Home
ಸುದ್ದಿಜಾಲ

ಭಾರತದಲ್ಲಿ ಹಾನರ್‌ ರೀ ಎಂಟ್ರಿಗೆ ದಿನಾಕ ನಿಗದಿ.. ಹೇಗಿರಲಿದೆ ಹೊಸ ಸ್ಮಾರ್ಟ್‌ಫೋನ್‌!

ಹಾನರ್‌ ಕಂಪೆನಿ ಭಾರತದ ಮೊಬೈಲ್‌ ವಲಯಕ್ಕೆ ರೀ ಎಂಟ್ರಿ ನೀಡುತ್ತಿದೆ. ಈಗಾಗಲೇ ಹಾನರ್‌ 90 5G ಸ್ಮಾರ್ಟ್‌ಫೋನ್‌ ಮೂಲಕ ಭಾರತದಲ್ಲಿ ಮತ್ತೊಂದು ಇನ್ನಿಂಗ್ಸ್‌ ಆರಂಭಿಸುವುದಾಗಿ ಹಾನರ್‌ ಹೇಳಿತ್ತು. ಇದೀಗ ಹಾನರ್‌ 90 5G ರಿಲೀಸ್‌ ಯಾವಾಗ ಅನ್ನೋ ಪ್ರಶ್ನೆಗೆ ತೆರೆಬಿದ್ದಿದೆ. ಯಾಕಂದ್ರೆ ಹಾನರ್‌ 90 5G ಲಾಂಚ್‌ ಡೇಟ್‌ ಬಹಿರಂಗವಾಗಿದೆ.

ಹೌದು, ಹಾನರ್‌ 90 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ದಿನಾಂಕ ಬಹಿರಂಗಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 14ರಂದು ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ಹಾನರ್‌ ಕಂಪೆನಿ ದೃಡಪಢಿಸಿದೆ. ಹಾಗಾದ್ರೆ ಹಾನರ್‌ 90 5G ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಹಾನರ್‌ ರೀ ಎಂಟ್ರಿಗೆ ದಿನಾಕ ನಿಗದಿ.. ಹೇಗಿರಲಿದೆ ಹೊಸ ಸ್ಮಾರ್ಟ್‌ಫೋನ್

ಹಾನರ್‌ 90 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್‌ 90 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್-ಕರ್ವ್ಡ್ ವಿನ್ಯಾಸವನ್ನು ಹೊಂದಿದ್ದು, 1200 x 2664 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ.

ಹಾನರ್‌ 90 5G ಪ್ರೊಸೆಸರ್‌ ಯಾವುದು?
ಹಾನರ್‌ 90 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 7 Gen 1SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು MagicOS 7.1-ಆಧಾರಿತ ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ. ಈ ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಾನರ್‌ 90 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಹಾನರ್‌ 90 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಹಾನರ್‌ 90 5G ಬ್ಯಾಟರಿ ಮತ್ತು ಇತರೆ
ಹಾನರ್‌ 90 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ.

ಭಾರತದಲ್ಲಿ ಹಾನರ್‌ 90 5G ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಹಾನರ್‌ 90 5G ಸ್ಮಾರ್ಟ್‌ಫೋನ್‌ ಅಂದಾಜು 35,000ರೂ. ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದು ಅಮೆಜಾನ್‌ ಮೂಲಕ ಸೇಲ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 14 ರಂದು ಮಧ್ಯಾಹ್ನ 12:30 ಕ್ಕೆ (ಸ್ಥಳೀಯ ಸಮಯ) ಘೋಷಿಸಲಾಗುವುದು ಎಂದು ದೃಢಪಡಿಸಿದೆ. ಇದು ಎಮರಾಲ್ಡ್ ಗ್ರೀನ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

ಇನ್ನು ಹಾನರ್‌ ಕಂಪೆನಿ ಇತ್ತೀಚಿಗೆ ಹಾನರ್‌ 90 ಲೈಟ್‌ ಸ್ಮಾರ್ಟ್‌ಫೋನ್‌ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಆಕ್ಟಾ-ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

Best Mobiles in India

English summary
Honor company confirmed the launch date for the Honor 90 5G in India: honor - Kannada gizbot
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+