200ಎಂಪಿ ಕ್ಯಾಮೆರಾ ಸೌಲಭ್ಯದ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ಹಾನರ್ ಮೊಬೈಲ್ ಸಂಸ್ಥೆಯ ನೂತನ ಹಾನರ್ 90 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಮೊಬೈಲ್ ಪ್ರಿಯರು ಅಚ್ಚರಿಯಿಂದ ನೋಡುವಂತೆ ಮಾಡಿದೆ.
ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣದಲ್ಲಿ ಹಾನರ್ 90 5G ಮೊಬೈಲ್ ಶೇ. 21% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. ಗ್ರಾಹಕರು 8GB + 256GB ವೇರಿಯಂಟ್‌ನ ಫೋನ್ ಅನ್ನು 37,999ರೂ. ಗಳ ಬೆಲೆಯಲ್ಲಿ ಖರೀದಿಸಬಹುದು. ಅಲ್ಲದೇ ಎಕ್ಸ್‌ಚೆಂಜ್ ಆಫರ್, ಬ್ಯಾಂಕ್ ಕೊಡುಗೆ ಹಾಗೂ ಇತರೆ ಆಫರ್ ಪಡೆದುಕೊಂಡರೆ ಇನ್ನಷ್ಟು ಹೆಚ್ಚಿನ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.

ಅಂದಹಾಗೆ ಹಾನರ್ 90 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಪವರ್‌ನೊಂದಿಗೆ ಕೆಲಸ ನಿರ್ವಹಿಸಲಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾ 200 ಮೆಗಾಪಿಕ್ಸಲ್ ಸೆನ್ಸಾರ್ ಪಡೆದಿದೆ. ಇನ್ನುಳಿದಂತೆ ಹಾನರ್ 90 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಹಾನರ್ 90 5G ಸ್ಮಾರ್ಟ್‌ಫೋನ್ ಫೀಚರ್ಸ್
ಹಾನರ್ 90 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಈ ಫೋನ್ 1,200 x 2,664 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 120Hz ನ ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, 1,600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಪಡೆದುಕೊಂಡಿದೆ.

ಹಾನರ್ 90 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್ ಒಎಸ್ 7.1 ಸಪೋರ್ಟ್ ಹೊಂದಿದೆ. ಇನ್ನು ಇದು 8 + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಹಾಗೆಯೇ ಹಾನರ್ ಸಂಸ್ಥೆಯ ಈ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಹಾಗೆಯೇ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಅಲ್ಲದೇ ಹಾನರ್ 90 5G ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಪಡೆದುಕೊಂಡಿದ್ದು, ಇದಕ್ಕೆ ಸಪೋರ್ಟ್ ಆಗಿ 66W ಫಾಸ್ಟ್ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ 5G, 4G, Wi-Fi 6, ಬ್ಲೂಟೂತ್ 5.2, ಜಿಪಿಎಸ್, NFC, ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಅನ್ನು ಸಪೋರ್ಟ್ ಒಳಗೊಂಡಿದೆ.
ಇನ್ನು ಹಾನರ್ 90 5G ಮೊಬೈಲ್ 8 + 256 GB ಹಾಗೂ 12 GB + 512 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಅವಕಾಶ ಇದೆ. ಈ ಮೊಬೈಲ್ ಅನ್ನು ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್ ಗ್ರೀನ್, ಸಿಲ್ವರ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ.


Click it and Unblock the Notifications








