ಹಾನರ್ 9x ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ!
ಜಾಗತಿಕ ಮಾರುಕಟ್ಟೆಯಲ್ಲಿ ಎರಡನೇ ದೊಡ್ಡ ಸ್ಮಾರ್ಟ್‌ಫೋನ್ ತಯಾರಿಕ ಸಂಸ್ಥೆ ಆಗಿರುವ ಹುವಾವೇ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಇನ್ನು ಹುವಾವೇ ತನ್ನ ಸಬ್‌ಬ್ರ್ಯಾಂಡ್ ಹಾನರ್‌ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಹುವಾವೇ ಸಬ್‌ಬ್ರ್ಯಾಂಡ್ ಆಗಿರುವ ಹಾನರ್ ತನ್ನ ವಿವಿಧ ಶ್ರೇಣಿಯ ಸ್ಮಾರ್ಟ್‌ಪೋನ್‌ಗಳಿಂದ ಗ್ರಾಹಕರ ಮನಗೆದ್ದಿದೆ. ಸದ್ಯ ಇದೀಗ ಕಂಪನಿಯು ತನ್ನ ಬಹುನಿರೀಕ್ಷಿತ ಹಾನರ್9x ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸಾದ್ಯತೆ ಇದೆ.

ಹೌದು, ಹುವಾವೇ ಸಬ್ ಬ್ರ್ಯಾಂಡ್ ಹಾನರ್ ತನ್ನ ಹಾನರ್ 9xಲೈಟ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫಿನ್‌ಲ್ಯಾಂಡ್‌ನಲ್ಲಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಬಿಗ್ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕಿರಿನ್ 710 ಚಿಪ್‌ಸೆಟ್ ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಹಾನರ್ 9x ಲೈಟ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ಬೆಜೆಲ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು 396 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇಯ ಬಾಡಿ ಟು ರೇಶಿಯೋ 84.23% ಅನುಪಾತವನ್ನ ಒಳಗೊಂಡಿದೆ. ಅಲ್ಲದೆ ಮಲ್ಟಿ-ಟಚ್ ಅನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕಿರಿನ್ 710 ಚಿಪ್‌ಸೆಟ್ ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದೆ. ಅಲ್ಲದೆ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಹಾನರ್ 9x ಲೈಟ್ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಕ್ಯಾಮೆರಾ ಸೆಟ್‌ಅಪ್ ನಲ್ಲಿ ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಡಿಜಿಟಲ್ ಜೂಮ್, ಆಟೋ ಫ್ಲ್ಯಾಷ್, ಫೇಸ್ ಡಿಟೇಕ್ಷನ್, ಟಚ್ ಟು ಫೋಕಸ್ ಫೀಚರ್ಸ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 3,750mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್ ಅನ್ನು ಹೊಂದಿದೆ. ಜೊತೆಗೆ 10W ವೇಗದ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಸದ್ಯ ಇದರ ಬೆಲೆ € 199 ಕ್ಕೆ ನಿಗದಿಪಡಿಸಲಾಗಿದ್ದು, ಭಾರತದಲ್ಲಿ ಸುಮಾರು 16,530 ರೂ.ಗೆ ಮಾರಾಟ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು ಮತ್ತು ಹಸಿರು ಬಣ್ಣದ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




