ಭಾರತದ ಮಾರುಕಟ್ಟೆಯಲ್ಲಿ ಹಾನರ್ 9x ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇದಲ್ಲದೆ ಪ್ರತಿನಿತ್ಯವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೆ ನಡೆಯುತ್ತಲೆ ಇದೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ. ಇದರಲ್ಲಿ ಚೀನಾದ ಟೆಕ್ ದೈತ್ಯ ಹುವಾವೇ ಕೂಡ ಒಂದಾಗಿದೆ. ಸದ್ಯ ಜಾಗತಿಕವಾಗಿ ಜನಪ್ರಿಯತೆಯನ್ನ ಹೊಂದಿರುವ ಹುವಾವೇ ತನ್ನ ಸಬ್‌ಬ್ರ್ಯಾಂಡ್ ಹಾನರ್ ಬ್ರ್ಯಾಂಡ್ ಅಡಿಯಲ್ಲಿ ಸಹ ಸ್ಮಾರ್ಟ್‌ಫೋನ್‌ಗಳನ್ನ ಸಹ ಬಿಡುಗಡೆ ಮಾಡಿದೆ. ಇದೀಗ ಹಾನರ್ 9 ಎಕ್ಸ್ ಪ್ರೊ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಹೌದು, ಚೀನಾದ ಟೆಕ್ ದೈತ್ಯ ಹುವಾವೇ ತನ್ನ ಸಬ್‌ಬ್ರ್ಯಾಂಡ್ ಹಾನರ್ ಅಡಿಯಲ್ಲಿ ಹಾನರ್ 9 ಎಕ್ಸ್ ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಹುವಾವೇ ಮೊಬೈಲ್ ಸರ್ವೀಸಸ್ (ಎಚ್‌ಎಂಎಸ್) ಅನ್ನು ಬಳಸುವ ದೇಶದ ಮೊದಲ ಫೋನ್ ಆಗಿದೆ. ಇದು ಗೂಗಲ್ ಮೊಬೈಲ್ ಸೇವೆಗಳಿಗೆ ಬದಲಿಯಾಗಿ ಲಬ್ಯವಾಗುವ ಸೇವೆಯಾಗಿದೆ. ಇನ್ನು ಈ ಎಚ್‌ಎಂಎಸ್ ಇರುವಿಕೆಯು ಫೋನ್‌ನಲ್ಲಿರುವ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹಾನರ್ 9 ಎಕ್ಸ್ ಪ್ರೊ ಹುವಾವೇ ಆಪ್ ಗ್ಯಾಲರಿಯನ್ನು ಹೊಂದಿರುತ್ತದೆ ಎಂದರ್ಥವಾಗಿದೆ. ಇದಲ್ಲದೆ ಹಾನರ್ 9 ಎಕ್ಸ್ ಪ್ರೊ ಸ್ಮಾರ್ಟ್‌ಫೋನ್ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಮತ್ತು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಹಾನರ್ 9 ಎಕ್ಸ್ ಪ್ರೊ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.59-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಐಪಿಎಸ್ ಡಿಸ್‌ಪ್ಲೇ ವಿನ್ಯಾಸ ಹೊಂದಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಸ್ಕ್ರೀನ್-ಟು-ಬಾಡಿ 92% ಅನುಪಾತವನ್ನು ಹೊಂದಿದೆ. ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಸಹ ಹೊಂದಿದೆ,

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕಿರಿನ್ 810 SoC ಪ್ರೊಸೆಸರ್ ಅನ್ನು ಹೊಂದಿದೆ, ಅಲ್ಲದೆ ಆಂಡ್ರಾಯ್ಡ್9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 256GB ಆಂತರಿಕ ಸಂಗ್ರಹಣಾ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಜಿಪಿಯು ಟರ್ಬೊ 3.0 ತಂತ್ರಜ್ಞಾನವೂ ಇದ್ದು, ಇದು ಕೃತಕ ಬುದ್ಧಿಮತ್ತೆ (AI) ಕ್ರಮಾವಳಿಗಳಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ವರ್ಧಿತ ಚಿತ್ರ ಸಂಸ್ಕರಣೆ ಮತ್ತು ಶಕ್ತಿಯ ದಕ್ಷತೆಯನ್ನು ನೀಡಲಿದೆ.

ಕ್ಯಾಮೆರಾ ವಿನ್ಯಾಸ
ಹಾನರ್ 9x ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದ್ದು, 120 ಡಿಗ್ರಿ ಹೊಂದಿದೆ ಫೀಲ್ಡ್-ಆಫ್-ವ್ಯೂ ಅನ್ನು ಒಳಗೊಂಡಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪಾಪ್-ಅಪ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಹಾನರ್ 9x ಪ್ರೊ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಒಂದು ದಿನದವರೆಗೆ ಪವರ್ ಬಾಳಿಕೆ ಇರುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ USB ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಭಾರತದಲ್ಲಿ ಹಾನರ್ 9x ಪ್ರೊ ಸ್ಮಾರ್ಟ್‌ಫೋನ್ ಬೆಲೆ 17,999 ರೂ.ಆಗಿದ್ದು, ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ. ಇನ್ನು ವಿಶೇಷ ಆರಂಭಿಕ ಪ್ರವೇಶ ಮಾರಾಟದ ಭಾಗವಾಗಿ ಇದೇ ಮೇ ತಿಂಗಳ ನಂತರ ಇದು ಮೊದಲ ಬಾರಿಗೆ ಮಾರಾಟವಾಗಲಿದೆ. ಅಲ್ಲದೆ ಮೇ 19 ರಿಂದ ಮೇ 22 ರವರೆಗೆ ಫ್ಲಿಪ್‌ಕಾರ್ಟ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಗ್ರಾಹಕರು ವಿಶೇಷ ಆರಂಭಿಕ ಪ್ರವೇಶ ಮಾರಾಟದಲ್ಲಿ ಭಾಗವಹಿಸಬಹುದಾಗಿದೆ. ಜೊತೆಗೆ ಕಂಪನಿಯು ಆರಂಭಿಕ ಮಾರಾಟದಲ್ಲಿ ಭಾಗವಹಿಸುವ ಗ್ರಾಹಕರಿಗೆ 3,000 ಮತ್ತು ಆರು ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಗಳನ್ನ ನೀಡಿದೆ.


Click it and Unblock the Notifications




