Home
ಸುದ್ದಿಜಾಲ

Honor 9x pro: ಶೀಘ್ರದಲ್ಲೇ ಹಾನರ್ 9x ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾದ ಟೆಕ್‌ ದೈತ್ಯ ಹುವಾವೇ ಕಂಪೆನಿಯ ಸಬ್‌ಬ್ರ್ಯಾಂಡ್‌ ಹಾನರ್‌ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಹಾನರ್‌ ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಲು ಸಿದ್ದತೆ ನಡೆಸಿದೆ. ಅತಿ ಕಡಿಮೆ ಬೆಲೆಯಲ್ಲಿ ಪಾಪ್‌-ಅಪ್‌ ಸೆಲ್ಫಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ ಪರಿಚಯಿಸಲು ಮುಂದಾಗಿದೆ.

ಹುವಾವೇ

ಹೌದು, ಹುವಾವೇ ಸಬ್‌ಬ್ರ್ಯಾಂಡ್‌ ಹಾನರ್‌ ತನ್ನ ಬಜೆಟ್‌ ಬೆಲೆಯ ಪಾಪ್‌-ಅಪ್‌ ಸೆಲ್ಫಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ., ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ಹಾನರ್ 9 ಎಕ್ಸ್ ಪ್ರೊ ಎಂದು ಹೆಸರಿಸಲಾಗಿದ್ದು, ಇದೇ ಮೇ 12 ರಂದು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್ ಕಿರಿನ್ 810 ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದೆ ಎಂದಯ ಹೇಳಲಾಗಿದ್ದು, ಇದರ ವಿನ್ಯಾಸ ಹೇಗಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿತ್ತು. ಸದ್ಯ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಹಾನರ್ 9 ಎಕ್ಸ್ ಪ್ರೊ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 6.59-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ಎಚ್‌ಡಿ ಡಿಸ್‌ಪ್ಕೇ ಆಗಿದ್ದು, 391PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರುತ್ತದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಪಾಪ್‌ಅಪ್‌ ಸೆಲ್ಫಿ ಕ್ಯಾಮೆರಾವನ್ನ ಹೊಂದಿರುವುದರಿಂದ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕಿರಿನ್ 810 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಹಾನರ್ 9 ಎಕ್ಸ್ ಪ್ರೊ ಸ್ಟ್ಯಾಂಡರ್ಡ್ 9 ಎಕ್ಸ್ ಹೌಸಿಂಗ್ 16 ಎಂಪಿ ಸೆನ್ಸಾರ್‌ನಂತೆಯೇ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಸೆಟಪ್ ಅನ್ನು ಸಹ ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ 4,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 15,000- ರೂ. 20,000 ರೂ ಗಳ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

Best Mobiles in India

English summary
Honor 9X Pro is expected to launch in India on May 12 and it is expected to cost between Rs 15,000 to Rs 20,000.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+