ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ ಹಾನರ್ 90 ಲೈಟ್! ಫೀಚರ್ಸ್ ಹೇಗಿದೆ?
ಹಾನರ್ ಕಂಪೆನಿಯ ಫೋನ್‌ಗಳು ತಮ್ಮ ಸ್ಟೈಲಿಶ್ ಲುಕ್‌ಗೆ ಹೆಸರುವಾಸಿಯಾಗಿವೆ. ವಿಭಿನ್ನ ಲುಕ್ ಹಾಗೂ ವಿನ್ಯಾಸದ ಕಾರಣಕ್ಕೆ ಮಾರುಕಟ್ಟೆಯಲ್ಲಿ ಸಖತ್ ಹೈಪ್ ಕ್ರಿಯೆಟ್ ಮಾಡಿವೆ. ಇದೇ ಹಾದಿಯಲ್ಲಿ ಇದೀಗ ಹೊಸ ಹಾನರ್ 90 ಲೈಟ್ ಮಾರುಕಟ್ಟೆಗೆ ಎಂಟ್ರಿ ನೀಡಿದ್ದು, ಎಂಟ್ರಿಯಲ್ಲೇ ಸೌಂಡ್ ಮಾಡ್ತಿದೆ.
ಹೌದು, ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ ಗ್ರ್ಯಾಂಡ್ ಎಂಟ್ರಿ ನೀಡಿದೆ. ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 35W ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ 90 ಲೈಟ್ ಡಿಸ್‌ಪ್ಲೇ ವಿವರ
ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ LTPS LCD ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದೆ.
ಹಾನರ್ 90 ಲೈಟ್ ಪ್ರೊಸೆಸರ್
ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಆಕ್ಟಾ-ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ MagicOS 7.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಹಾನರ್ 90 ಲೈಟ್ ಕ್ಯಾಮೆರಾ
ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಹಾನರ್ 90 ಲೈಟ್ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 35W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.3, NFC, GPS, OTG, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಕಂಪಾಸ್ ಅನ್ನು ಒಳಗೊಂಡಿದೆ.
ಹಾನರ್ 90 ಲೈಟ್ ಬೆಲೆ ಮತ್ತು ಲಭ್ಯತೆ
ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ ಪ್ರಸ್ತುತ ಯುರೋಪ್‌ನಲ್ಲಿ ಲಾಂಚ್ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಏಕೈಕ 8GB + 256GB RAM ಸ್ಟೋರೇಜ್ ಕಾನ್ಫಿಗರೇಶನ್ ಆಯ್ಕೆಗೆ EUR 249.99 (ಸುಮಾರು 26,210ರೂ)ಬೆಲೆಯನ್ನು ಹೊಂದಿದೆ. ಇದನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಿಡ್‌ನೈಟ್ ಬ್ಲ್ಯಾಕ್, ಟೈಟಾನಿಯಂ ಸ್ಲಿವರ್ ಮತ್ತು ಸಿಯಾನ್ ಲೇಕ್ ಬಣ್ಣ ರೂಪಾಂತರಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








