಅಧಿಕೃತವಾಗಿ ಭಾರತಕ್ಕೆ ಮತ್ತೆ ಬಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಅಲ್ಲದೆ ಸ್ಮಾರ್ಟ್‌ಫೋನ್ 200 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರೈಮೆರಿ ಕ್ಯಾಮೆರಾ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ 90 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್ 90 5G ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2664 x 1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 1,600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ಪಂಚ್-ಹೋಲ್ ವಿನ್ಯಾಸವನ್ನು ಪಡೆದುಕೊಂಡಿದೆ.
ಹಾನರ್ 90 5G ಪ್ರೊಸೆಸರ್ ಯಾವುದು?
ಹಾನರ್ 90 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು Adreno 644 GPU ಸಪೋರ್ಟ್ ಪಡೆದಿದ್ದು, ಆಂಡ್ರಾಯ್ಡ್ 13-ಆಧಾರಿತ ಮ್ಯಾಜಿಕ್ ಓಎಸ್ 7.1 ನೊಂದಿಗೆ ರವಾನಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಹಾನರ್ 90 5G ಕ್ಯಾಮೆರಾ ಸೆಟ್‌ಅಪ್ ಯಾವುದು?
ಹಾನರ್ 90 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಹಾನರ್ 90 5G ಬ್ಯಾಟರಿ ಮತ್ತು ಇತರೆ
ಹಾನರ್ 90 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.2, NFC, GPS ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುತ್ತದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅಕ್ಸಿಲೆರೋಮೀಟರ್ ಅನ್ನು ಒಳಗೊಂಡಿದೆ.
ಭಾರತದಲ್ಲಿ ಹಾನರ್ 90 5G ಬೆಲೆ ಮತ್ತು ಲಭ್ಯತೆ
ಹಾನರ್ 90 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 256GB ಆಯ್ಕೆಗೆ 37,999ರೂ ಬೆಲೆ ಹೊಂದಿದೆ. ಆದರೆ 12GB + 512GB ಸ್ಟೋರೇಜ್ ರೂಪಾಂತರವು 39,999ರೂ.ಬೆಲೆಯನ್ನು ಹೊಂದಿದೆ. ಆದರೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ರಮವಾಗಿ 27,999ರೂ ಮತ್ತು 29,999ರೂ.ಪರಿಚಯಾತ್ಮಕ ಬೆಲೆಯಲ್ಲಿ ಸೀಮಿತ ಅವಧಿಯ ತನಕ ಲಭ್ಯವಾಗಲಿವೆ. ಈ ಫೋನ್ ಭಾರತದಲ್ಲಿ ಸೆಪ್ಟೆಂಬರ್ 18 ರಿಂದ ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ ಸೇಲ್ ಆಗಲಿದೆ.
ಲಾಂಚ್ ಆಫರ್ ಏನಿದೆ?
ಹಾನರ್ 90 5G ಸ್ಮಾರ್ಟ್‌ಫೋನ್ ಅನ್ನು ಐಸಿಐಸಿಐ ಮತ್ತು ಎಸ್‌ಬಿಐ ಕಾರ್ಡ್ ಬಳಸಿ ಖರೀದಿಸುವ ಗ್ರಾಹಕರಿಗೆ 2,000ರೂ ರಿಯಾಯಿತಿ ದೊರೆಯಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಪ್ರಿಯರು ಈ ಫೋನ್ ಖರೀದಿಸಿದ 30 ದಿನಗಳಲ್ಲಿ ಅಗತ್ಯವಿದ್ದಲ್ಲಿ ಹ್ಯಾಂಡ್‌ಸೆಟ್ ಅನ್ನು ಎಕ್ಸ್‌ಚೇಂಜ್ ಮಾಡಿಕೊಳ್ಳಲು ಸಾಧ್ಯವಾಗಲಿದೆ.


Click it and Unblock the Notifications








