ಹಾನರ್ ಡೇಸ್ ಆಫರ್: ಈ ಎರಡು ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್!
ಹಾನರ್ ಮೊಬೈಲ್ ಸಂಸ್ಥೆಯು ಇದೀಗ ಹಾನರ್ ಡೇಸ್ ಮಾರಾಟ ಮೇಳವನ್ನು ಆಯೋಜಿಸಿದೆ. ಇದೇ ಮಾರ್ಚ್ 3 ರಿಂದ ಪ್ರಾರಂಭವಾಗಿರುವ ಈ ಸೇಲ್ ಇದೇ ಮಾರ್ಚ್ 7 ರ ವರೆಗೂ ಚಾಲ್ತಿ ಇರಲಿದೆ. ಅಂದಹಾಗೆ ಈ ಮಾರಾಟ ಮೇಳದಲ್ಲಿ ಸಂಸ್ಥೆಯು ಹಾನರ್ 90 5G ಫೋನ್ ಹಾಗೂ ಹಾನರ್ X9b 5G ಸ್ಮಾರ್ಟ್‌ಫೋನ್ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ.
ಹೌದು, ಜನಪ್ರಿಯ ಹಾನರ್ ಬ್ರ್ಯಾಂಡ್ ಈಗ ಹಾನರ್ ಡೇಸ್ ಸೇಲ್ ಲೈವ್ ಮಾಡಿದೆ. ಈ ಮೇಳದಲ್ಲಿ ಎಕ್ಸ್‌ಚೇಂಜ್ ಕೊಡುಗೆ, ಬ್ಯಾಂಕ್ ಆಫರ್, ನೇರ ರಿಯಾಯಿತಿ ಹೀಗೆ ಲಭ್ಯ ಇರುವ ಎಲ್ಲ ಕೊಡುಗೆ ಪಡೆದುಕೊಂಡರೆ, ಹಾನರ್ X9b 5G ಫೋನಿನ ಬೇಸ್ ವೇರಿಯಂಟ್ 22,999ರೂ. ಗಳಿಗೆ ಖರೀದಿಸಬಹುದು. ಹಾಗೆಯೇ ಹಾನರ್ 90 5G ಫೋನಿನ 8GB ವೇರಿಯಂಟ್ 19999ರೂ. ಗಳ ದರದಲ್ಲಿ ಲಭ್ಯವಾಗಲಿದೆ.

ಇನ್ನು ಹಾನರ್ 90 5G ಫೋನಿನ 12GB ವೇರಿಯಂಟ್ ಅನ್ನು 21999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಗ್ರಾಹಕರು ಫೋನ್‌ಗಳನ್ನು www.explorehonor.com ಮತ್ತು ಅಮೆಜಾನ್ ತಾಣದಲ್ಲಿ ಖರೀದಿ ಮಾಡಬಹುದಾಗಿದೆ. ಹಾಗಾದರೇ ಹಾನರ್ X9b 5G ಹಾಗೂ ಹಾನರ್ 90 5G ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹಾನರ್ X9b 5G ಫೋನಿನ ಫೀಚರ್ಸ್
ಹಾನರ್ X9b 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.
ಹಾಗೆಯೇ ಹಾನರ್ X9b 5G ಮೊಬೈಲ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ.
ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಹೊಂದಿದೆ. ಈ ಮೊಬೈಲ್ 5,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು 35W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಹಾನರ್ 90 5G ಫೀಚರ್ಸ್
ಹಾನರ್ 90 5G ಮೊಬೈಲ್ ಫೀಚರ್ಸ್ ಹಾನರ್ 90 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದರ ಡಿಸ್‌ಪ್ಲೇಯು 1,200 x 2,664 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಹಾಗೆಯೇ ಈ ಫೋನ್ 120Hz ನ ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, 1,600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್ ಒಎಸ್ 7.1 ಸಪೋರ್ಟ್ ಹೊಂದಿದೆ. ಇನ್ನು ಇದು 8 + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಅಲ್ಲದೇ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಒಳಗೊಂಡಿದ್ದು, ಇದಕ್ಕೆ ಸಪೋರ್ಟ್ ಆಗಿ 66W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.


Click it and Unblock the Notifications