ಟೆಕ್ ವಲಯದಲ್ಲಿ ಸುನಾಮಿಯಂತೆ ಅಪ್ಪಳಿಸಿದ ಹಾನರ್‌ನ ಹೊಸ ಫೋನ್! 200MP ಕ್ಯಾಮೆರಾ ಸಾಮರ್ಥ್ಯ!
ಜಾಗತಿಕ ಮಾರುಕಟ್ಟೆಯ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಹಾನರ್ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳನ್ನು ಹಾನರ್ 90 ಮತ್ತು ಹಾನರ್ 90 ಪ್ರೊ ಎಂದು ಹೆಸರಿಸಲಾಗಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ಗಳಲ್ಲಿ ಕಾರ್ಯನಿರ್ವಹಿಸಲಿವೆ.
ಹೌದು, ಹಾನರ್ ಕಂಪೆನಿ ಹೊಸದಾಗಿ ಹಾನರ್ 90 ಮತ್ತು ಹಾನರ್ 90 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಆದರೆ ವೇಗದ ಚಾರ್ಜಿಂಗ್‌ನಲ್ಲಿ ಭಿನ್ನತೆಯನ್ನು ಹೊಂದಿವೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ 90 ಮತ್ತು ಹಾನರ್ 90 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಹಾನರ್ 90 ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಹಾನರ್ 90 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಎರಡು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಕೂಡ 1,200x 2,664 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇವುಗಳು 120Hz ನ ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1,600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ನೀಡಲಿವೆ.
ಹಾನರ್ 90 ಮತ್ತು ಹಾನರ್ 90ಪ್ರೊ ಪ್ರೊಸೆಸರ್ ವಿವರ: ಹಾನರ್ 90 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 ಪ್ರೊಸೆಸರ್ ಅನ್ನು ಹೊಂದಿದೆ. ಆದರೆ ಹಾನರ್ 90 ಪ್ರೊ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್ ವೇಗವನ್ನು ಪಡೆದಿದೆ. ಇವುಗಳು ಆಂಡ್ರಾಯ್ಡ್13 ಆಧಾರಿತ ಮ್ಯಾಜಿಕ್‌ಒಎಸ್ 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾನರ್ 90 ಮತ್ತು ಹಾನರ್ 90ಪ್ರೊ ಕ್ಯಾಮೆರಾ ಸೆಟ್‌ಅಪ್: ಹಾನರ್ 90 ಮತ್ತು ಹಾನರ್ 90ಪ್ರೊ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಹಾನರ್ 90 ಪ್ರೊ ಹೆಚ್ಚುವರಿ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಕೂಡ ಒಳಗೊಂಡಿದೆ.
ಹಾನರ್ 90 ಮತ್ತು ಹಾನರ್ 90ಪ್ರೊ ಬ್ಯಾಟರಿ ಬ್ಯಾಕ್‌ಅಪ್ ವಿವರ: ಹಾನರ್ 90 ಮತ್ತು ಹಾನರ್ 90ಪ್ರೊ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿವೆ. ಇದರಲ್ಲಿ ಹಾನರ್90 ಸ್ಮಾರ್ಟ್‌ಫೋನ್ 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ, ಹಾನರ್90ಪ್ರೊ ಸ್ಮಾರ್ಟ್‌ಫೋನ್ 90W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi 6, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿವೆ.

ಹಾನರ್ 90 ಮತ್ತು ಹಾನರ್ 90ಪ್ರೊ ಬೆಲೆ ಮತ್ತು ಲಭ್ಯತೆ: ಹಾನರ್ 90 ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಆಯ್ಕೆಗೆ CNY 2,499 (ಅಂದಾಜು 29,160ರೂ) ಬೆಲೆಯನ್ನು ಹೊಂದಿದೆ.
ಇನ್ನು ಹಾನರ್ 90 ಪ್ರೊ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಆಯ್ಕೆಗೆ CNY 3,299 (ಅಂದಾಜು 38,500ರೂ)ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು ಪ್ರಸ್ತುತ ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆಯಾಗಿದ್ದು, ಮುಂಗಡ ಬುಕ್ಕಿಂಗ್‌ಗೆ ಲಭ್ಯವಿದೆ. ಆದರೆ ಈ ಸ್ಮಾರ್ಟ್‌ಫೋನ್‌ಗಳು ಇದೇ ಜೂನ್ 7 ರಿಂದ ಮಾರಾಟಕ್ಕೆ ಬರಲಿವೆ.


Click it and Unblock the Notifications








