ಬರಲಿದೆ ಹಾನರ್‌ 9x ಲೈಟ್‌!..ಇರಲಿದೆ 48MP ಕ್ಯಾಮೆರಾ!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನ ಸೆಳೆಯಲು ಸ್ಮಾರ್ಟ್‌ಫೋನ್‌ ಕಂಪೆನಿಗಳು ಇನ್ನಿಲ್ಲದ ಕಸರತ್ತುಗಳನ್ನ ನಡೆಸುತ್ತವೆ. ಆದರೂ ಕೂಡ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಈಗಾಗ್ಲೆ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆ ಗಳಿಸಿಕೊಂಡಿರುವ ಹಾನರ್‌ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೊನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಹುವಾವೆ ಕಂಪೆನಿಯ ಸಬ್‌ಬ್ರ್ಯಾಂಡ್‌ ಆಗಿರುವ ಹಾನರ್‌ ಕಂಪೆನಿ ಹೊಸ ಹಾನರ್‌9x ಲೈಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಹಾನರ್ 9x ಮತ್ತು ಹಾನರ್ 9x ಪ್ರೊ ನಂತರ ಹಾನರ್ 9x ಆವೃತ್ತಿಯಲ್ಲಿ ಬರುತ್ತಿರುವ ಸ್ಮಾರ್ಟ್‌ಫೋನ್‌ ಹಾನರ್ 9x ಲೈಟ್ ಆಗಿದೆ. ಈಗಾಗ್ಲೆ ಮಾರುಕಟ್ಟೆಯಲ್ಲಿ ಹಾನರ್ 9x ಆವೃತ್ತಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಕೊಂಡಿರುವ ಹಾನರ್‌ ಹಾನರ್ 9x ಲೈಟ್ ಮೂಲಕ ಈ ಬಾರಿಯು ಸೌಂಡ್‌ ಮಾಡೋ ಸೂಚನೆ ನೀಡಿದೆ.

ಹಾನರ್ 9x ಲೈಟ್ ವಿಶೇಷತೆಯೇನು

ಹಾನರ್ 9x ಲೈಟ್ ವಿಶೇಷತೆಯೇನು

ಹಾನರ್‌ ಕಂಪೆನಿ ತನ್ನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಟೀಸರ್‌ ಪ್ರಕಾರ ಹಾನರ್ 9x ಲೈಟ್ ಸ್ಮಾರ್ಟ್‌ಫೋನ್‌ "ಎಕ್ಸ್‌ಟ್ರಾಆರ್ಡಿನರಿ ಫೋಟೋಗ್ರಾಫರ್" ಮತ್ತು "48 ಎಂಪಿ ಡ್ಯುಯಲ್ ಕ್ಯಾಮೆರಾದೊಂದಿಗೆ" ಬರಲಿದೆ ಎಂದು ಹೇಳಲಾಗ್ತಿದೆ. ಇನ್ನು ಟೀಸರ್‌ನಲ್ಲಿಯೇ ಎಕ್ಸ್‌ಟ್ರಾಆರ್ಡಿನರಿ ಫೋಟೋಗ್ರಾಫರ್ ಎಂಬ ಟ್ಯಾಗ್‌ಲೈನ್‌ ಇರುವುದರಿಂದ ಈ ಸ್ಮಾರ್ಟ್‌ಫೋನ್‌ ಉತ್ತಮ ಕ್ಯಾಮೆರಾ ಸೆಟ್‌ಆಪ್‌ ಹೊಂದಿರಲಿದೆ ಎಂದು ಊಹಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಮೊದಲನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಎರಡನೇ ಕ್ಯಾಮೆರಾ ಡೆಪ್ತ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗ್ತಿದ್ದು, ಮೆಗಾ ಪಿಕ್ಸೆಲ್‌ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಸೆಲ್ಫಿ ಕ್ಯಾಮೆರಾ ಕೂಡ ಇರಲಿದೆಯಾದರೂ ಅದರ ಬಗ್ಗೆ ಯಾವುದೇ ಅಧಿಕರತ ಮಾಹಿತಿ ಬಹಿರಂಗಗೊಂಡಿಲ್ಲ.

ಪ್ರೊಸೆಸರ್‌ಮಾದರಿ

ಪ್ರೊಸೆಸರ್‌ಮಾದರಿ

ಸದ್ಯ ಹಾನರ್‌ 9x ಲೈಟ್‌ ಸ್ಮಾರ್ಟ್‌ಫೋನ್‌ ಯಾವ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಅನ್ನೊ ಮಾಹಿತಿ ತಿಳಿದುಬಂದಿಲ್ಲ. ಆದರೆ ಲಭ್ಯವಿರುವ ಲೀಕ್ ವದಂತಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್‌ ಕಿರಿನ್ 710F ಅಥವಾ ಕಿರಿನ್ 710 ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಸ್ಟೋರೇಜ್‌ ಸಾಮರ್ಥ್ಯದ ಬಗ್ಗೆ ಕೂಡ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಸ್ಮಾರ್ಟ್‌ಫೋನ್‌ ವಿನ್ಯಾಸ

ಸ್ಮಾರ್ಟ್‌ಫೋನ್‌ ವಿನ್ಯಾಸ

ಹಾನರ್ 9x ಲೈಟ್ ಸ್ಮಾರ್ಟ್‌ಫೋನ್ ಗೂಗಲ್ ಪ್ಲೇ ಸ್ಟೋರ್ ಅನ್ನು ಬೆಂಬಲಿಸುವ ಫೋನ್‌ ಆಗಿರಲಿದೆ ಎಂದು ಹೇಳಲಾಗ್ತಿದೆ. ಇದು ಗೂಗಲ್ ಮೊಬೈಲ್ ಸರ್ವೀಸಸ್ (GMS)ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ಮತ್ತು ಬಲಭಾಗದಲ್ಲಿ ಪವರ್ ಬಟನ್ ಮತ್ತು ವಾಲ್ಯೂಮ್ ರಾಕರ್ ಎರಡನ್ನೂ ನೀಡಲಾಗಿದೆ ಅನ್ನೊದು ಟೀಸರ್‌ನಲ್ಲಿ ಗೊತ್ತಾಗಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಮಾರುಕಟ್ಟೆಗ ಬರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Honor 9X Lite is also confirmed to support Google Play Store and other Google services.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X